ಯೆರೆಮೀಯ 38:1 - ಕನ್ನಡ ಸತ್ಯವೇದವು J.V. (BSI)1 ಯೆರೆಮೀಯನು ಸಮಸ್ತ ಜನರಿಗೆ - ಯೆಹೋವನು ಇಂತೆನ್ನುತ್ತಾನೆ - ಪಟ್ಟಣದಲ್ಲಿ ನಿಲ್ಲುವವನು ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮರೆಹೊಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗಿ ಬದುಕುವನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ ಇವರು ಯೆರೆಮೀಯನ ಮಾತುಗಳನ್ನು ಕೇಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೆರೆಮೀಯನು ಜನರೆಲ್ಲರಿಗೆ, “ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: ನಗರದಲ್ಲಿ ನಿಲ್ಲುವವನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ಸಾಯುವನು. ನಗರವನ್ನು ಬಿಟ್ಟುಹೋಗಿ ಬಾಬಿಲೋನಿಯರನ್ನು ಮರೆಹೋಗುವವನು ಬದುಕುವನು. ತನ್ನ ಪ್ರಾಣವೊಂದನ್ನಾದರೂ ಬಾಚಿಕೊಂಡು ಹೋಗಿ ಬದುಕುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆರೆಮೀಯನು ಪ್ರವಾದಿಸುತ್ತಿರುವುದನ್ನು ಕೆಲವು ಜನ ರಾಜಾಧಿಕಾರಿಗಳು ಕೇಳಿಸಿಕೊಂಡರು. ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ ಇವರುಗಳು ಅವನ ಮಾತನ್ನೆಲ್ಲಾ ಕೇಳಿಸಿಕೊಂಡರು. ಯೆರೆಮೀಯನು ಎಲ್ಲಾ ಜನರಿಗೆ ಈ ಸಂದೇಶವನ್ನು ಹೇಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮತ್ತಾನನ ಮಗ ಶೆಫಟ್ಯ, ಪಷ್ಹೂರನ ಮಗ ಗೆದಲ್ಯ, ಶೆಲೆಮ್ಯನ ಮಗ ಯೂಕಲ ಹಾಗೂ ಮಲ್ಕೀಯನ ಮಗ ಪಷ್ಹೂರ, ಇವರು ಯೆರೆಮೀಯನು ಜನರೆಲ್ಲರಿಗೆ ಹೇಳುತ್ತಿದ್ದುದನ್ನು ಕೇಳುತ್ತಿದ್ದರು. ಅಧ್ಯಾಯವನ್ನು ನೋಡಿ |