ಯೆರೆಮೀಯ 38:15 - ಕನ್ನಡ ಸತ್ಯವೇದವು J.V. (BSI)15 ಯೆರೆಮೀಯನು ಚಿದ್ಕೀಯನಿಗೆ - ನಾನು ನಿನಗೆ ತಿಳಿಸಿದರೆ ನನ್ನನ್ನು ಸಾಯಿಸಿಯೇ ಸಾಯಿಸುವಿ ಅಲ್ಲವೇ? ಆಲೋಚನೆಹೇಳಿದರೂ ನೀನು ಕೇಳುವದಿಲ್ಲ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಎನ್ನಲು ಯೆರೆಮೀಯನು ಚಿದ್ಕೀಯನಿಗೆ, “ನಾನು ನಿನಗೆ ತಿಳಿಸಿದರೆ ನನ್ನನ್ನು ಸಾಯಿಸಿಯೇ ಸಾಯಿಸುವಿ ಅಲ್ಲವೇ? ಆಲೋಚನೆ ಹೇಳಿದರೂ ನೀನು ಕೇಳುವುದಿಲ್ಲ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಯೆರೆಮೀಯನು ಚಿದ್ಕೀಯನಿಗೆ, “ನಾನು ತಮಗೆ ಇದ್ದದ್ದನ್ನು ಇದ್ದಹಾಗೆ ಹೇಳಿದರೆ ತಾವು ನನ್ನನ್ನು ಕೊಂದುಹಾಕುವುದು ನಿಶ್ಚಯವಲ್ಲವೆ? ನಾನು ತಮಗೆ ಬುದ್ಧಿವಾದ ಹೇಳಿದರೆ ತಾವು ಕೇಳುವುದಿಲ್ಲ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅದಕ್ಕೆ ಯೆರೆಮೀಯನು, “ನಾನು ಉತ್ತರಕೊಟ್ಟರೆ ನೀನು ಬಹುಶಃ ನನ್ನನ್ನು ಕೊಂದುಬಿಡುವೆ, ಸಲಹೆ ಕೊಟ್ಟರೆ ನೀನು ನನ್ನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳುವದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಯೆರೆಮೀಯನು ಚಿದ್ಕೀಯನಿಗೆ, “ನಾನು ನಿನಗೆ ತಿಳಿಸಿದರೆ, ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವುದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ, ನೀನು ನನ್ನನ್ನು ಕೇಳುವುದಿಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |