Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 41:9 - ಕನ್ನಡ ಸತ್ಯವೇದವು J.V. (BSI)

9 ಇಷ್ಮಾಯೇಲನು ತಾನು ಕೊಂದವರ ಶವಗಳನ್ನು ಗೆದಲ್ಯನ ಶವದ ಮೇಲೆ ಹಾಕಿದ ಬಾವಿಯು, ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ. ಆ ಬಾವಿಯನ್ನು ನೆತನ್ಯನ ಮಗನಾದ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಷ್ಮಾಯೇಲನು ತಾನು ಗೆದಲ್ಯನ ಸಂಗಡ ಕೊಂದ ಇತರರ ಶವಗಳನ್ನು ಹಾಕಿದ ಬಾವಿಯು, ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ. ಆ ಬಾವಿಯನ್ನು ನೆತನ್ಯನ ಮಗನಾದ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಇಷ್ಮಾಯೇಲನು ತಾನು ಕೊಂದವರ ಶವಗಳನ್ನು ಗೆದಲ್ಯನ ಶವದ ಮೇಲೆ ಹಾಕಿಸಿದನು. ಹೀಗೆ ಹಾಕಿಸಿದ ಆ ಬಾವಿಯು ಇಸ್ರಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ ಆಗಿತ್ತು. ಆ ಬಾವಿಯನ್ನು ನೆತನ್ಯನ ಮಗ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇಷ್ಮಾಯೇಲನು ಶವಗಳನ್ನು ಆ ಬಾವಿಯೊಳಗೆ ಹಾಕಿದನು. ಆ ಬಾವಿಯು ಬಹಳ ದೊಡ್ಡದಾಗಿತ್ತು. ಅದನ್ನು ಯೆಹೂದದ ರಾಜನಾದ ಆಸನು ತೋಡಿಸಿದ್ದನು. ಯುದ್ಧದ ಸಮಯದಲ್ಲಿ ನಗರದಲ್ಲಿ ನೀರು ಸಾಕಷ್ಟು ಇರಬೇಕೆಂಬ ಉದ್ದೇಶದಿಂದ ರಾಜನಾದ ಆಸನು ಈ ಬಾವಿಯನ್ನು ತೋಡಿಸಿದ್ದನು. ರಾಜನಾದ ಆಸನು ತನ್ನ ನಗರವನ್ನು ಇಸ್ರೇಲಿನ ರಾಜನಾದ ಬಾಷನಿಂದ ರಕ್ಷಿಸುವುದಕ್ಕಾಗಿ ಇದನ್ನು ಕಟ್ಟಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದುಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಬಾವಿಯು, ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ತೋಡಿಸಿದ್ದ ಬಾವಿಯೇ ಆಗಿತ್ತು. ಇದನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದು ಹಾಕಿದವರಿಂದ ತುಂಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 41:9
11 ತಿಳಿವುಗಳ ಹೋಲಿಕೆ  

ಅವನು ಈಗ ಒಂದು ಗುಹೆಯಲ್ಲಾಗಲಿ ಬೇರೆ ಯಾವದಾದರೊಂದು ಸ್ಥಳದಲ್ಲಾಗಲಿ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಮಡಿದರೆ ಜನರು ಇದನ್ನು ಕೇಳಿ ಅಬ್ಷಾಲೋಮನ ಪಕ್ಷದವರಿಗೆ ಮಹಾಪಜಯವಾಯಿತೆಂದು ಸುದ್ದಿ ಹಬ್ಬಿಸುವರು.


ಇಸ್ರಾಯೇಲ್ಯರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.


ವಿುದ್ಯಾನ್ಯರ ಹಸ್ತವು ಬಲಗೊಂಡದರಿಂದ ಇಸ್ರಾಯೇಲ್ಯರು ಅವರಿಗೆ ಹೆದರಿ ಪರ್ವತಗಳಲ್ಲಿ ಕಂದರಗುಹೆದುರ್ಗಗಳನ್ನು ಮಾಡಿ ಸೇರಿಕೊಂಡರು.


ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಲ್ಲ; ಅವರು ತಮ್ಮ ದೇಶದ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.


ಅವನು ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕೋಸ್ಕರ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂಗಡೆಯಲ್ಲಿ ಅಡಗಿಕೊಂಡಿದ್ದರು.


ಎಫ್ರಾಯೀಮ್ ಪರ್ವತಪ್ರಾಂತದಲ್ಲಿ ಅಡಗಿಕೊಂಡಿದ್ದ ಇಸ್ರಾಯೇಲ್ಯರಿಗೆ ಫಿಲಿಷ್ಟಿಯರು ಓಡಿಹೋದರೆಂಬ ವರ್ತಮಾನವು ಮುಟ್ಟಿದಾಗ ಅವರೂ ಯುದ್ಧಕ್ಕೆ ಬಂದು ಅವರನ್ನು ಬೆನ್ನಟ್ಟಿದರು.


ಇವರಿಬ್ಬರೂ ಫಿಲಿಷ್ಟಿಯರ ಕಾವಲುದಂಡಿನವರಿಗೆ ಕಾಣಿಸಿಕೊಂಡಾಗ ಅವರು - ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಗೆ ಬರುತ್ತಲಿದ್ದಾರೆ ಎಂದು ತಮ್ಮೊಳಗೆ ಮಾತಾಡಿಕೊಂಡು


ನೀನಾದರೋ ನಿನ್ನ ಗೋರಿಗೆ ದೂರವಾಗಿ ಕೆಟ್ಟ ಮೊಳಿಕೆಯಂತೆ ಬಿಸಾಡಲ್ಪಟ್ಟಿದ್ದೀ; ನಿನ್ನ ಶವವು ತುಳಿತಕ್ಕೆ ಈಡಾಗಿದೆ, ಕತ್ತಿ ತಿವಿದು ಗುಂಡಿಯ ಕಲ್ಲುಗಳ ಪಾಲಾದ ಹತರೇ ಅದಕ್ಕೆ ಹೊದಿಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು