Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:12 - ಕನ್ನಡ ಸತ್ಯವೇದವು J.V. (BSI)

12 ಅವನನ್ನು ಕರೆಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು ಎಂದು ಅಪ್ಪಣೆಕೊಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಅವನನ್ನು ಕರೆಯಿಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವುದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಇವನನ್ನು ಕರೆದುಕೊಂಡುಹೋಗಿ ಚೆನ್ನಾಗಿ ನೋಡಿಕೊ. ಯಾವ ಹಾನಿಯನ್ನು ಮಾಡಕೂಡದು. ಬೇಡುವುದನ್ನೆಲ್ಲ ಕೊಡು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಯೆರೆಮೀಯನನ್ನು ಪತ್ತೆಹಚ್ಚಿ ಅವನ ಕ್ಷೇಮದ ಬಗ್ಗೆ ಎಚ್ಚರಿಕೆವಹಿಸಿರಿ, ಅವನಿಗೆ ನೋವಾಗದಂತೆ ನೋಡಿಕೊಳ್ಳಿ. ಅವನು ಕೇಳಿದ್ದನ್ನೆಲ್ಲ ಕೊಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಅವನನ್ನು ಚೆನ್ನಾಗಿ ನೋಡಿಕೋ, ಅವನಿಗೆ ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಹೇಗೆ ಹೇಳುವನೋ, ಹಾಗೆಯೇ ಅವನಿಗೆ ಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:12
12 ತಿಳಿವುಗಳ ಹೋಲಿಕೆ  

ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ ಅವನ ಶತ್ರುಗಳನ್ನೂ ವಿುತ್ರರನ್ನಾಗಿ ಮಾಡುವನು.


ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವದು ಸರಿಯೋ ಒಳ್ಳೆದೋ ಆ ಕಡೆಗೆ ಹೋಗು ಎಂದು ಹೇಳಿದನು.


ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ನೀರಿನ ಕಾಲುವೆಗಳಂತೆ ಇವೆ; ತನಗೆ ಬೇಕಾದ ಕಡೆಗೆ ತಿರುಗಿಸುತ್ತಾನೆ.


ಅಲ್ಲಿ ದೇವರು ಅವನ ಸಂಗಡ ಇದ್ದು ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯಾಗಿ ಇಟ್ಟನು.


ಶತ್ರುವಶವಾಗಿ ಸೆರೆಗೆ ಹೋದರೂ ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವದು; ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.


ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರಿಗಿ ಬರಮಾಡುವೆನು; ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವದಿಲ್ಲ.


ನಿನ್ನ ದೃಷ್ಟಿಯು ಧನದ ಮೇಲೆ ಎರಗುತ್ತದೋ? ಧನವು ಅಷ್ಟರೊಳಗೆ ಮಾಯವಾಗುವದು; ಆಕಾಶದ ಕಡೆಗೆ ಹಾರುವ ಹದ್ದಿನಂತೆ ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.


ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು; ಹೌದು, ಕ್ರೂರರ ಕೈಯಿಂದ ರಕ್ಷಿಸುವೆನು.


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನ್, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್‍ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳು


ಇದಕ್ಕೆ ಯೆಹೋವನು - ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು, ನಿಜನಿಜವಾಗಿ ನಿನ್ನ ಶತ್ರುವನ್ನು ಕೇಡಿನಲ್ಲಿಯೂ ಇಕ್ಕಟ್ಟಿನಲ್ಲಿಯೂ ನಿನಗೆ ಶರಣಾಗತನನ್ನಾಗಿ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು