ಯೆರೆಮೀಯ 38:9 - ಕನ್ನಡ ಸತ್ಯವೇದವು J.V. (BSI)9 ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ ಎಂದು ಅರಿಕೆಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವುದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ” ಎಂದು ಅರಿಕೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನನ್ನೊಡೆಯಾ, ಅರಸರೇ, ಈ ಜನರು ಪ್ರವಾದಿ ಯೆರೆಮೀಯನಿಗೆ ಮಾಡಿರುವುದೆಲ್ಲ ದುಷ್ಟಕಾರ್ಯವೇ ಸರಿ. ಅವನನ್ನು ಬಾವಿಯಲ್ಲಿ ಹಾಕಿದ್ದಾರೆ. ಆಹಾರವಿಲ್ಲದೆ ಅವನು ಬಿದ್ದಲ್ಲೇ ಸಾಯುವುದು ಖಚಿತ. ಏಕೆಂದರೆ ನಗರದಲ್ಲಿ ರೊಟ್ಟಿಯೆಲ್ಲಾ ತೀರಿಹೋಗಿದೆ,” ಎಂದು ಅರಿಕೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ನನ್ನ ಒಡೆಯನಾದ ಅರಸನೇ, ಈ ಮನುಷ್ಯರು ಬಾವಿಯಲ್ಲಿ ಹಾಕಿದ ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ; ಏಕೆಂದರೆ ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ,” ಎಂದನು. ಅಧ್ಯಾಯವನ್ನು ನೋಡಿ |