ಯೆರೆಮೀಯ 37:21 - ಕನ್ನಡ ಸತ್ಯವೇದವು J.V. (BSI)21 ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ದಿನವಹಿ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆ ಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು, ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆಗ ಅರಸ ಚಿದ್ಕೀಯನು ಅಂತೆಯೆ ಅಪ್ಪಣೆಕೊಡಲು, ಯೆರೆಮೀಯನನ್ನು ರಾಜ್ಯದ ಕಾರಾಗೃಹದ ಅಂಗಳಕ್ಕೆ ಸ್ಥಳಾಂತರಿಸಲಾಯಿತು. ರೊಟ್ಟಿ ಮಾರುಕಟ್ಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದುಕೊಡುತ್ತಿದ್ದರು. ನಗರದ ರೊಟ್ಟಿಯೆಲ್ಲ ತೀರುವ ತನಕ ಹಾಗೆ ಮಾಡುತ್ತಿದ್ದರು. ಯೆರೆಮೀಯನು ರಾಜ್ಯದ ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಡಬೇಕೆಂದು ಮತ್ತು ಅವನಿಗೆ ಪೇಟೆಯಿಂದ ರೊಟ್ಟಿಯನ್ನು ತಂದುಕೊಡಬೇಕೆಂದು ಆಜ್ಞೆ ಮಾಡಿದನು. ನಗರದಲ್ಲಿ ರೊಟ್ಟಿ ಇರುವವರೆಗೆ ಯೆರೆಮೀಯನಿಗೆ ರೊಟ್ಟಿಯನ್ನು ಕೊಡಲಾಯಿತು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಬಂಧಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಅರಸನಾದ ಚಿದ್ಕೀಯನು ಯೆರೆಮೀಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ, ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವವರೆಗೆ, ಅವನಿಗೆ ರೊಟ್ಟಿಗಾರರ ಬೀದಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿ ಕೊಡಬೇಕೆಂದು ಆಜ್ಞಾಪಿಸಿದನು; ಹಾಗೆಯೇ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ನಿಂತನು. ಅಧ್ಯಾಯವನ್ನು ನೋಡಿ |