Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:8 - ಕನ್ನಡ ಸತ್ಯವೇದವು J.V. (BSI)

8 ಇದರ ನಿವಿುತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಹಲುಬಿ ಗೋಳಾಡಿರಿ; ಯೆಹೋವನ ರೋಷಾಗ್ನಿಯು ನಮ್ಮನ್ನು ಬಿಟ್ಟಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದರ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ; ಯೆಹೋವನ ರೋಷಾಗ್ನಿಯು ನಮ್ಮನ್ನು ಬಿಟ್ಟಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಅತ್ತುಗೋಳಾಡಿರಿ. ಸರ್ವೇಶ್ವರ ಸ್ವಾಮಿಯ ಕೋಪ ಅಗ್ನಿಯು ಜುದೇಯವನ್ನು ಬಿಟ್ಟುಹೋಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ದೊಡ್ಡ ಧ್ವನಿಯಿಂದ ಗೋಳಾಡಿರಿ. ಏಕೆಂದರೆ ಯೆಹೋವನು ನಮ್ಮ ಮೇಲೆ ತುಂಬ ಕೋಪಗೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ. ಯೆಹೋವ ದೇವರ ಉಗ್ರಕೋಪದ ಉರಿಯು ನಮ್ಮಿಂದ ಹಿಂದಿರುಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:8
22 ತಿಳಿವುಗಳ ಹೋಲಿಕೆ  

ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.


ಕಣ್ಣೀರುಸುರಿಸಿ ಅಂಗಲಾಚಿ ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು;


ನಿಶ್ಚಿಂತೆಯವರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ! ನಿಮ್ಮ ಬಟ್ಟೆಯನ್ನು ಕಿತ್ತುಹಾಕಿ ಬೆತ್ತಲೆಯಾಗಿ ಸೊಂಟಕ್ಕೆ [ಗೋಣಿತಟ್ಟನ್ನು] ಸುತ್ತಿಕೊಳ್ಳಿರಿ.


ಕೈದಿಗಳ [ಕಾಲ] ಕೆಳಗೆ ಮುದುರಿಕೊಂಡು ಹತರಾದವರ ಕೆಳಗೆ ಬಿದ್ದಿರುವದೇ ಇವರ ಗತಿ! ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಹೀಗಿರಲು ಯೆಹೋವನು ತನ್ನ ಜನರಲ್ಲಿ ಉರಿಗೊಂಡು ಅವರ ಮೇಲೆ ಕೈಯೆತ್ತಿ ಅವರನ್ನು ಹೊಡೆದು ಬಿಡುವನು; ಆಗ ಬೆಟ್ಟಗಳು ನಡಗುವವು, ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈಯೆತ್ತಿಯೇ ಇರುವದು.


ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು, ನಿಮ್ಮ ಗಾಯನಗಳನ್ನೆಲ್ಲಾ ಶೋಕಗೀತಕ್ಕೆ ತಿರುಗಿಸುವೆನು; ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು ತಲೆಬೋಳಿಸಿಕೊಳ್ಳುವಂತೆ ಮಾಡುವೆನು; ನಿನ್ನ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವದು, ಅದು ಆದ ಮೇಲೂ ವ್ಯಾಕುಲವು ಇದ್ದೇ ಇರುವದು.


ನರಪುತ್ರನೇ, ನೀನು ಈ ದೈವೋಕ್ತಿಯನ್ನು ಪ್ರಕಟಿಸು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅರಚಿಕೊಳ್ಳಿರಿ! ಅಯ್ಯೋ ದಿನವೇ!


ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ.


ಮೋವಾಬು ಭಂಗಪಟ್ಟು ಅವಮಾನಕ್ಕೆ ಈಡಾಗಿದೆ; ಗೋಳಾಡಿರಿ, ಅರಿಚಿರಿ; ಮೋವಾಬು ಹಾಳಾಯಿತೆಂದು ಅರ್ನೋನಿನ ತೀರದಲ್ಲಿ ತಿಳಿಸಿರಿ.


ಯೆಹೋವನು ತನ್ನ ಹೃದಯಾಲೋಚನೆಯನ್ನು ನಡಿಸಿ ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.


ಅರಚಿಕೊಳ್ಳಿರಿ, ಯೆಹೋವನ ದಿನವು ಸಮೀಪವಾಯಿತು; ಅದು ಸರ್ವಶಕ್ತನಿಂದ ನಾಶರೂಪವಾಗಿ ಬರುವದು.


ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮು ಮನಸ್ಸೆಯನ್ನು ತಿಂದು ಬಿಡುತ್ತದೆ, ಈ ಎರಡೂ ಯೆಹೂದಕ್ಕೆ ವಿರುದ್ಧವಾಗಿವೆ. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸನು, ಅವರಲ್ಲಿನ ಅನಾಥರನ್ನೂ ವಿಧವೆಯರನ್ನೂ ಕರುಣಿಸನು; ಪ್ರತಿಯೊಬ್ಬನೂ ಭ್ರಷ್ಟನೂ ದುಷ್ಟನೂ ಆಗಿದ್ದಾನೆ; ಎಲ್ಲರ ಬಾಯೂ ನೀಚವಾಗಿ ಮಾತಾಡುತ್ತದೆ. ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಇವರು ಇಸ್ರಾಯೇಲ್ಯರನ್ನು ಬಾಯಿತೆರೆದು ನುಂಗಿದ್ದಾರೆ. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಆತನು ಅವರ ಮೇಲೆ ತನ್ನ ಕೋಪ ರೌದ್ರಗಳನ್ನೂ ಉಗ್ರಹಿಂಸೆಗಳನ್ನೂ ಸಂಹಾರದೂತಗಣವನ್ನೋ ಎಂಬಂತೆ ಕಳುಹಿಸಿದನು.


ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರಿಗೆ ಯೆಹೋವನಿಗೋಸ್ಕರ ಬಹಿರಂಗವಾಗಿ ಮರಣದಂಡನೆಯನ್ನು ಮಾಡಿಸಬೇಕು; ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲ್ಯರಿಂದ ತೊಲಗಿಸಬೇಕು ಎಂದು ಹೇಳಿದನು.


ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.


ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಮೊರೆಯಿಡಿರಿ; ಯಜ್ಞವೇದಿಯ ಸೇವಕರೇ, ಗೋಳಾಡಿರಿ; ನನ್ನ ದೇವರ ದಾಸರೇ, ಬನ್ನಿರಿ, ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದಿರ್ರಿ; ಧಾನ್ಯಪಾನನೈವೇದ್ಯಗಳು ನಿಮ್ಮ ದೇವರ ಆಲಯಕ್ಕೆ ಒದಗವು.


ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ಮಣಿಗಳೇ, [ಬೂದಿಯಲ್ಲಿ] ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ತುಂಬಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.


[ಯೆಹೂದವೇ,] ನಿನ್ನ ಮುದ್ದು ಮಕ್ಕಳಿಗಾಗಿ ಕ್ಷೌರಮಾಡಿಸಿಕೋ, ತಲೆಬೋಳಿಸಿಕೋ; ನಿನ್ನ ಬೋಳುತನವನ್ನು ರಣಹದ್ದಿನ ಹಾಗೆ ವಿಸ್ತರಿಸಿಕೋ; ಅವರು ನಿನ್ನ ಕಡೆಯಿಂದ ಸೆರೆಹೋಗಿದ್ದಾರಲ್ಲಾ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು