Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:2 - ಕನ್ನಡ ಸತ್ಯವೇದವು J.V. (BSI)

2 ಚಿದ್ಕೀಯನ ಹನ್ನೊಂದನೆಯ ವರುಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ ಪೌಳಿಗೋಡೆ ಒಡಕುಬಿದ್ದು ಯೆರೂಸಲೇಮು ಶತ್ರುವಶವಾಗಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ ಪೌಳಿಗೋಡೆ ಒಡಕು ಬಿದ್ದು ಯೆರೂಸಲೇಮ್ ಪಟ್ಟಣವು ಶತ್ರುವಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿನದಲ್ಲಿ ನಗರದ ಪೌಳಿಗೋಡೆ ಒಡಕುಬಿದ್ದು ಜೆರುಸಲೇಮ್ ಶತ್ರುವಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಚಿದ್ಕೀಯನ ಆಳ್ವಿಕೆಯ ಹನ್ನೊಂದನೆ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೇ ದಿನದಂದು ಜೆರುಸಲೇಮಿನ ಪೌಳಿಗೋಡೆಯನ್ನು ಒಡೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣವು ಒಡೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:2
13 ತಿಳಿವುಗಳ ಹೋಲಿಕೆ  

ಅದೇ ದಿನದಲ್ಲಿ ಮೀನುಬಾಗಿಲಿಂದ ಕೂಗಾಟ, ಎರಡನೆಯ ಕೇರಿಯಿಂದ ಗೋಳಾಟ, ಗುಡ್ಡಗಳ ಮೇಲಿಂದ ಧಡಮ್ ಎನ್ನುವ ಶಬ್ದ, ಅಂತು ದೊಡ್ಡ ಗದ್ದಲವಾಗುವದು; ಇದು ಯೆಹೋವನ ನುಡಿ.


ನಾವು ಸೆರೆಯಾಗಿ ಹನ್ನೆರಡನೆಯ ವರುಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ ಯೆರೂಸಲೇವಿುನಿಂದ ಪಲಾಯನಮಾಡಿದವನೊಬ್ಬನು ನನ್ನ ಬಳಿಗೆ ಬಂದು - ಪಟ್ಟಣವು ಶತ್ರುವಶವಾಯಿತು ಎಂದು ಹೇಳಿದನು.


ಚೀಯೋನೆಂಬ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ; ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.


ಅಲ್ಲದೆ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಆಳಿಕೆಯ ಹನ್ನೊಂದನೆಯ ವರುಷದ ಐದನೆಯ ತಿಂಗಳಿನಲ್ಲಿ ಯೆರೂಸಲೇವಿುನವರು ಸೆರೆಹೋಗುವ ತನಕ ಯೆಹೋವನ ವಾಕ್ಯವು ಒದಗುತ್ತಿತ್ತು.


ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಹತ್ತನೆಯ ವರುಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ, ಯೆಹೋವನು ಯೆರೆಮೀಯನಿಗೆ ತನ್ನ ವಾಕ್ಯವನ್ನು ದಯಪಾಲಿಸಿದನು.


ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರವಿುಸಿ ಬೆಂಕಿಯಿಂದ ಸುಟ್ಟುಬಿಡುವರು; ಮತ್ತು ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂವಿುಯನ್ನಾಗಿ ಮಾಡುವೆನು.


ಕಸ್ದೀಯರು ಪುನಃ ಮತ್ತೆ ಬಂದು ಈ ಪಟ್ಟಣವನ್ನು ಪ್ರತಿಭಟಿಸಿ ಆಕ್ರವಿುಸಿ ಬೆಂಕಿಯಿಂದ ಸುಟ್ಟುಬಿಡುವರು.


ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಲ್ಪಡುವದು, ನೀನು ಅದನ್ನು ಮುತ್ತಿದಂತಾಗುವದು. ಇದು ಇಸ್ರಾಯೇಲ್ ವಂಶದವರಿಗೆ ಗುರುತು.


ಮುತ್ತಿಗೆಯ ದಿನಗಳು ತೀರಿದಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರು (ಹಾಗೆಯೇ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು).


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ, ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನುಂಟುಮಾಡುವವು; ಹೀಗಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು