ಯೆರೆಮೀಯ 4:29 - ಕನ್ನಡ ಸತ್ಯವೇದವು J.V. (BSI)29 ಪಟ್ಟಣದವರೆಲ್ಲರೂ ಸವಾರರ ಮತ್ತು ಬಿಲ್ಲುಗಾರರ ಆರ್ಭಟಕ್ಕೆ ಹೆದರಿ ಓಡುತ್ತಾರೆ; ಇತ್ತ ಪೊದೆಗಳಲ್ಲಿ ಅವಿತುಕೊಳ್ಳುತ್ತಾರೆ, ಅತ್ತ ಬಂಡೆಗಳನ್ನು ಹತ್ತುತ್ತಾರೆ; ಪ್ರತಿಯೊಂದು ಪಟ್ಟಣವು ಯಾವ ನಿವಾಸಿಯೂ ಇಲ್ಲದೆ ನಿರ್ಜನವಾಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಪಟ್ಟಣದವರೆಲ್ಲರೂ ಸವಾರರ ಮತ್ತು ಬಿಲ್ಲುಗಾರರ ಆರ್ಭಟಕ್ಕೆ ಹೆದರಿ ಓಡುತ್ತಾರೆ; ಇತ್ತ ಪೊದೆಗಳಲ್ಲಿ ಅವಿತುಕೊಳ್ಳುತ್ತಾರೆ, ಅತ್ತ ಬಂಡೆಗಳನ್ನು ಹತ್ತುತ್ತಾರೆ; ಪ್ರತಿಯೊಂದು ಪಟ್ಟಣವು ಯಾವ ನಿವಾಸಿಯೂ ಇಲ್ಲದೆ ನಿರ್ಜನವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ರಾಹುತರ ಹಾಗೂ ಬಿಲ್ಲುಗಾರರ ಅಬ್ಬರಕ್ಕೆ ಓಡುತ್ತಿರುವವರು ಪಟ್ಟಣಿಗರೆಲ್ಲರು ಇತ್ತ ಪೊದೆಗಳಲ್ಲಿ ಅವಿತುಕೊಳ್ಳುತ್ತಾರೆ. ಅತ್ತ ಬಂಡೆಗಳನ್ನು ಹತ್ತುತ್ತಿದ್ದಾರೆ. ಪ್ರತಿಯೊಂದು ಪಟ್ಟಣ ಪಾಳುಬಿದ್ದ ಬೀಡು ಅದರಲ್ಲಿ ಮತ್ತೆ ವಾಸಮಾಡುವವರು ಒಬ್ಬರೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯೆಹೂದದ ಜನರು ಕುದುರೆಗಳ, ಸವಾರರ, ಬಿಲ್ಲುಗಾರರ ಶಬ್ಧಗಳನ್ನು ಕೇಳಿ ಓಡಿಹೋಗುವರು. ಕೆಲವು ಜನರು ಗುಹೆಯಲ್ಲಿ ಅಡಗಿಕೊಳ್ಳುವರು. ಕೆಲವರು ಪೊದೆಗಳಲ್ಲಿ ಅವಿತುಕೊಳ್ಳುವರು. ಕೆಲವರು ಬೆಟ್ಟಗಳನ್ನು ಹತ್ತಿಹೋಗುವರು. ಯೆಹೂದದ ಎಲ್ಲಾ ನಗರಗಳು ಬರಿದಾಗುವವು. ಅಲ್ಲಿ ಒಬ್ಬರೂ ಇರುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ರಾವುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವುದು. ಪೊದೆಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು. ಪಟ್ಟಣಗಳೆಲ್ಲಾ ನಾಶವಾಗುವುವು. ಅವುಗಳಲ್ಲಿ ಒಬ್ಬನಾದರೂ ವಾಸಮಾಡನು. ಅಧ್ಯಾಯವನ್ನು ನೋಡಿ |