Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:6 - ಕನ್ನಡ ಸತ್ಯವೇದವು J.V. (BSI)

6 ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಬಡಗಲಿಂದ ವಿಪತ್ತನ್ನೂ ಘೋರನಾಶನವನ್ನೂ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಉತ್ತರ ದಿಕ್ಕಿನಿಂದ ವಿಪತ್ತನ್ನು ಮತ್ತು ಘೋರನಾಶವನ್ನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಿಯೋನಿನ ಕಡೆಗೆ ಧ್ವಜವನ್ನೆತ್ತಿರಿ. ತಡಮಾಡದೆ ವಲಸೆಹೋಗಿರಿ. ಸರ್ವೇಶ್ವರ ಉತ್ತರದಿಂದ ವಿಪತ್ತನ್ನೂ ಘೋರ ನಾಶವನ್ನೂ ಬರಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಚೀಯೋನಿನ ಕಡೆಗೆ ಧ್ವಜವನ್ನು ಎತ್ತಿ ಸಂಕೇತ ಕೊಡಿ. ನಿಲ್ಲಬೇಡಿ. ನಿಮ್ಮ ಜೀವ ರಕ್ಷಣೆಗಾಗಿ ಓಡಿರಿ. ನಾನು ಉತ್ತರದಿಂದ ವಿಪತ್ತನ್ನು ತರುತ್ತಿರುವುದರಿಂದ ನೀವು ಹೀಗೆ ಮಾಡಬೇಕು. ನಾನು ಭಯಂಕರವಾದ ವಿನಾಶವನ್ನು ಬರಮಾಡಲಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ವಿಳಂಬವಿಲ್ಲದೆ ಸುರಕ್ಷತೆಗಾಗಿ ಓಡಿಹೋಗಿರಿ. ಏಕೆಂದರೆ ನಾನು ಉತ್ತರದಿಂದ ಕೇಡನ್ನೂ, ದೊಡ್ಡ ನಾಶವನ್ನೂ ತರುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:6
19 ತಿಳಿವುಗಳ ಹೋಲಿಕೆ  

ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಜದೆ ಹೀಗೆ ಸಾರಿರಿ - ಬಾಬೆಲ್ ಶತ್ರುವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ದೇಶದಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸನ್ನಾಹಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ವಿುನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಪತಿಯನ್ನು ನೇವಿುಸಿರಿ, ಅಶ್ವಬಲವನ್ನು ಬಿರುಸಾದ ವಿುಡಿತೆದಂಡಿನೋಪಾದಿಯಲ್ಲಿ ಬರಮಾಡಿರಿ.


ಬಾಬೆಲ್ ಕೋಟೆಗೆ ಎದುರಾಗಿ ಧ್ವಜವೆತ್ತಿರಿ, ಠಾಣ್ಯವನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ಚಿತ್ತಕ್ಕೆ ತಂದು ನೆರವೇರಿಸಿದ್ದಾನೆ.


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ಆಹಾ, ಬಡಗಲಿಂದ ಒಂದು ಜನಾಂಗವು ಬರುತ್ತದೆ, ಮಹಾ ಜನವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ.


ಬೆನ್ಯಾಮೀನ್ ಕುಲದವರೇ, ಯೆರೂಸಲೇವಿುನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್‍ಹಕ್ಕೆರೆವಿುನಲ್ಲಿ ಧ್ವಜವನ್ನೆತ್ತಿರಿ; ಏಕಂದರೆ ಅತಿನಾಶಕವಾದ ವಿಪತ್ತು ಬಡಗಲಿಂದ ತಲೆದೋರುತ್ತಿದೆ.


ನಾನು ಎಷ್ಟರವರೆಗೆ ಧ್ವಜವನ್ನು ನೋಡಲಿ, ಎಂದಿನ ತನಕ ತುತೂರಿಯ ಶಬ್ದವನ್ನು ಕೇಳಲಿ!


ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಎತ್ತರಿಸಿರಿ, ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಿಗೆ ಧ್ವಜವನ್ನೆತ್ತಿರಿ!


ಅದೇ ದಿನದಲ್ಲಿ ಮೀನುಬಾಗಿಲಿಂದ ಕೂಗಾಟ, ಎರಡನೆಯ ಕೇರಿಯಿಂದ ಗೋಳಾಟ, ಗುಡ್ಡಗಳ ಮೇಲಿಂದ ಧಡಮ್ ಎನ್ನುವ ಶಬ್ದ, ಅಂತು ದೊಡ್ಡ ಗದ್ದಲವಾಗುವದು; ಇದು ಯೆಹೋವನ ನುಡಿ.


ಆಹಾ, ಬಾಬೆಲಿನಿಂದ ಮೊರೆಯೂ ಕಸ್ದೀಯರ ದೇಶದಿಂದ ಮಹಾನಾಶನದ ಶಬ್ದವೂ ಕೇಳ ಬರುತ್ತವೆ!


ಯುದ್ಧದ ಆರ್ಭಟವೂ ಮಹಾನಾಶನದ ಶಬ್ದವೂ ದೇಶದೊಳಗೆ ಕೇಳಿಸುತ್ತವೆ.


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ವ್ಯಾಧಿಖಡ್ಗಕ್ಷಾಮಗಳಿಂದ ಹತಶೇಷರಾದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು; ಅವನು ಅವರನ್ನು ಕರುಣಿಸದೆ ಕನಿಕರಪಡದೆ ಉಳಿಸದೆ ಕತ್ತಿಯಿಂದ ಸಂಹರಿಸುವನು.


ಈಗ ನೀನು ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಈ ಮಾತನ್ನು ಹೇಳು - ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ನಿಮಗೆ ವಿರುದ್ಧವಾಗಿ ಯೋಚಿಸಿ ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.


ಆಯುಧ ಸನ್ನದ್ಧರಾದ ಸಂಹಾರಕರನ್ನು ನಿನಗೆ ವಿರುದ್ಧವಾಗಿ ಏರ್ಪಡಿಸುವೆನು;


ಅನಂತರ ಕಪ್ಪು ಕುದುರೆಗಳು ಉತ್ತರದೇಶಕ್ಕೆ ಹೊರಟವು. ಬಿಳಿ ಕುದುರೆಗಳು ಅವುಗಳನ್ನು ಹಿಂಬಾಲಿಸಿದವು. ಮಚ್ಚೆ ಮಚ್ಚೆಯ ಕುದುರೆಗಳು ದಕ್ಷಿಣದೇಶಕ್ಕೆ ಹೋದವು.


ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.


ಆಮೇಲೆ ಆತನು - ಪಟ್ಟಣವನ್ನು ದಂಡಿಸತಕ್ಕವರೇ, ನೀವೆಲ್ಲರೂ ನಿಮ್ಮ ಹತ್ಯದ ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು.


ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರುಮಂದಿ ಪುರುಷರು ಉತ್ತರಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ತಾಮ್ರದ ಯಜ್ಞವೇದಿಯ ಪಕ್ಕದಲ್ಲಿ ನಿಂತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು