Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:2 - ಕನ್ನಡ ಸತ್ಯವೇದವು J.V. (BSI)

2 ಆಗ ಕಾವಲು ದಂಡಿನ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ ಅವನಿಗೆ - ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಕೊಟ್ಟನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಕಾವಲು ದಂಡಿನ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ ಅವನಿಗೆ, “ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ರಕ್ಷಾದಳದ ಆ ನಾಯಕ ಯೆರೆಮೀಯನನ್ನು ಕರೆಯಿಸಿ, “ನಿನ್ನ ದೇವರಾದ ಸರ್ವೇಶ್ವರನು ಈ ನಾಡಿಗೆ ಇಂಥ ಕೇಡು ಬಂದೊದಗಲಿ ಎಂದು ಶಾಪಹಾಕಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ಕಂಡಾಗ ಅವನನ್ನು ಮಾತನಾಡಿಸಿ ಹೀಗೆಂದನು: “ಯೆರೆಮೀಯನೇ, ನಿಮ್ಮ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥಾ ದುಸ್ಥಿತಿ ಬರುವದೆಂದು ಸಾರಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕಾವಲಿನವರ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ, ಅವನಿಗೆ ಹೇಳಿದ್ದೇನೆಂದರೆ, “ನಿನ್ನ ದೇವರಾದ ಯೆಹೋವ ದೇವರು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾರೆ. ಹೇಳಿದ ಪ್ರಕಾರವೇ ಯೆಹೋವ ದೇವರು ಅದನ್ನು ಬರಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:2
12 ತಿಳಿವುಗಳ ಹೋಲಿಕೆ  

ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ


ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಅಶುಭಗಳು ನಿಮಗೆ ಪ್ರಾಪ್ತವಾಗುವವು -


ಆಗ ನಾನು ಅವರ ಮೇಲೆ ಬಲುಸಿಟ್ಟಾಗಿ ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು; ಆದದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು - ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆಹೋದದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿದವಲ್ಲಾ ಅಂದುಕೊಳ್ಳುವರು.


ಯೆಹೋವನು ಇದನ್ನು ಕಂಡು ಅವರ ವಿಷಯದಲ್ಲಿ ಬೇಸರಗೊಂಡನು; ತನ್ನ ಕುಮಾರ ಕುಮಾರ್ತೆಗಳ ವಿಷಯದಲ್ಲಿ ವ್ಯಥೆಪಟ್ಟನು.


ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು - ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ನ್ಯಾಯನಿವಾಸವೆನಿಸಿಕೊಂಡ ಯೆಹೋವನಿಗೆ, ಹೌದು, ತಮ್ಮ ಪಿತೃಗಳ ನಿರೀಕ್ಷೆಯಾದ ಯೆಹೋವನಿಗೆ ಪಾಪಮಾಡಿದರಲ್ಲಾ ಅಂದುಕೊಂಡರು.


ಹೊಲಗಳನ್ನೂ ದ್ರಾಕ್ಷೆಯ ತೋಟಗಳನ್ನೂ ವ್ಯವಸಾಯ ಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದನು.


ಇಸ್ರಾಯೇಲ್ ವಂಶವೂ ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡದ್ದರಿಂದ ನಿನ್ನನ್ನು ನಾಟಿದ ಸೇನಾಧೀಶ್ವರನಾದ ಯೆಹೋವನು ನಿನಗೆ ಕೆಡುಕಾಗಲಿ ಎಂದು ಶಪಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು