Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:9 - ಕನ್ನಡ ಸತ್ಯವೇದವು J.V. (BSI)

9 ಆ ಕಾಲದಲ್ಲಿ ಅರಸನ ಎದೆಯು ಕುಂದುವದು, ಅಧಿಪತಿಗಳ ಹೃದಯವು ಕುಗ್ಗುವದು, ಯಾಜಕರು ಸ್ತಬ್ಧರಾಗುವರು, ಪ್ರವಾದಿಗಳು ಬೆರಗಾಗುವರು ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಕಾಲದಲ್ಲಿ ಅರಸನ ಎದೆಯು ಕುಂದುವುದು, ಅಧಿಪತಿಗಳ ಹೃದಯವು ಕುಗ್ಗುವುದು, ಯಾಜಕರು ಸ್ತಬ್ಧರಾಗುವರು, ಪ್ರವಾದಿಗಳು ಬೆರಗಾಗುವರು” ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರ ಸ್ವಾಮಿ ಹೀಗೆಂದರು - “ಆ ದಿನದಂದು ಅರಸರು ಎದೆಗುಂದುವರು, ಅಧಿಪತಿಗಳ ಹೃದಯ ಕುಗ್ಗುವುದು. ಯಾಜಕರು ಸ್ತಬ್ಧರಾಗುವರು; ಪ್ರವಾದಿಗಳು ನಿಬ್ಬೆರಗಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ರಾಜನು ಮತ್ತು ನಾಯಕರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು. ಯಾಜಕರು ಭಯಪಡುವರು; ಪ್ರವಾದಿಗಳು ಬೆರಗಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆ ದಿವಸದಲ್ಲಿ, “ಅರಸನ ಹೃದಯವೂ ಎದೆಗುಂದುವುದು. ಅಧಿಪತಿಯ ಹೃದಯವೂ ಕುಗ್ಗುವುದು. ಯಾಜಕರು ಭ್ರಮೆಗೊಳ್ಳುವರು. ಪ್ರವಾದಿಗಳು ಸ್ತಬ್ಧರಾಗುವರು,” ಎಂದು ಯೆಹೋವ ದೇವರು ನುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:9
20 ತಿಳಿವುಗಳ ಹೋಲಿಕೆ  

ಎಲೈ ತಿರಸ್ಕಾರಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದು ಎಂದು ಹೇಳಿದನು.


ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿಹೋದರು; (ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು); ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನಮಾಡಿದರು.


ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬಾರನು ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಆ ದಿನದಲ್ಲಿ ಐಗುಪ್ತವು ಹೆಣ್ಣಾಗಿ ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಕೈಬೀಸುವದರಿಂದ ಭಯಪಟ್ಟು ನಡುಗುವದು.


ಐಗುಪ್ತದ ಅಂತರಾತ್ಮವು ಬರಿದಾಗುವದು; ಅದರ ಆಲೋಚನೆಯನ್ನು ಭಂಗಪಡಿಸುವೆನು; ಅಲ್ಲಿಯವರು ವಿಗ್ರಹಗಳನ್ನೂ ಮಂತ್ರಗಾರರನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸುವರು.


ನನ್ನ ಹೃದಯವು ಬಿಸಿಲಿನಿಂದ ಬಾಡಿಹೋದ ಹುಲ್ಲಿನಂತಿದೆ; ಊಟವನ್ನು ಮರೆತೆನು.


ಒಂಭತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಬಳಿಯಲ್ಲಿರುವ ಬಾಗಲಿನಿಂದ ಓಡಿಹೋದರು; ಅದು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋಗುತ್ತಿರುವಾಗ


ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರವಿುಸಿದ್ದಾನೆ; ಆ ದಿನದಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವದು.


ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು; ಬೆಳಬೆಳಗೂ ಹಗಲುರಾತ್ರಿಯೂ ಅದು ಹಾದುಹೋಗುವದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವದು ಬರೀ ಭಯವೇ.


ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವದು; ಮರಕ್ಕೆ, ನೀನು ನನ್ನ ತಂದೆ ಎಂತಲೂ ಕಲ್ಲಿಗೆ, ಹೆತ್ತ ತಾಯಿ ನೀನು ಎಂತಲೂ ಹೇಳುವ ಪ್ರಜೆಗಳು, ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು;


ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ಮಣಿಗಳೇ, [ಬೂದಿಯಲ್ಲಿ] ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ತುಂಬಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು