ಯೆರೆಮೀಯ 4:30 - ಕನ್ನಡ ಸತ್ಯವೇದವು J.V. (BSI)30 ಎಲೈ, [ನಗರಿಯೇ,] ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು ನೀಲಾಂಜನದಿಂದ ವಿಶಾಲಾಕ್ಷಿಯಾದರೇನು, ನಿನ್ನನ್ನು ಸೊಗಸು ಮಾಡಿಕೊಳ್ಳುವದು ವ್ಯರ್ಥ; ನಿನ್ನ ವಿುಂಡರು ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಎಲೈ, ನಗರವೇ, ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು, ನೀಲಾಂಜನ ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು, ನಿನ್ನನ್ನು ಶೃಂಗಾರಿಸಿಕೊಳ್ಳುವುದು ವ್ಯರ್ಥ. ನಿನ್ನೊಂದಿಗೆ ವ್ಯಭಿಚಾರ ಮಾಡಿದವರೇ ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಎಲೈ ಜೆರುಸಲೇಮ್, ಸೂರೆಯಾಗುವಾಗ ಏನು ಮಾಡುವೆ? ಪಟ್ಟದ ಬಟ್ಟೆಗಳನ್ನು ಉಟ್ಟುಕೊಂಡು ಚಿನ್ನದ ಒಡವೆಗಳನ್ನು ತೊಟ್ಟುಕೊಂಡು ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೆ ಏನು ಪ್ರಯೋಜನ? ಎಲ್ಲವೂ ವ್ಯರ್ಥ ! ನಿನ್ನ ಮಿಂಡರೇ ನಿನ್ನನ್ನು ತಿರಸ್ಕರಿಸಿ ನಿನ್ನ ಪ್ರಾಣಹುಡುಕುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು? ಅತ್ಯುತ್ತಮವಾದ ಕೆಂಪುಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ? ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ? ಕಣ್ಣಿಗೆ ಕಾಡಿಗೆಯನ್ನು ಏಕೆ ಹಚ್ಚುತ್ತಿರುವೆ? ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. ಅವರು ನಿನ್ನನ್ನು ಕೊಲೆಮಾಡುವ ಪ್ರಯತ್ನದಲ್ಲಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಗ ನೀನು ನಿರ್ಜನನಾದಾಗ ಏನು ಮಾಡುವೆ? ನೀನು ಕಡುಕೆಂಪು ಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡರೇನು? ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು? ನೀವು ವ್ಯರ್ಥವಾಗಿ ನಿನ್ನನ್ನು ಅಲಂಕರಿಸಿಕೊಳ್ಳುತ್ತಿ. ನಿನ್ನ ಪ್ರೇಮಿಗಳು ನಿನ್ನನ್ನು ತಿರಸ್ಕರಿಸುತ್ತಾರೆ; ಅವರು ನಿನ್ನನ್ನು ಕೊಲ್ಲಲು ಬಯಸುತ್ತಾರೆ. ಅಧ್ಯಾಯವನ್ನು ನೋಡಿ |