ಯೆರೆಮೀಯ 4:2 - ಕನ್ನಡ ಸತ್ಯವೇದವು J.V. (BSI)2 ಯೆಹೋವನ ಜೀವದಾಣೆ ಎಂದು ಸತ್ಯನ್ಯಾಯ ಧರ್ಮಾನುಸಾರವಾಗಿ ನೀನು ಪ್ರಮಾಣಮಾಡಿದರೆ ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ, ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿಯಿಂದಲೂ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡುವೆ. ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯ ಬಯಸುವರು. ನನ್ನಲ್ಲಿಯೇ ಹೆಮ್ಮೆಪಡುವರು.” ಅಧ್ಯಾಯವನ್ನು ನೋಡಿ |