ಯೆರೆಮೀಯ 4:4 - ಕನ್ನಡ ಸತ್ಯವೇದವು J.V. (BSI)4 ಯೆಹೂದದವರೇ, ಯೆರೂಸಲೇವಿುನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ ಯೆಹೋವನಿಗಾಗಿ ಸುನ್ನತಿಯಾಗಿರಿ; ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಜುದೇಯದವರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನಾದ ನನಗಾಗಿ ಸುನ್ನತಿಯಾಗಿರಿ. ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲವಾದರೆ ನಿಮ್ಮ ಪಾಪಾಕ್ರಮಗಳ ನಿಮಿತ್ತ ನನ್ನ ಕೋಪಾಗ್ನಿಯು ಭುಗಿಲೆದ್ದು ಆರಿಸಲಾಗದಷ್ಟು ಧಗಧಗಿಸುವುದು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ; ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲದಿದ್ದರೆ ನನ್ನ ಉಗ್ರವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.” ಅಧ್ಯಾಯವನ್ನು ನೋಡಿ |