Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 41:16 - ಕನ್ನಡ ಸತ್ಯವೇದವು J.V. (BSI)

16 ಆಗ ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಮಸ್ತ ಸೇನಾಪತಿಗಳೂ ತಾವು ನೆತನ್ಯನ ಮಗನಾದ ಇಷ್ಮಾಯೇಲನ ಕೈಯಿಂದ ತಪ್ಪಿಸಿ ಗಿಬ್ಯೋನಿನಿಂದ ತಂದಿದ್ದ ಭಟರು, ಹೆಂಗಸರು, ಮಕ್ಕಳು, ಕಂಚುಕಿಗಳು, ಅಂತು ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದ ಮೇಲೆ ವಿುಚ್ಪದಿಂದ ಒಯ್ದ ಜನಶೇಷವನ್ನೆಲ್ಲಾ ಕರೆದುಕೊಂಡು ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಮಸ್ತ ಸೇನಾಧಿಪತಿಗಳೂ ತಾವು ನೆತನ್ಯನ ಮಗನಾದ ಇಷ್ಮಾಯೇಲನ ಕೈಯಿಂದ ತಪ್ಪಿಸಿ ಗಿಬ್ಯೋನಿನಿಂದ ತಂದಿದ್ದ ಭಟರು, ಹೆಂಗಸರು, ಮಕ್ಕಳು, ಕಂಚುಕಿಗಳು, ಅಂತು ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದ ಮೇಲೆ ಮಿಚ್ಪದಿಂದ ಒಯ್ದ ಉಳಿದ ಜನರನ್ನೆಲ್ಲಾ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಕಾರೇಹನ ಮಗ ಯೋಹಾನಾನನು ಮತ್ತು ಅವನೊಂದಿಗಿದ್ದ ಸೇನಾಪತಿಗಳೆಲ್ಲರು ತಾವು ನೆತನ್ಯನ ಮಗ ಇಷ್ಮಾಯೇಲನ ಕೈಯಿಂದ ತಪ್ಪಿಸಿ ಗಿಬ್ಯೋನಿನಿಂದ ತಂದಿದ್ದ ಜನರನ್ನು ಅಂದರೆ ಯೋಧರು, ಮಹಿಳೆಯರು, ಮಕ್ಕಳು, ಕಂಚುಕಿಗಳು, ಹೀಗೆ ಇಷ್ಮಾಯೇಲನು ಅಹೀಕಾಮನ ಮಗ ಗೆದಲ್ಯನನ್ನು ಕೊಂದ ಬಳಿಕ ಜನರನ್ನೆಲ್ಲರನ್ನು ಕರೆದುಕೊಂಡು ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇಷ್ಮಾಯೇಲನು ಗೆದಲ್ಯನನ್ನು ಕೊಂದು ಮಿಚ್ಫದಲ್ಲಿ ಸೆರೆಹಿಡಿದ ಬಂದಿಗಳನ್ನು ಕಾರೇಹನ ಮಗನಾದ ಯೋಹಾನಾನನು ಮತ್ತು ಅವನ ಸೇನಾಪತಿಗಳು ರಕ್ಷಿಸಿದರು. ಆಗ ಉಳಿದುಕೊಂಡವರಲ್ಲಿ ಸೈನಿಕರು, ಹೆಂಗಸರು, ಮಕ್ಕಳು ಮತ್ತು ಅಧಿಕಾರಿಗಳು ಸೇರಿದ್ದರು. ಯೋಹಾನಾನನು ಗಿಬ್ಯೋನಿನಿಂದ ಅವರನ್ನು ಹಿಂದಕ್ಕೆ ಕರೆತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಕಾರೇಹನ ಮಗನಾದ ಯೋಹಾನಾನನೂ, ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗ ಗೆದಲ್ಯನನ್ನು ಕೊಂದುಹಾಕಿದ ತರುವಾಯ, ತಪ್ಪಿಸಿಬಿಟ್ಟಿದ್ದ ಉಳಿದ ಜನರೆಲ್ಲರನ್ನು ಎಂದರೆ, ಗಿಬ್ಯೋನನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಕಂಚುಕಿಯರನ್ನೂ ಮಿಚ್ಪದಿಂದ ಕರೆದುಕೊಂಡು ಹೊರಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 41:16
4 ತಿಳಿವುಗಳ ಹೋಲಿಕೆ  

ಆಗ ಅವನು ಕಾರೇಹನ ಮಗನಾದ ಯೋಹಾನಾನನನ್ನೂ ಅವನೊಂದಿಗಿದ್ದ ಸಕಲ ಸೇನಾಪತಿಗಳನ್ನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರನ್ನೂ ಕರೆದು -


ಆಮೇಲೆ ನೆತನ್ಯನ ಮಗನಾದ ಇಷ್ಮಾಯೇಲನು ರಾಜಕುಮಾರ್ತೆಯರನ್ನು, ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿದ ವಿುಚ್ಪದ ಜನಶೇಷವನ್ನು, ಅಂತು ವಿುಚ್ಪದಲ್ಲಿ ಉಳಿದವರೆಲ್ಲರನ್ನೂ ಸೆರೆಹಿಡಿದು ಅಮ್ಮೋನ್ಯರ ಸೀಮೆಗೆ ಹೊರಟನು.


[ತಪ್ಪಿಸಿಕೊಂಡು ಉಳಿದಿದ್ದ] ಯೆಹೂದ ಸೇನಾಪತಿಗಳು ಗೆದಲ್ಯನು ಬಾಬೆಲಿನ ಅರಸನಿಂದ ಅಧಿಪತಿಯಾಗಿ ನೇವಿುಸಲ್ಪಟ್ಟನೆಂಬ ವರ್ತಮಾನವನ್ನು ಕೇಳಿ ತಮ್ಮ ಜನರೊಡನೆ ವಿುಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು. ಅವರು ಯಾರಂದರೆ - ನೆತನ್ಯನ ಮಗನಾದ ಇಷ್ಮಾಯೇಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು