Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:5 - ಕನ್ನಡ ಸತ್ಯವೇದವು J.V. (BSI)

5 ಅದಕ್ಕೆ ಅರಸನಾದ ಚಿದ್ಕೀಯನು - ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ; ಅರಸನು ನಿಮಗೆ ಅಡ್ಡ ಬಂದು ಏನೂ ಮಾಡಬಲ್ಲವನಲ್ಲ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದಕ್ಕೆ ಅರಸನಾದ ಚಿದ್ಕೀಯನು, “ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ; ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದಕ್ಕೆ ಅರಸ ಚಿದ್ಕೀಯನು, “ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ. ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ರಾಜನಾದ ಚಿದ್ಕೀಯನು, “ಯೆರೆಮೀಯನು ನಿಮ್ಮ ಅಧಿನದಲ್ಲಿದ್ದಾನೆ. ನೀವು ಏನು ಬೇಕಾದರೂ ಮಾಡಿ” ಎಂದು ಆ ಅಧಿಕಾರಿಗಳಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಅರಸನಾದ ಚಿದ್ಕೀಯನು, “ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:5
10 ತಿಳಿವುಗಳ ಹೋಲಿಕೆ  

ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಯೆಹೋವನೇ ಕೆಡುಕರಿಗೆ ಮುಯ್ಯಿತೀರಿಸಲಿ ಎಂದು ಹೇಳಿದನು.


ಮನುಷ್ಯನ ಭಯ ಉರುಲು; ಯೆಹೋವನ ಭರವಸ ಉದ್ಧಾರ.


ಅದಕ್ಕೆ ದಾವೀದನು - ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ನೀವು ಈಹೊತ್ತು ನನ್ನನ್ನು ಅಕೃತ್ಯಕ್ಕೆ ಪ್ರೇರಿಸುವವರಾಗಿದ್ದೀರಿ. ಇಂಥ ದಿವಸದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವದು ಸರಿಯೋ? ನಾನು ಇಸ್ರಾಯೇಲ್ಯರ ಅರಸನೆಂಬದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು ಎಂದು ನುಡಿದನು.


ಆಗ ಆಕೀಷನು ದಾವೀದನಿಗೆ - ನೀನು ಒಳ್ಳೆಯವನೆಂದು ನನಗೆ ಗೊತ್ತದೆ; ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುತ್ತೀ; ಆದರೆ ಫಿಲಿಷ್ಟಿಯಪ್ರಭುಗಳು - ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದೆಂದು ಹೇಳುತ್ತಾರಲ್ಲಾ;


ಸೌಲನು ಸಮುವೇಲನಿಗೆ - ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು.


ನಾನೋ ನಿಮ್ಮ ಕೈಯಲ್ಲಿದ್ದೇನಲ್ಲಾ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವದನ್ನು ನನಗೆ ಮಾಡಿರಿ.


ಅರಸನಾದ ಚಿದ್ಕೀಯನು ಅವನನ್ನು ಕರತರಿಸಿ ಯೆಹೋವನಿಂದ ದೈವೋಕ್ತಿಯು ದೊರೆಯಿತೋ ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು - ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿ ಬೀಳುವಿ ಅಂದನು.


ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ - ನೀನು ನಿತ್ಯವೂ ಭಜಿಸುವ ದೇವರು ನಿನ್ನನ್ನುದ್ಧರಿಸಲಿ ಎಂದು ಹರಸಿದನು.


ಕೂಡಲೆ ಬಂಡೆಯನ್ನು ತಂದು ಗವಿಯ ಬಾಯನ್ನು ಮುಚ್ಚಿದರು; ದಾನಿಯೇಲನ ಗತಿಯು ಬೇರೆಯಾಗದಂತೆ ರಾಜನು ತನ್ನ ಮುದ್ರೆಯಿಂದಲೂ ತನ್ನ ಮುಖಂಡರ ಮುದ್ರೆಯಿಂದಲೂ ಅದಕ್ಕೆ ಮೊಹರುಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು