Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:26 - ಕನ್ನಡ ಸತ್ಯವೇದವು J.V. (BSI)

26 ನಾನು ನೋಡಲಾಗಿ ಫಲವತ್ತಾದ ಭೂವಿುಯು ಕಾಡಾಗಿತ್ತು. ಅಕಟಾ! ಅಲ್ಲಿನ ಊರುಗಳೆಲ್ಲಾ ರೋಷಾಗ್ನಿಯುಕ್ತನಾದ ಯೆಹೋವನ ಪ್ರತ್ಯಕ್ಷತೆಯಿಂದ ಬಿದ್ದು ಹೋಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಾನು ನೋಡಲಾಗಿ ಫಲವತ್ತಾದ ಭೂಮಿಯು ಕಾಡಾಗಿತ್ತು, ಅಯ್ಯೋ! ಅಲ್ಲಿನ ಊರುಗಳೆಲ್ಲಾ ರೋಷಾಗ್ನಿಯುಕ್ತನಾದ ಯೆಹೋವನ ಪ್ರತ್ಯಕ್ಷತೆಯಿಂದ ಬಿದ್ದುಹೋಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇನ್ನೂ ನೋಡಿದೆ - ಸೊಂಪಾದ ನಾಡು ಈಗ ಸುಡುಗಾಡು ಅಕಟಾ ! ಸರ್ವೇಶ್ವರನ ಮುಂದೆ, ಅವರ ಕೋಪಾಗ್ನಿಯ ಮುಂದೆ ಊರುಗಳೆಲ್ಲವು ಪಾಳುಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಾನು ನೋಡಿದಾಗ ಫಲವತ್ತಾದ ಭೂಮಿಯು ಮರಳುಗಾಡಾಗಿತ್ತು. ಆ ಪ್ರದೇಶದ ಎಲ್ಲಾ ನಗರಗಳು ಹಾಳಾಗಿ ಹೋಗಿದ್ದವು. ಯೆಹೋವನು ತನ್ನ ಭಯಂಕರವಾದ ಕೋಪದಿಂದ ಇದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಮರುಭೂಮಿಯಾಯಿತು; ಅದರ ಪಟ್ಟಣಗಳೆಲ್ಲಾ ಯೆಹೋವ ದೇವರ ಮುಂದೆಯೂ, ಅವರ ಉಗ್ರಕೋಪದ ಉರಿಯ ಮುಂದೆಯೂ ಬಿದ್ದು ಹೋಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:26
15 ತಿಳಿವುಗಳ ಹೋಲಿಕೆ  

ಬುಗ್ಗೆಗಳನ್ನು ಒಣನೆಲವಾಗುವಂತೆಯೂ ಫಲಭೂವಿುಯನ್ನು ಉಪ್ಪುನೆಲವಾಗುವಂತೆಯೂ ಮಾಡಿದನು.


ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು.


ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವದರಿಂದ ಮೃಗಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವದೇ ಇಲ್ಲ ಎಂದು ಹೇಳಿದ್ದಾರಷ್ಟೆ.


ನೀನು ಮಹಾಭಯಂಕರನು; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?


ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತವನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದುಹೋಗರು, ದನದ ಸದ್ದು ಕಿವಿಗೆ ಬೀಳದು, ಮೃಗಪಕ್ಷಿಗಳು ತೊಲಗಿಹೋಗಿವೆ.


ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ; ಯೆಹೋವನ ರೋಷಾಗ್ನಿಯ ನಿವಿುತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವದು.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿನೋಡುವದಿಲ್ಲ.


ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವದು. ಇದು ಯೆಹೋವನ ನುಡಿ.


ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವದು; ಮತ್ತು ಈ ಜನಾಂಗಗಳು ಎಪ್ಪತ್ತು ವರುಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.


ಕರ್ತನು ತನ್ನ ಯಜ್ಞವೇದಿಯನ್ನು ತಿರಸ್ಕರಿಸಿ ತನ್ನ ಪವಿತ್ರಾಲಯಕ್ಕೆ ಅಸಹ್ಯಪಟ್ಟು ಚೀಯೋನಿನ ಅರಮನೆಗಳ ಗೋಡೆಗಳನ್ನು ಶತ್ರು ವಶಮಾಡಿದ್ದಾನೆ; ಉತ್ಸವದಿನದಲ್ಲಿ ಘೋಷಿಸುವಂತೆ ಶತ್ರುಗಳು ಯೆಹೋವನ ಮಂದಿರದಲ್ಲಿ ಜಯಘೋಷವೆತ್ತಿದ್ದಾರೆ.


ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿಬಂಗಾರಗಳು ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು