ಯೆರೆಮೀಯ 4:7 - ಕನ್ನಡ ಸತ್ಯವೇದವು J.V. (BSI)7 ಜನಾಂಗಘಾತುಕವಾದ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದಿದೆ; ಹೊರಟಿದೆ, ಸ್ಥಳದಿಂದ ತೆರಳಿದೆ; ನಿನ್ನ ದೇಶವನ್ನು ಹಾಳುಮಾಡುವದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ನಿವಾಸಿಗಳಾಗುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಗುಹೆಬಿಟ್ಟು ಹೊರಟುಬರುವ ಸಿಂಹದಂತೆ ರಾಷ್ಟ್ರಗಳ ವಿನಾಶಕನೊಬ್ಬನು ಎದ್ದಿದ್ದಾನೆ; ಹೊರಟು ಬರುತ್ತಿದ್ದಾನೆ. ಅವನು ಜುದೇಯ ನಾಡನ್ನು ಹಾಳುಮಾಡುವನು. ಅದರ ಪಟ್ಟಣಗಳು ನಿರ್ಜನ ಪ್ರದೇಶಗಳಾಗುವುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ತನ್ನ ಗುಹೆಯಿಂದ ಒಂದು “ಸಿಂಹವು” ಹೊರಬಂದಿದೆ. ಜನಾಂಗಗಳ ವಿನಾಶಕವಾದ ಸಿಂಹವು ಹೆಜ್ಜೆ ಹಾಕುತ್ತಿದೆ. ಅದು ನಿಮ್ಮ ಪ್ರದೇಶವನ್ನು ನಾಶಮಾಡಲು ತನ್ನ ಗುಹೆಯನ್ನು ಬಿಟ್ಟು ಹೊರಟಿದೆ. ನಿಮ್ಮ ಪಟ್ಟಣಗಳೆಲ್ಲ ನಾಶಹೊಂದುವವು. ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸಿಂಹವು ತನ್ನ ಪೊದೆಯೊಳಗಿಂದ ಏರಿ ಬರುತ್ತದೆ. ಇತರ ಜನಾಂಗಗಳನ್ನು ನಾಶ ಮಾಡುವವನು ಹೊರಟಿದ್ದಾನೆ. ನಿನ್ನ ದೇಶವನ್ನು ಹಾಳು ಮಾಡುವುದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ. ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವುದು. ಅಧ್ಯಾಯವನ್ನು ನೋಡಿ |
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ [ಎದೋಮ್ಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೋರ್ದನಿನ ದಟ್ಟಡವಿಯಿಂದ [ಕಸ್ದೀಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?