Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:3 - ಕನ್ನಡ ಸತ್ಯವೇದವು J.V. (BSI)

3 ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ, ಇವರು ಅವನ ಮಾತುಗಳನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬಾಬೆಲಿನ ಅರಸನು ಈ ಪಟ್ಟಣವನ್ನು ಆಕ್ರಮಿಸುವನು; ಅದು ಅವನ ಸೈನ್ಯದ ವಶವಾಗುವುದು ಖಂಡಿತ” ಎಂದು ಸಾರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮತ್ತಾನನ ಮಗ ಶೆಫತ್ಯ, ಪಷ್ಹೂರನ ಮಗ ಗೆದಲ್ಯ, ಸೆಲೆಮ್ಯನ ಮಗ ಯೂಕಲ, ಹಾಗೂ ಮಲ್ಕೀಯನ ಮಗ ಪಷ್ಹೂರ ಇವರು ಮೇಲೆ ಹೇಳಿದ ಮಾತುಗಳನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ಹೀಗೆನ್ನುತ್ತಾನೆ: ‘ಈ ಜೆರುಸಲೇಮ್ ನಗರವನ್ನು ಖಂಡಿತವಾಗಿಯೂ ಬಾಬಿಲೋನ್ ರಾಜನ ಸೈನಿಕರ ಕೈಗೆ ಒಪ್ಪಿಸಲಾಗುವುದು. ಅವನು ಈ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಬಾಬಿಲೋನಿನ ಅರಸನು ಈ ನಗರವನ್ನು ಆಕ್ರಮಿಸುವನು. ಇದು ಅವನ ವಶವಾಗುವುದು ನಿಶ್ಚಯ,’ ಎಂದು ಯೆಹೋವ ದೇವರು ಸಾರುತ್ತಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:3
7 ತಿಳಿವುಗಳ ಹೋಲಿಕೆ  

ಮೇಲಿಗಲ್ಲ ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವದು, ಅವನು ಸುಟ್ಟು ಬಿಡುವನು; ಇದು ಯೆಹೋವನ ನುಡಿ.


ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಈ ಪಟ್ಟಣದೊಳಗೆ ಕೂಡಿಹಾಕುವೆನು.


ಸೇನಾಧೀಶ್ವರನಾದ ಯೆಹೋವನು ದಾವೀದನ ಸಿಂಹಾಸನಾರೂಢನಾದ ಅರಸನ ವಿಷಯವಾಗಿಯೂ ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸಹೋದರರಾದ ಈ ಪಟ್ಟಣದ ಸಕಲನಿವಾಸಿಗಳ ವಿಷಯವಾಗಿಯೂ ಇಂತೆನ್ನುತ್ತಾನೆ -


ನೀನು ಬಾಬೆಲಿನ ಅರಸನ ಸರದಾರರನ್ನು ಮರೆಹೊಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವದು. ಅವರು ಅದನ್ನು ಬೆಂಕಿಯಿಂದ ಸುಟ್ಟುಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ ಎಂದು ಹೇಳಿದನು.


ಪಟ್ಟಣದಲ್ಲಿ ನಿಲ್ಲುವವನು ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವನು; ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮರೆಹೊಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.


ಕಸ್ದೀಯರು ಪುನಃ ಮತ್ತೆ ಬಂದು ಈ ಪಟ್ಟಣವನ್ನು ಪ್ರತಿಭಟಿಸಿ ಆಕ್ರವಿುಸಿ ಬೆಂಕಿಯಿಂದ ಸುಟ್ಟುಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು