Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:11 - ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ ಮೋವಾಬ್ ಎದೋಮ್ ಮೊದಲಾದ ದೇಶಗಳಲ್ಲಿಯೂ ಚದರಿಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇವಿುಸಿದ್ದಾನೆಂಬ ವರ್ತಮಾನವನ್ನು ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ, ಮೋವಾಬ್ ಮತ್ತು ಎದೋಮ್ ಮೊದಲಾದ ದೇಶಗಳಲ್ಲಿಯೂ ಚದುರಿ ಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂಬ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದಲ್ಲದೆ, ಅಮ್ಮೋನ್, ಮೋವಾಬ್, ಎದೋಮ್ ಮೊದಲಾದ ನಾಡುಗಳಲ್ಲಿ ಚದರಿಹೋಗಿದ್ದ ಯೆಹೂದ್ಯರೆಲ್ಲರು, ಬಾಬಿಲೋನಿನ ಅರಸನು ಯೆಹೂದ್ಯರಲ್ಲಿ ಕೆಲವರನ್ನು ಉಳಿಸಿ, ಅವರಿಗೆ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆಂಬ ಸುದ್ದಿಯನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬಾಬಿಲೋನಿನ ರಾಜನು ಕೆಲವು ಜನ ಯೆಹೂದಿಯರನ್ನು ಆ ಪ್ರದೇಶದಲ್ಲಿ ಬಿಟ್ಟುಹೋಗಿದ್ದಾನೆ ಮತ್ತು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರ ಅಧಿಪತಿಯನ್ನಾಗಿ ನೇಮಿಸಿದ್ದಾನೆ ಎಂಬ ಸಮಾಚಾರವನ್ನು ಮೋವಾಬ್, ಎದೋಮ್, ಅಮ್ಮೋನ್ ಮೊದಲಾದ ದೇಶಗಳಲ್ಲಿ ಚದುರಿಹೋಗಿದ್ದ ಯೆಹೂದಿಯರು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹಾಗೆಯೇ ಮೋವಾಬಿನಲ್ಲಿಯೂ, ಅಮ್ಮೋನನ ಮಕ್ಕಳಲ್ಲಿಯೂ, ಎದೋಮಿನಲ್ಲಿಯೂ, ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆಲ್ಲರೂ ಬಾಬಿಲೋನಿನ ಅರಸನು ಯೆಹೂದದ ಒಂದು ಶೇಷವನ್ನು ಬಿಟ್ಟಿದ್ದನೆಂದೂ, ಶಾಫಾನನ ಮೊಮ್ಮಗ ಅಹೀಕಾಮನ ಮಗ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂದು ಕೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:11
23 ತಿಳಿವುಗಳ ಹೋಲಿಕೆ  

ನಮ್ಮ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ; ಮೋವಾಬ್ಯರು ಬಲಾತ್ಕಾರಿಗಳಿಗೆ ವಶವಾಗದ ಹಾಗೆ ಆಶ್ರಯವಾಗಿರಿ. ಹಿಂಡಿ ಹಿಂಸಿಸುವವರು [ನಿಮ್ಮ] ದೇಶದಿಂದ ನಿರ್ಮೂಲರಾದರು, ಬಲಾತ್ಕಾರವು ತೀರಿತು, ತುಳಿದುಬಿಡುವವರು ಮುಗಿದುಹೋದರಷ್ಟೆ.


ಇಸ್ರಾಯೇಲ್ಯರ ಸ್ವಾಸ್ತ್ಯದ ನಾಶನಕ್ಕೆ ನೀನು ಹೇಗೆ ಸಂತೋಷಪಟ್ಟಿಯೋ ಹಾಗೆಯೇ ನಿನ್ನ ನಾಶನಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವದು; ಆಗ ನಾನೇ ಯೆಹೋವನು ಎಂದು ವ್ಯಕ್ತವಾಗುವದು.


ನೀನು ಇಸ್ರಾಯೇಲ್ಯರ ಮೇಲೆ ದೀರ್ಘದ್ವೇಷವಿಟ್ಟು ಅವರ ಅಪರಾಧದ ಕಡೆಗಾಲದಲ್ಲಿ ಆಪತ್ತು ಸಂಭವಿಸಿದಾಗ ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದ್ದರಿಂದ


ಕರ್ತನಾದ ಯೇಹೋವನು ಇಂತೆನ್ನುತ್ತಾನೆ - ಎದೋಮು ಯೆಹೂದವಂಶಕ್ಕೆ ಪ್ರತೀಕಾರಮಾಡಿದೆ; ಮುಯ್ಯಿಗೆ ಮುಯ್ಯಿತೀರಿಸಿ ಮಹಾಪರಾಧವನ್ನು ನಡಿಸಿದೆ;


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಯೆಹೂದವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, [ವಿಶೇಷವೇನು] ಎಂದು ಮೋವಾಬೂ ಸೇಯೀರೂ ಅಂದುಕೊಂಡದರಿಂದ


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಚಪ್ಪಾಳೆಹೊಡೆದು ಕಾಲಿನಿಂದ ನೆಲವನ್ನು ಬಡಿದು ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಅದರ ಗತಿಗೆ ಹಿಗ್ಗಿಕೊಂಡದರಿಂದ


ನರಪುತ್ರನೇ, ನೀನು ಅಮ್ಮೋನಿಗೆ ಅಭಿಮುಖನಾಗಿ ಅದರ ವಿಷಯದಲ್ಲಿ ದೈವಸಂಕಲ್ಪವನ್ನು ಪ್ರಕಟಿಸುತ್ತಾ ಅದಕ್ಕೆ ಹೀಗೆ ನುಡಿ -


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಆಗ ಕಡೆಯ ಭಾಗದಲ್ಲಿ ಉಳಿಸಿಕೊಂಡ ಕೆಲವು ಕೂದಲನ್ನು ನಿನ್ನ ಮೇಲಂಗಿಯ ಅಂಚಿನಲ್ಲಿ ಕಟ್ಟು;


ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.


ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು - ನಮಗೊಬ್ಬ ಅರಸನನ್ನು ನೇವಿುಸೆಂದು ನನ್ನನ್ನು ಬೇಡಿಕೊಂಡಿರಿ.


ಅಮ್ಮೋನಿಯನಾದ ನಾಹಾಷನು ಹೊರಟುಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆಹಾಕಲು ಯಾಬೇಷಿನವರು ಅವನನ್ನು - ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನ ಸೇವಕರಾಗಿರುವೆವು ಎಂದು ಬೇಡಿಕೊಂಡರು.


ಇಸ್ರಾಯೇಲ್ಯರು ಶಿಟ್ಟೀವಿುನಲ್ಲಿ ವಾಸವಾಗಿದ್ದಾಗ ಅವರು ಮೋವಾಬ್ ಸ್ತ್ರೀಯರೊಡನೆ ಸಹವಾಸ ಮಾಡುವವರಾದರು.


ತರುವಾಯ ಇಸ್ರಾಯೇಲ್ಯರು ಪ್ರಯಾಣಮಾಡಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ಹೊಳೆಯ ತೀರದಲ್ಲಿ ಮೋವಾಬ್ಯರ ಬೈಲಿನಲ್ಲಿ ಇಳಿದುಕೊಂಡರು.


ಹೀಗಿರಲಾಗಿ ಏಸಾವನು ಸೇಯೀರ್‍ಬೆಟ್ಟದ ಸೀಮೆಗೆ ಹೋಗಿ ಅಲ್ಲೇ ವಾಸವಾಗಿದ್ದನು. ಏಸಾವನಂದರೆ ಎದೋಮನು.


ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲ್ಯರನ್ನು ಕರಿಸಲು ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.


ಇವು ಪಡುವಲಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವವು, ಜೊತೆಯಾಗಿ ಮೂಡಣದವರನ್ನು ಸೂರೆಗೊಳ್ಳುವವು; ಎದೋವಿುನ ಮತ್ತು ಮೋವಾಬಿನ ಮೇಲೆ ಕೈಮಾಡುವವು; ಅಮ್ಮೋನ್ಯರು ಇವುಗಳಿಗೆ ಅಧೀನರಾಗುವರು.


ಏಕಂದರೆ ಸಕಲಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು ಎಂದು ಯೆಹೋವನು ಅನ್ನುತ್ತಾನೆ.


ಆಮೇಲೆ ನೆತನ್ಯನ ಮಗನಾದ ಇಷ್ಮಾಯೇಲನು ರಾಜಕುಮಾರ್ತೆಯರನ್ನು, ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿದ ವಿುಚ್ಪದ ಜನಶೇಷವನ್ನು, ಅಂತು ವಿುಚ್ಪದಲ್ಲಿ ಉಳಿದವರೆಲ್ಲರನ್ನೂ ಸೆರೆಹಿಡಿದು ಅಮ್ಮೋನ್ಯರ ಸೀಮೆಗೆ ಹೊರಟನು.


ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ ಜನರು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಯೆಹೂದದಲ್ಲಿ ವಾಸಿಸುವದಕ್ಕೆ ಹಿಂದಿರುಗಿ ಬಂದಿದ್ದ ಯೆಹೂದ ಜನಶೇಷದವರು, ಪ್ರವಾದಿಯಾದ ಯೆರೆಮೀಯನು,


ನನ್ನ ಕುರಿಗಳು ಮಲೆನಾಡಿನಲ್ಲೆಲ್ಲಾ ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆ ಅಲೆದಾಡಿದವು; ಹೌದು, ನನ್ನ ಕುರಿಗಳು ಭೂಮಂಡಲದಲ್ಲೆಲ್ಲಾ ಚದರಿಹೋದವು; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.


ನೇರೀಯನ ಮಗನಾದ ಬಾರೂಕನು, ರಾಜಕುಮಾರ್ತೆಯರು, ಅಂತು ಗಂಡಸರು, ಹೆಂಗಸರು, ಮಕ್ಕಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು