ಯೆರೆಮೀಯ 4:19 - ಕನ್ನಡ ಸತ್ಯವೇದವು J.V. (BSI)19 ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತೇನೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತೂರಿಯ ಶಬ್ದವನ್ನೂ ಯುದ್ಧಘೋಷವನ್ನೂ ಕೇಳುತ್ತೀಯಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅಯ್ಯೋ, ನನ್ನ ಕರುಳು ಯಾತನೆಯಿಂದ ಕಿತ್ತುಬರುವಂತಿದೆ. ಅಕಟಾ ! ನನ್ನ ಗುಂಡಿಗೆಯ ಪಕ್ಕೆಗಳು ಸೀಳುವಂತಿದೆ, ಹೃದಯ ತಳಮಳಗೊಂಡಿದೆ ! ಇನ್ನು ಬಾಯಿಮುಚ್ಚಿಕೊಂಡಿರಲು ನನ್ನಿಂದಾಗದು; ನನ್ನ ಮನವೇ, ಕಾಳಗದ ಕಹಳೆಯನ್ನೂ ಯುದ್ಧದ ಕೋಲಾಹಲವನ್ನೂ ಕೇಳುತ್ತಿರುವೆ, ಅಲ್ಲವೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅಯ್ಯೋ, ನನ್ನ ದುಃಖ ಮತ್ತು ಚಿಂತೆ ನನ್ನ ಹೊಟ್ಟೆಯಲ್ಲಿ ಸಂಕಟವನ್ನು ಉಂಟುಮಾಡುತ್ತಿವೆ. ನೋವಿನಿಂದ ನಾನು ಬಾಗಿಹೋಗಿದ್ದೇನೆ. ನಾನು ತುಂಬ ಹೆದರಿಕೊಂಡಿದ್ದೇನೆ. ನನ್ನ ಹೃದಯವು ಒಳಗೆ ತಳಮಳಗೊಳ್ಳುತ್ತಿದೆ. ನಾನು ಬಾಯಿ ಮುಚ್ಚಿಕೊಂಡಿರಲಾರೆ. ಏಕೆಂದರೆ, ನಾನು ತುತ್ತೂರಿಯ ಶಬ್ದವನ್ನು ಕೇಳಿದ್ದೇನೆ. ಆ ತುತ್ತೂರಿಯು ಸೈನ್ಯವನ್ನು ಯುದ್ಧಕ್ಕೆ ಕರೆಯುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಓ, ನನ್ನ ಕರುಳು, ನನ್ನ ಕರುಳು! ನಾನು ನೋವಿನಿಂದ ನರಳುತ್ತೇನೆ. ನನ್ನ ಹೃದಯವು ನನ್ನಲ್ಲಿ ತಳಮಳಗೊಂಡಿದೆ. ನಾನು ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿ ಶಬ್ದವನ್ನೂ, ಯುದ್ಧದ ಆರ್ಭಟವನ್ನೂ ಕೇಳುತ್ತಿರುವೆ. ಅಧ್ಯಾಯವನ್ನು ನೋಡಿ |
ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದಕ್ಕೆ ದಿಗಿಲುಪಟ್ಟು ತುಸುಹೊತ್ತು ಸ್ತಬ್ಧನಾದನು. ರಾಜನು ಇದನ್ನು ನೋಡಿ - ಬೇಲ್ತೆಶಚ್ಚರನೇ, ನನ್ನ ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ ಎಂದು ಹೇಳಲು ಬೇಲ್ತೆಶಚ್ಚರನು - ಎನ್ನೊಡೆಯನೇ, ಆ ಕನಸು ನಿನ್ನ ಹಗೆಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!