Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:6 - ಕನ್ನಡ ಸತ್ಯವೇದವು J.V. (BSI)

6 ಅವನ ಮಕ್ಕಳನ್ನು ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಬಾಬೆಲಿನ ಅರಸನು ಅಲ್ಲಿ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ರಿಬ್ಲದಲ್ಲಿ ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ಬಾಬಿಲೋನಿಯದ ಅರಸನು ಅಲ್ಲೆ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿದನು. ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಜುದೇಯದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ರಿಬ್ಲದಲ್ಲಿ ಬಾಬಿಲೋನಿನ ರಾಜನು ಚಿದ್ಕೀಯನ ಕಣ್ಣೆದುರಿನಲ್ಲಿಯೇ ಅವನ ಗಂಡುಮಕ್ಕಳನ್ನು ಕೊಲ್ಲಿಸಿದನು. ಚಿದ್ಕೀಯನು ನೋಡುತ್ತಿದ್ದಂತೆಯೇ ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ರಾಜಾಧಿಕಾರಿಗಳನ್ನು ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ಬಾಬಿಲೋನಿಯದ ಅರಸನು ಅಲ್ಲೇ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಯೆಹೂದದ ಎಲ್ಲಾ ಶ್ರೇಷ್ಠರನ್ನೂ ರಿಬ್ಲದಲ್ಲಿ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:6
19 ತಿಳಿವುಗಳ ಹೋಲಿಕೆ  

ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ವ್ಯಾಧಿಖಡ್ಗಕ್ಷಾಮಗಳಿಂದ ಹತಶೇಷರಾದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು; ಅವನು ಅವರನ್ನು ಕರುಣಿಸದೆ ಕನಿಕರಪಡದೆ ಉಳಿಸದೆ ಕತ್ತಿಯಿಂದ ಸಂಹರಿಸುವನು.


ಅವನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ ಅವನಿಗೆ ಬೇಡಿ ಹಾಕಿ ಎರಡು ಕಣ್ಣುಗಳನ್ನೂ ಕಿತ್ತು ಬಾಬೆಲಿಗೆ ತೆಗೆದುಕೊಂಡು ಹೋದರು.


ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ ನಿಮ್ಮ ಮುಂದೆ ನಡೆಯುವ ಸಂಗತಿಗಳ ದೆಸೆಯಿಂದ ಹುಚ್ಚರಾಗಿ ಹೋಗುವಿರಿ.


ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಿಬಿಡುವರು, ಅವರ ಮನೆಗಳನ್ನು ಸೂರೆಮಾಡುವರು, ಅವರ ಹೆಂಡರನ್ನು ಕೆಡಿಸುವರು.


ನನ್ನ ಜನರಿಗೆ ಕೇಡು ಸಂಭವಿಸುವದನ್ನು ನೋಡಿ ನಾನು ಸಹಿಸುವದು ಹೇಗೆ? ನನ್ನ ಕುಲನಾಶನವನ್ನು ನೋಡುತ್ತಾ ಸುಮ್ಮನಿರುವದು ಹೇಗೆ ಎಂದು ಬಿನ್ನವಿಸಿದಳು.


ನಾನು ಈ ದೇಶದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿಸೇರುವಂತೆ ಅನುಗ್ರಹಿಸುವೆನು ಎಂಬದೇ ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.


ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿಸೇರುವಂತೆ ಅನುಗ್ರಹಿಸುವೆನು ಎಂಬದೇ ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.


ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗುವದಕ್ಕಾದೀತು? ತಂದೆಗೆ ಮಹಾ ಶೋಕವುಂಟಾಗುವದನ್ನು ನಾನು ನೋಡಕೂಡದು ಅಂದನು.


ಮಗುವು ಸಾಯುವದನ್ನು ನೋಡಲಾರೆನು ಅಂದುಕೊಂಡು ಬಿಲ್ಲೆಸುಗೆಯಷ್ಟು ದೂರ ಹೋಗಿ ಅವನೆದುರಾಗಿ ಕೂತುಕೊಂಡು ಗಟ್ಟಿಯಾಗಿ ಅತ್ತಳು.


ಅಲ್ಲಿ ಪಟ್ಟಕ್ಕೆ ಕರೆಯಲು ಪ್ರಮುಖರಲ್ಲಿ ಯಾರೂ ಸಿಕ್ಕರು; ದೇಶದಲ್ಲಿ ಪ್ರಧಾನರೇ ಇಲ್ಲ.


ಏಕಂದರೆ ಯೆಹೋವನು - ಇಗೋ, ನಾನು ನಿನ್ನನ್ನು ನಿನಗೂ ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗೆ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ಅದನ್ನು ಕಣ್ಣಾರೆ ಕಾಣುವಿ; ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.


ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತಾಡುವನು; ನೀನು ಬಾಬೆಲಿಗೆ ಗಡೀಪಾರಾಗುವಿ.


ನಿನ್ನ ಸಮಸ್ತ ಪತ್ನಿಯರೂ ಕುಮಾರಕುಮಾರ್ತೆಯರೂ ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿವಿುತ್ತ ಬೆಂಕಿಯಿಂದ ಸುಟ್ಟುಹೋಗುವದು ಎಂದು ಹೇಳಿದನು.


ಅವರು ಆಯುಧ, ರಥ, ಚಕ್ಕಡಿಗಾಡಿ, ಜನಾಂಗಗಳ ಸಮೂಹ, ಇವುಗಳೊಂದಿಗೆ ನಿನ್ನ ಮೇಲೆ ಬೀಳುವರು; ಗುರಾಣಿ, ಖೇಡ್ಯ, ಶಿರಸ್ತ್ರಾಣ, ಇವುಳನ್ನು ಧರಿಸಿ ನಿನಗೆ ವಿರುದ್ಧವಾಗಿ ಸುತ್ತುಮುತ್ತಲು ವ್ಯೂಹಕಟ್ಟುವರು; ನ್ಯಾಯತೀರಿಸುವ ಅಧಿಕಾರವನ್ನು ನಾನು ಅವರಿಗೆ ಒಪ್ಪಿಸಲು ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸಿ ನಿನ್ನನ್ನು ದಂಡಿಸುವರು.


ಹಿಂಡಿನಲ್ಲಿ ಶ್ರೇಷ್ಠವಾದದ್ದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳು ಅದರಲ್ಲಿ ಬೇಯಲಿ.


ಯೆಹೋವನ ಆ ಯಜ್ಞದಿನದಲ್ಲಿ ನಾನು ದೇಶಾಧಿಪತಿಗಳನ್ನೂ ರಾಜವಂಶದವರನ್ನೂ ವಿದೇಶವಸ್ತ್ರಧಾರಿಗಳೆಲ್ಲರನ್ನೂ ದಂಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು