ಯೆರೆಮೀಯ 38:10 - ಕನ್ನಡ ಸತ್ಯವೇದವು J.V. (BSI)10 ಅರಸನು ಇದನ್ನು ಕೇಳಿ ಕೂಷ್ಯನಾದ ಎಬೆದ್ಮೆಲೆಕನಿಗೆ - ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡುಹೋಗಿ ಪ್ರವಾದಿಯಾದ ಯೆರೆಮೀಯನು ಸಾಯವದರೊಳಗಾಗಿ ಅವನನ್ನು ಬಾವಿಯಿಂದ ಎತ್ತಿಸು ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅರಸನು ಇದನ್ನು ಕೇಳಿ ಕೂಷ್ಯನಾದ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡುಹೋಗಿ ಪ್ರವಾದಿಯಾದ ಯೆರೆಮೀಯನು ಸಾಯುವುದರೊಳಗಾಗಿ ಅವನನ್ನು ಬಾವಿಯಿಂದ ಎತ್ತಿ ರಕ್ಷಿಸು” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇದನ್ನು ಕೇಳಿದ ಅರಸನು ಸುಡಾನಿನ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿ ಆಳುಗಳನ್ನು ಕರೆದುಕೊಂಡು ಹೋಗಿ ಪ್ರವಾದಿ ಯೆರೆಮೀಯನು ಸಾಯುವ ಮೊದಲೇ, ಅವನನ್ನು ಬಾವಿಯಿಂದ ಎತ್ತಿಸು,” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆಗ ರಾಜನಾದ ಚಿದ್ಕೀಯನು ಇಥಿಯೋಪಿಯದವನಾದ ಎಬೆದ್ಮೆಲೆಕನಿಗೆ, “ಅರಮನೆಯಿಂದ ಮೂರು ಜನರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು. ಯೆರೆಮೀಯನನ್ನು ಅವನು ಸಾಯುವ ಮುಂಚೆ ಬಾವಿಯಿಂದ ಮೇಲೆತ್ತು” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡು ಹೋಗಿ, ಪ್ರವಾದಿಯಾದ ಯೆರೆಮೀಯನನ್ನು ಅವನು ಸಾಯುವುದಕ್ಕಿಂತ ಮುಂಚೆ ಬಾವಿಯೊಳಗಿಂದ ಮೇಲಕ್ಕೆತ್ತು,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |