Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:15 - ಕನ್ನಡ ಸತ್ಯವೇದವು J.V. (BSI)

15 ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಯೆಹೋವನು ಅವನಿಗೆ ಈ ಮಾತನ್ನು ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಯೆಹೋವನು ಅವನಿಗೆ ಈ ಮಾತನ್ನು ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯೆರೆಮೀಯನು ಇನ್ನೂ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಸರ್ವೇಶ್ವರನ ಈ ವಾಣಿ ಕೇಳಿಸಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಬಂದಿಯಾಗಿದ್ದಾಗ ಯೆಹೋವನಿಂದ ಅವನಿಗೊಂದು ಸಂದೇಶ ಬಂದಿತು. ಆ ಸಂದೇಶ ಹೀಗಿತ್ತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆರೆಮೀಯನು ಸೆರೆಮನೆಯ ಅಂಗಳದಲ್ಲಿರುವಾಗ ಯೆಹೋವ ದೇವರ ವಾಕ್ಯವು ಅವನಿಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:15
8 ತಿಳಿವುಗಳ ಹೋಲಿಕೆ  

ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರತರಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು [ಎಂದಿನಂತೆ] ಜನರ ಮಧ್ಯೆ ವಾಸಿಸಿದನು.


ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ದಿನವಹಿ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ಈ ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ಸೇದಿಕೊಂಡು ಬಾವಿಯಿಂದ ಮೇಲಕ್ಕೆ ಎತ್ತಿದರು; ಆಮೇಲೆ ಯೆರೆಮೀಯನು [ಹಿಂದಿನಂತೆ] ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.


ಯೆರೂಸಲೇಮು ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು