Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:7 - ಕನ್ನಡ ಸತ್ಯವೇದವು J.V. (BSI)

7 ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಕೂಷ್ಯನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ಕೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಕೂಷ್ಯನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಸುಡಾನಿನವನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಅಧಿಕಾರಿಗಳು ಯೆರೆಮೀಯನನ್ನು ಬಾವಿಗೆ ಹಾಕಿದ ಸಂಗತಿಯು ಎಬೆದ್ಮೆಲೆಕನೆಂಬ ಮನುಷ್ಯನ ಕಿವಿಗೆ ಬಿತ್ತು. ಎಬೆದ್ಮೆಲೆಕನು ಇಥಿಯೋಪಿಯದವನಾಗಿದ್ದು ಅರಮನೆಯಲ್ಲಿ ಕಂಚುಕಿಯಾಗಿದ್ದನು. ರಾಜನಾದ ಚಿದ್ಕೀಯನು ಬೆನ್ಯಾಮೀನ್ ಊರ ಬಾಗಲಲ್ಲಿ ಕುಳಿತಿದ್ದನು. ಎಬೆದ್ಮೆಲೆಕನು ಅರಮನೆಯನ್ನು ಬಿಟ್ಟು ಬೆನ್ಯಾಮೀನ್ ಊರಹೆಬ್ಬಾಗಿಲಿನ ಹತ್ತಿರ ಕುಳಿತಿದ್ದ ರಾಜನಾದ ಚಿದ್ಕೀಯನ ಹತ್ತಿರ ಬಂದು ಹೀಗೆ ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಅರಸನು ಮನೆಯಲ್ಲಿರುವ ಕಂಚುಕಿಯಾದ ಕೂಷ್ಯನಾದ ಎಬೆದ್ಮೆಲೆಕನು ಅವರು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದರೆಂದು ಕೇಳಿದಾಗ, ಅರಸನು ಬೆನ್ಯಾಮೀನನ ಬಾಗಿಲಲ್ಲಿ ಕೂತಿರಲಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:7
22 ತಿಳಿವುಗಳ ಹೋಲಿಕೆ  

ಬೆನ್ಯಾಮೀನಿನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆಕೊಡುತ್ತಿದ್ದು ಪ್ರವಾದಿಯಾದ ಆ ಯೆರೆಮೀಯನನ್ನು ಹಿಡಿದು ನೀನು ಕಸ್ದೀಯರನ್ನು ಮರೆಹೊಗಲು ಹೋಗುತ್ತಿದ್ದೀ ಎಂದು ಹೇಳಿದನು.


ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇವಿುನಿಂದ ಬಾಬೆಲಿಗೆ ಸೆರೆ ಒಯ್ದಿದ್ದ ಸಕಲಜನರಿಗೂ


ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥವಾದಿಯನ್ನು ದ್ವೇಷಿಸುತ್ತೀರಿ.


ಅವರ ಮಾತನ್ನು ಕೇಳದೆಹೋದರೆ ತಂದೆತಾಯಿಗಳು ಅವನನ್ನು ಹಿಡಿದು ಊರುಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ -


ಈ ಪ್ರಕಾರ ಕಡೆಯವರು ಮೊದಲಿನವರಾಗುವರು, ಮೊದಲಿನವರು ಕಡೆಯವರಾಗುವರು ಎಂದು ಹೇಳಿದನು.


ನನ್ನ ಒಡಂಬಡಿಕೆಯನ್ನು ಮೀರಿದ ಯೆಹೂದದ ಪ್ರಧಾನರು, ಯೆರೂಸಲೇವಿುನ ಪ್ರಧಾನರು, ಕಂಚುಕಿಗಳು, ಯಾಜಕರು, ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು,


ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸೀತೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು.


ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರ ಪಡುವವು.


ಅವನು ಯೆಹೋಯಾಖೀನನನ್ನೂ ಅವನ ತಾಯಿ ಹೆಂಡತಿಯರು ಕಂಚುಕಿಗಳು


ಅಂಥ ಪಟ್ಟಣಕ್ಕೆ ಓಡಿಹೋದವನು ಮೊದಲು ಊರಬಾಗಲಲ್ಲೇ ನಿಂತುಕೊಂಡು ಅಲ್ಲಿನ ಹಿರಿಯರಿಗೆ ತನ್ನ ಸಂಗತಿಯನ್ನು ತಿಳಿಯಪಡಿಸಲಿ. ಅವರು ಅವನನ್ನು ಊರೊಳಗೆ ಸೇರಿಸಿಕೊಂಡು ಅವನ ವಾಸಕ್ಕೆ ಸ್ಥಳಕೊಡಲಿ.


ಯೆಹೋವನನ್ನು ಅವಲಂಬಿಸಿದ ವಿದೇಶೀಯನು - ಯೆಹೋವನು ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಅಗಲಿಸುವನು ಎಂದು ಮಾತಾಡದಿರಲಿ; ಮತ್ತು ನಪುಂಸಕನು - ಅಯ್ಯೋ, ನಾನು ಗೊಡ್ಡುಮರ ಎಂದು ಅಂದುಕೊಳ್ಳದಿರಲಿ.


ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.


ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕಪ್ರವಾದಿಗಳಿಗೆ - ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ ಎಂದು ಹೇಳಿದ ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು -


ಅವನು ಅರಮನೆಯಿಂದ ಹೊರಟು ಬೆನ್ಯಾಮೀನಿನ ಬಾಗಿಲಿನಲ್ಲಿ ಕೂತುಕೊಂಡಿದ್ದ ಅರಸನ ಬಳಿಗೆ ಹೋಗಿ -


ಆಗ ದೇಶವು ಗೆಬದಿಂದ ಯೆರೂಸಲೇವಿುಗೆ ತೆಂಕಲಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತ ಇದ್ದ ಕಡೆಯೇ ಎತ್ತರದಲ್ಲಿ ನಿಂತಿರುವದು.


ಕೊಲೆಪಾತಕರು ನಿರ್ದೋಷಿಯನ್ನು ದ್ವೇಷಿಸುವರು; ಯಥಾರ್ಥವಂತರ ಪ್ರಾಣಕ್ಕೂ ಹೊಂಚುಹಾಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು