ಯೆರೆಮೀಯ 39:1 - ಕನ್ನಡ ಸತ್ಯವೇದವು J.V. (BSI)1 ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಒಂಭತ್ತನೆಯ ವರುಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಲ್ಲಿ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ಸಕಲ ಸೈನ್ಯಸಮೇತ ಬಂದು ಜೆರುಸಲೇಮನ್ನು ಮುತ್ತಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಜೆರುಸಲೇಮನ್ನು ಹೀಗೆ ವಶಪಡಿಸಿಕೊಳ್ಳಲಾಯಿತು: ಚಿದ್ಕೀಯನು ಯೆಹೂದದ ರಾಜನಾಗಿ ಆಳುತ್ತಿದ್ದ ಒಂಭತ್ತನೇ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಇಡೀ ಸೈನ್ಯದೊಂದಿಗೆ ಜೆರುಸಲೇಮಿನ ಮೇಲೆ ಧಾಳಿ ಮಾಡಿದನು. ಅದನ್ನು ವಶಪಡಿಸಿಕೊಳ್ಳುವದಕ್ಕಾಗಿ ಅವನು ಆ ನಗರವನ್ನು ಮುತ್ತಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೂದದ ಅರಸನಾದ ಚಿದ್ಕೀಯನ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯದೊಂದಿಗೆ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದನ್ನು ಮುತ್ತಿಗೆ ಹಾಕಿದರು. ಅಧ್ಯಾಯವನ್ನು ನೋಡಿ |