Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:4 - ಕನ್ನಡ ಸತ್ಯವೇದವು J.V. (BSI)

4 ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವದು ಸರಿಯೋ ಒಳ್ಳೆದೋ ಆ ಕಡೆಗೆ ಹೋಗು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವುದು ಸರಿಯೋ ಒಳ್ಳೆಯದೋ ಆ ಕಡೆ ಹೋಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೋಡು, ನಿನ್ನ ಕೈಗೆ ಹಾಕಿದ್ದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸಿದ್ದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದಿದ್ದರೆ ಬರಬೇಕಾಗಿಲ್ಲ. ಇಗೋ ದೇಶವೆಲ್ಲ ನಿನ್ನ ಕಣ್ಣೆದುರಿಗಿದೆ. ನಿನಗೆ ಯಾವ ಕಡೆಗೆ ಹೋಗುವುದು ಸರಿಯೆಂದು, ಒಳ್ಳೆಯದೆಂದು ತೋರುತ್ತದೋ ಆ ಕಡೆಗೆ ಹೋಗು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆರೆಮೀಯನೇ, ನಾನು ಈಗ ನಿನ್ನನ್ನು ಬಿಡುಗಡೆ ಮಾಡುವೆನು. ನಾನು ನಿನ್ನ ಕೈಗಳಿಂದ ಸಂಕೋಲೆಗಳನ್ನು ಬಿಚ್ಚುವೆನು. ನೀನು ಇಷ್ಟಪಟ್ಟರೆ ನನ್ನ ಸಂಗಡ ಬಾಬಿಲೋನಿಗೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನಿನಗೆ ನನ್ನ ಸಂಗಡ ಬರುವ ಇಷ್ಟವಿಲ್ಲದಿದ್ದರೆ ಬರಬೇಡ. ಇಡೀ ದೇಶದಲ್ಲಿ ನಿನಗೆ ಎಲ್ಲಿ ಇಷ್ಟವೋ ಅಲ್ಲಿಗೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಒಳ್ಳೆಯದೆಂದು ತೋಚಿದರೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ, ದೇಶವೆಲ್ಲಾ ನಿನ್ನ ಮುಂದೆ ಇದೆ; ಎಲ್ಲಿ ಹೋಗುವುದಕ್ಕೆ ನಿನಗೆ ಒಳ್ಳೆಯದೆಂದೂ, ಸರಿಯೆಂದೂ ಕಾಣುತ್ತದೋ, ಅಲ್ಲಿಗೆ ಹೋಗು,” ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:4
8 ತಿಳಿವುಗಳ ಹೋಲಿಕೆ  

ಇಗೋ ನನ್ನ ದೇಶವು; ಇದರೊಳಗೆ ನಿನಗೆ ಇಷ್ಟವಿದ್ದ ಕಡೆಯಲ್ಲಿ ವಾಸಮಾಡಬಹುದು ಅಂದನು.


ದೇಶವೆಲ್ಲಾ ನಿನ್ನೆದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು ಎಂದು ಹೇಳಿದನು.


ಅದರೊಳಗಣ ಉತ್ತಮಭಾಗದಲ್ಲಿ ನಿನ್ನ ತಂದೆಗೂ ನಿನ್ನ ಅಣ್ಣತಮ್ಮಂದಿರಿಗೂ ವಾಸಸ್ಥಾನವನ್ನು ನೇವಿುಸಬಹುದು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಯೋಗ್ಯರಾಗಿ ತೋರಿದರೆ ಅವರನ್ನು ನನ್ನ ದನಗಳ ಮೇಲ್ವಿಚಾರಣೆಗೆ ನೇವಿುಸು ಎಂದು ಹೇಳಿದನು.


ಅದಕ್ಕೆ ಯೆರೆಮೀಯನು - ಅದು ಸುಳ್ಳು, ನಾನು ಕಸ್ದೀಯರನ್ನು ಮರೆಹೊಗುವವನಲ್ಲ ಎನ್ನಲು ಇರೀಯನು ಅವನ ಮಾತನ್ನು ಕೇಳದೆ ಅವನನ್ನು ಹಿಡಿದು ಪ್ರಧಾನರ ಬಳಿಗೆ ಕರತಂದನು.


ನಾನು ಆಚೆಹೋಗದಂತೆ ನನ್ನ ಸುತ್ತಲು ಗೋಡೆ ಕಟ್ಟಿ ನನಗೆ ಭಾರಿ ಬೇಡಿಹಾಕಿದ್ದಾನೆ.


ಅದಕ್ಕೆ ನೀನು ಸೇವಕರಾದ ನಮಗೆ - ನಾನು ಆ ಹುಡುಗನನ್ನು ನೋಡಬೇಕು, ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಅಪ್ಪಣೆಕೊಡಲು


ಆ ಬೆಳ್ಳಿ ನಿನ್ನಲ್ಲೇ ಇರಲಿ; ನೀನು ಆ ಜನರನ್ನು ಏನು ಬೇಕಾದರೂ ಮಾಡಬಹುದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು