Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:3 - ಕನ್ನಡ ಸತ್ಯವೇದವು J.V. (BSI)

3 ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ, ಇವರ ಮೂಲಕ - ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ ಇವರ ಮೂಲಕ, “ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೀಗಿರುವಲ್ಲಿ ಅರಸ ಚಿದ್ಕೀಯನು ಶೆಲೆಮ್ಯನ ಮಗ ಯೆಹೂಕಲನನ್ನು ಮತ್ತು ಯಾಜಕ ಮಾಸೇಯನ ಮಗ ಚೆಫನ್ಯನನ್ನು ಯೆರೆಮೀಯನ ಬಳಿಗೆ ಕಳಿಸಿ, “ನಮಗಾಗಿ ನಮ್ಮ ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸು” ಎಂದು ವಿನಂತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ರಾಜನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನು ಮತ್ತು ಮಾಸೇಯನ ಮಗನಾದ ಯಾಜಕ ಚೆಫನನನ್ನು ಒಂದು ಸಂದೇಶದೊಂದಿಗೆ ಯೆರೆಮೀಯನಲ್ಲಿಗೆ ಕಳುಹಿಸಿದನು. ಯೆರೆಮೀಯನಿಗೆ ಅವರು ತಂದ ಸಂದೇಶ ಹೀಗಿತ್ತು: “ಯೆರೆಮೀಯನೇ, ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ, ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ, ಪ್ರವಾದಿಯಾದ ಯೆರೆಮೀಯನ ಬಳಿಗೆ ಕಳುಹಿಸಿ, “ನಮಗೋಸ್ಕರ ನಮ್ಮ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸು,” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:3
20 ತಿಳಿವುಗಳ ಹೋಲಿಕೆ  

ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಮಂದಿ ದ್ವಾರಪಾಲಕರು,


ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು - ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು ಎಂಬದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನೀನು ಯೆರೂಸಲೇವಿುನಲ್ಲಿರುವ ಎಲ್ಲಾ ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚೆಫನ್ಯನಿಗೂ ಸಮಸ್ತ ಯಾಜಕರಿಗೂ ನಿನ್ನ ಹೆಸರಿನ ಮೇಲೆ ಕಳುಹಿಸಿದ ಕಾಗದದಲ್ಲಿ -


ನನ್ನ ಕಡೆಗೆ ಮುಖ ತಿರುಗಿಸದೆ ಬೆನ್ನುಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ - ಎದ್ದು ನಮ್ಮನ್ನುದ್ಧರಿಸು ಎಂದು ಮೊರೆಯಿಡುವರು.


ಅರಸನು ಆ ಮನುಷ್ಯನಿಗೆ - ನಿನ್ನ ದೇವರಾದ ಯೆಹೋವನು ಪ್ರಸನ್ನನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂದೆಗೆಯುವದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು ಎಂದು ಹೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.


ಅದಕ್ಕೆ ಸೀಮೋನನು - ನೀವು ಹೇಳಿರುವ ಸಂಗತಿಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು.


ಯೆರೆಮೀಯನು ಸಮಸ್ತ ಜನರಿಗೆ - ಯೆಹೋವನು ಇಂತೆನ್ನುತ್ತಾನೆ - ಪಟ್ಟಣದಲ್ಲಿ ನಿಲ್ಲುವವನು ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮರೆಹೊಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗಿ ಬದುಕುವನು;


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ - ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು;


ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪವು ಕೂಡಿತು; ಆದದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ ಎಂದು ವಿಜ್ಞಾಪಿಸಲು ಅವನು -


ಆದದರಿಂದ ಜನರು ಮೋಶೆಯ ಬಳಿಗೆ ಬಂದು - ನಾವು ನಿನಗೂ ಯೆಹೋವನಿಗೂ ವಿರೋಧವಾಗಿ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕೆಂದು ಬೇಡಿಕೊಂಡರು.


ಆದರೂ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷವಿುಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು ಅಂದನು.


ಈ ಭಯಂಕರವಾದ ಗುಡುಗೂ ಕಲ್ಲಿನ ಮಳೆಯೂ ಬಹು ಹೆಚ್ಚಾದವು. ಇವುಗಳನ್ನು ನಿಲ್ಲಿಸುವದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ದೇಶವನ್ನು ಬಿಟ್ಟು ಹೊರಡುವದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ, ನಿಮ್ಮನ್ನು ತಡೆಯುವದಿಲ್ಲ ಎಂದು ಹೇಳಿದನು.


ಅದಕ್ಕೆ ಫರೋಹನು - ಒಳ್ಳೇದು, ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಯಜ್ಞಮಾಡುವಂತೆ ನಿಮಗೆ ಅಪ್ಪಣೆ ಕೊಡುತ್ತೇನೆ; ಆದರೆ ದೂರ ಹೋಗಕೂಡದು; ನನಗೋಸ್ಕರ ಪ್ರಾರ್ಥನೆಮಾಡಿರಿ ಅಂದನು.


ಆಗ ಫರೋಹನು ಮೋಶೆ ಆರೋನರನ್ನು ಕರಿಸಿ - ನೀವು ಯೆಹೋವನನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು; ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.


ಇದಕ್ಕೆ ಯೆಹೋವನು - ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು, ನಿಜನಿಜವಾಗಿ ನಿನ್ನ ಶತ್ರುವನ್ನು ಕೇಡಿನಲ್ಲಿಯೂ ಇಕ್ಕಟ್ಟಿನಲ್ಲಿಯೂ ನಿನಗೆ ಶರಣಾಗತನನ್ನಾಗಿ ಮಾಡುವೆನು.


ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನನ್ನನ್ನು ವಿಚಾರಿಸುವದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ - ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವದು.


ಅರಸನಾದ ಚಿದ್ಕೀಯನು ಅವನನ್ನು ಕರತರಿಸಿ ಯೆಹೋವನಿಂದ ದೈವೋಕ್ತಿಯು ದೊರೆಯಿತೋ ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು - ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿ ಬೀಳುವಿ ಅಂದನು.


ಆಗ ಸಕಲ ಸೇನಾಪತಿಗಳೂ ಕಾರೇಹನ ಮಗನಾದ ಯೋಹಾನಾನನೂ ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು