Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:5 - ಕನ್ನಡ ಸತ್ಯವೇದವು J.V. (BSI)

5 ಆಗ ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತ್ತು; ಇದನ್ನು ಕೇಳಿ ಯೆರೂಸಲೇಮನ್ನು ಮುತ್ತಿದ್ದ ಕಸ್ದೀಯರು ಬಿಟ್ಟು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತ್ತು; ಇದನ್ನು ಕೇಳಿ ಯೆರೂಸಲೇಮನ್ನು ಮುತ್ತಿದ್ದ ಕಸ್ದೀಯರು ಬಿಟ್ಟು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಷ್ಟರಲ್ಲಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತ್ತು. ಈ ಸಂಗತಿಯನ್ನು ಕೇಳಿ, ಜೆರುಸಲೇಮನ್ನು ಈಗಾಗಲೆ ಮುತ್ತಿದ್ದ ಬಾಬಿಲೋನಿಯದ ಸೈನಿಕರು ಅದನ್ನು ಬಿಟ್ಟುಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅದಲ್ಲದೆ ಆಗ ಫರೋಹನ ಸೈನ್ಯವು ಈಜಿಪ್ಟಿನಿಂದ ಯೆಹೂದದ ಕಡೆಗೆ ಹೊರಟಿತ್ತು. ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವ ಉದ್ದೇಶದಿಂದ ಬಾಬಿಲೋನ್ ಸೈನ್ಯವು ಜೆರುಸಲೇಮ್ ನಗರಕ್ಕೆ ಮುತ್ತಿಗೆ ಹಾಕಿತ್ತು. ಆಗ ಈಜಿಪ್ಟಿನ ಸೈನ್ಯವು ತಮ್ಮ ಕಡೆ ಬರುತ್ತಿದೆ ಎಂಬ ಸಮಾಚಾರವು ಬಂದಿತು. ಅದನ್ನು ಕೇಳಿ ಬಾಬಿಲೋನಿನ ಸೈನ್ಯವು ಈಜಿಪ್ಟಿನ ಸೈನ್ಯವನ್ನೆದುರಿಸಲು ಜೆರುಸಲೇಮನ್ನು ಬಿಟ್ಟುಹೋಗಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ, ಯೆರೂಸಲೇಮನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:5
7 ತಿಳಿವುಗಳ ಹೋಲಿಕೆ  

ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಬಹುಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಇವನು ಸಮೃದ್ಧನಾಗಿಯೇ ಇರುವನೋ? ಇಂಥಾ ಕೃತ್ಯಗಳನ್ನು ನಡಿಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?


ಕಸ್ದೀಯರ ಸೈನ್ಯವು ಫರೋಹನ ಸೈನ್ಯಕ್ಕೆ ಭಯಪಟ್ಟು ಯೆರೂಸಲೇಮನ್ನು ಬಿಟ್ಟುಹೋದ ಮೇಲೆ ಯೆರೆಮೀಯನು ಬೆನ್ಯಾಮೀನ್ ಸೀಮೆಯಲ್ಲಿ


ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಪ್ರಾಣ ಹುಡುಕುವ ಶತ್ರುಗಳ ಕೈಗೆ, ಅಂದರೆ ನಿಮ್ಮನ್ನು ಬಿಟ್ಟುಹೋಗಿರುವ ಬಾಬೆಲಿನ ಅರಸನ ಕೈಗೆ ಕೊಡುವೆನು.


ಬಾಬೆಲಿನ ಅರಸನು ಐಗುಪ್ತದ ಹಳ್ಳಕ್ಕೂ ಯೂಫ್ರೇಟೀಸ್ ನದಿಗೂ ಮಧ್ಯದಲಿದ್ದ ಐಗುಪ್ತ ರಾಜನ ಎಲ್ಲಾ ದೇಶವನ್ನು ಸ್ವಾಧೀನಮಾಡಿಕೊಂಡನು. ಅಂದಿನಿಂದ ಐಗುಪ್ತದ ಅರಸನು ತನ್ನ ದೇಶದಿಂದ ಈಚೆಗೆ ಬರಲೇ ಇಲ್ಲ.


ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನನ್ನನ್ನು ವಿಚಾರಿಸುವದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ - ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವದು.


ಹೀಗಿರಲು ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು -


ಫರೋಹನೂ ಅವನ ಮಹಾಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹುಜನರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಹಾಕಿ ಬುರುಜುಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು