Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:17 - ಕನ್ನಡ ಸತ್ಯವೇದವು J.V. (BSI)

17 ಯೆರೆಮೀಯನು ಚಿದ್ಕೀಯನಿಗೆ - ಸೇನಾಧೀಶ್ವರ ಸ್ವಾವಿುಯೂ ಇಸ್ರಾಯೇಲ್ಯರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ - ನೀನು ಬಾಬೆಲಿನ ಅರಸನ ಸರದಾರರನ್ನು ಮರೆಹೊಕ್ಕರೆ ನಿನ್ನ ಪ್ರಾಣವುಳಿಯುವದು, ಈ ಪಟ್ಟಣವೂ ಬೆಂಕಿಯಿಂದ ಸುಡದು, ನೀನೂ ನಿನ್ನ ಮನೆತನದವರೂ ಬದುಕುವಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಯೆರೆಮೀಯನು ಚಿದ್ಕೀಯನಿಗೆ, “ಸೇನಾಧೀಶ್ವರ ಸ್ವಾಮಿಯೂ ಇಸ್ರಾಯೇಲರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಬಾಬೆಲಿನ ಅರಸನ ಸರದಾರರನ್ನು ಮೊರೆಹೊಕ್ಕರೆ ನಿನ್ನ ಪ್ರಾಣ ಉಳಿಯುವುದು, ಈ ಪಟ್ಟಣವೂ ಬೆಂಕಿಯಿಂದ ಸುಟ್ಟು ಹೋಗದು, ನೀನೂ ನಿನ್ನ ಮನೆತನದವರೂ ಬದುಕುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ಯೆರೆಮೀಯನು, “ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲರ ದೇವರೂ ಆದ ಸ್ವಾಮಿ ಹೀಗೆನ್ನುತ್ತಾರೆ: ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳ ಮೊರೆಹೊಕ್ಕರೆ ತಮ್ಮ ಪ್ರಾಣ ಉಳಿಯುವುದು. ಈ ನಗರ ಬೆಂಕಿ ಇಂದ ಸುಟ್ಟುಹೋಗದು, ತಾವೂ ತಮ್ಮ ಮನೆಯವರೂ ಮನೆತನದವರೂ ಬದುಕುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ಯೆರೆಮೀಯನು ರಾಜನಾದ ಚಿದ್ಕೀಯನಿಗೆ ಹೀಗೆಂದನು: “ಇಸ್ರೇಲರ ದೇವರಾದ ಮತ್ತು ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಬಾಬಿಲೋನಿನ ರಾಜನ ಅಧಿಕಾರಿಗಳಿಗೆ ಶರಣಾಗತನಾದರೆ ನಿನ್ನ ಪ್ರಾಣವನ್ನು ಉಳಿಸಲಾಗುವುದು ಮತ್ತು ಜೆರುಸಲೇಮ್ ನಗರವನ್ನು ಸುಟ್ಟುಹಾಕಲ್ಪಡುವುದಿಲ್ಲ. ನೀನೂ ಬದುಕುವೆ ಮತ್ತು ನಿನ್ನ ಕುಟುಂಬದವರೂ ಬದುಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಯೆರೆಮೀಯನು ಚಿದ್ಕೀಯನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀನು ನಿಶ್ಚಯವಾಗಿ ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ, ನಿನ್ನ ಪ್ರಾಣವು ಬದುಕುವುದು. ಈ ಪಟ್ಟಣವು ಬೆಂಕಿಯಿಂದ ಸುಡಲಾಗುವುದಿಲ್ಲ. ನೀನೂ, ನಿನ್ನ ಮನೆಯವರೂ ಬದುಕುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:17
19 ತಿಳಿವುಗಳ ಹೋಲಿಕೆ  

ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು - ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ.


ಬಾಬೆಲಿನ ಅರಸನು ಈ ಪಟ್ಟಣವನ್ನು ಆಕ್ರವಿುಸುವನು; ಅದು ಅವನ ಸೈನ್ಯದ ವಶವಾಗುವದು ಖಂಡಿತ ಎಂದು ಸಾರುತ್ತಿರುವಾಗ


ಅವರ ಕಡೆಗೆ ಕಿವಿಗೊಡಲೇ ಬಾರದು; ಬಾಬೆಲಿನ ಅರಸನ ಅಡಿಯಾಳಾಗಿರಿ, ಬದುಕುವಿರಿ;


ನೇರ್ಗಲ್‍ಸರೆಚರ್, ಸಮ್ಗರ್‍ನೆಬೋ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್‍ಸರೆಚರ್, ಅಂತು ಬಾಬೆಲಿನ ಅರಸನ ಸಕಲ ಸರದಾರರೂ ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಆಸೀನರಾದರು.


ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿ ಪರಿವಾರದವರು ಸೇನಾಪತಿಗಳು ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು; ಅವನು ಇವನನ್ನು ತನ್ನ ಆಳಿಕೆಯ ಎಂಟನೆಯ ವರುಷದಲ್ಲಿ ಸೆರೆಹಿಡಿದನು.


ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ತಳ್ಳುವೆನು; ಸೇನಾಧೀಶ್ವರ ದೇವರೆಂಬ ಯೆಹೋವನು ಇದನ್ನು ನುಡಿದಿದ್ದಾನೆ.


ಸೇನಾಧೀಶ್ವರನಾದ ದೇವರೇ, ಅಭಿಮುಖನಾಗಬೇಕು; ನೀನು ಪರಲೋಕದಿಂದ ಕಟಾಕ್ಷಿಸಿ ಈ ದ್ರಾಕ್ಷಾಲತೆಯನ್ನು ಪರಾಂಬರಿಸು.


ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರಿಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.


[ಜನರು -] ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲ್‍ದೇವರೂ ಇಸ್ರಾಯೇಲ್ಯರ ಶರಣನೂ ಆಗಿದ್ದಾನೆ, ತನ್ನ ಸೇವಕನಾದ ದಾವೀದನ ಮನೆಯನ್ನು ತನ್ನ ಸನ್ನಿಧಿಯಲ್ಲಿ ಸ್ಥಿರವಾಗಿ ಇಟ್ಟುಕೊಳ್ಳುತ್ತಾನೆ ಎಂದು ನಿನ್ನ ನಾಮವನ್ನು ಕೊಂಡಾಡಲಿ.


ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ.


ಇಸ್ರಾಯೇಲ್‍ದೇವರ ವಿಧಿಗಳನ್ನು ಗೌರವಿಸಿದವರೆಲ್ಲರೂ ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು ನನ್ನನ್ನು ಕೂಡಿಕೊಂಡರು. ನಾನು ಸಂಧ್ಯಾನೈವೇದ್ಯಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕೂತುಕೊಂಡಿದ್ದೆನು;


ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿವಿುತ್ತ ನನಗೆ ಹಿತವಾಗುವದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು ಎಂದು ಹೇಳಿದನು.


ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರುಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರುಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.


ಯಾವ ಜನಾಂಗ, ಯಾವ ರಾಜ್ಯ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೋ ಆ ಜನಾಂಗವನ್ನು ನಾನು ಖಡ್ಗ ಕ್ಷಾಮವ್ಯಾಧಿಗಳಿಂದ ದಂಡಿಸುತ್ತಾ ಬಂದು ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು. ಇದು ಯೆಹೋವನ ನುಡಿ.


ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ - ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವದು.


ಆಹಾ, ಇಸ್ರಾಯೇಲಿನ ದೇವರ ಮಹಿಮಾದ್ಭುತದರ್ಶನವು ಬೈಲುಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು.


ಹೀಗಿರಲು ಸೇನಾಧೀಶ್ವರಸ್ವಾವಿುಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ - ಈ ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವದೇಕೆ? ಈ ದುರಾಚಾರದ ನಿವಿುತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು