Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:10 - ಕನ್ನಡ ಸತ್ಯವೇದವು J.V. (BSI)

10 ನೀವು ಈ ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ‘ನೀವು ಈ ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವುದಿಲ್ಲ; ನೆಡುವೆನು, ಕೀಳುವುದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ‘ನೀವು ಈ ನಾಡಿನಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡುವುದಿಲ್ಲ, ನೆಡುವೆನು, ಕೀಳುವುದಿಲ್ಲ, ನಾನು ನಿಮಗೆ ಮಾಡಿದ ಕೇಡಿಗಾಗಿ ವಿಷಾದಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ‘ನೀವು ಯೆಹೂದದಲ್ಲಿ ವಾಸಮಾಡಿದರೆ ನಾನು ನಿಮ್ಮನ್ನು ನಾಶಮಾಡದೆ ಬಲಶಾಲಿಗಳನ್ನಾಗಿ ಮಾಡುತ್ತೇನೆ. ನಾನು ನಿಮ್ಮನ್ನು ನೆಡುತ್ತೇನೆ, ನಿಮ್ಮನ್ನು ಕೀಳುವುದಿಲ್ಲ. ನಾನು ನಿಮಗೆ ಬರಮಾಡಿದ ಭಯಂಕರವಾದ ಕೇಡಿಗಾಗಿ ದುಃಖಿತನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ‘ನೀವು ಇನ್ನು ಈ ದೇಶದಲ್ಲಿ ವಾಸಮಾಡಿದರೆ, ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತು ಹಾಕದೆ ನೆಡುವೆನು. ಏಕೆಂದರೆ ನಾನು ನಿಮಗೆ ಮಾಡಿರುವ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:10
25 ತಿಳಿವುಗಳ ಹೋಲಿಕೆ  

ಯೆಹೋವನಾದ ನಾನೇ ಬಿದ್ದುಹೋದದನ್ನು ಕಟ್ಟಿ ಹಾಳಾದದನ್ನು ಬೆಳೆಯಿಸಿದ್ದೇನೆಂಬದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವದು; ಯೆಹೋವನಾದ ನಾನೇ ನುಡಿದಿದ್ದೇನೆ, ನಡಿಸುತ್ತೇನೆ.


ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.


ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರಿಗಿ ಬರಮಾಡುವೆನು; ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವದಿಲ್ಲ.


ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು ನಿಮ್ಮ ದೇವರಾದ ಯೆಹೋವನ ಕಡೆಗೆ ತಿರಿಗಿಕೊಳ್ಳಿರಿ; ಆತನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳವನಾಗಿ ಮಾಡಬೇಕೆಂದಿದ್ದ ಕೇಡಿಗೆ ಮನಮರುಗುತ್ತಾನೆ.


ಕರ್ತನಾದ ಯೆಹೋವನು ಮನಮರುಗಿ ಈ ದರ್ಶನವೂ ನೆರವೇರದು ಅಂದನು.


ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಊರ್ಜಿತಪಡಿಸುವೆನು.


ಅವನು ಸಿಟ್ಟುಗೊಂಡು - ಯೆಹೋವಾ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವದೆಂದು ಹೇಳಿದೆನಷ್ಟೆ; ನೀನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ ತಾರ್ಷೀಷಿಗೆ ಓಡಿ ಹೋಗಲು ತ್ವರೆಪಟ್ಟೆನು.


ದೇವರು ನಿನೆವೆಯವರ ಕಾರ್ಯಗಳನ್ನು ನೋಡಿ ಅವರು ತಮ್ಮ ದುರ್ಮಾರ್ಗದಿಂದ ತಿರುಗಿಕೊಂಡರೆಂದು ತಿಳಿದು ಮನಮರುಗಿ ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.


ಯೆಹೋವನು ಮನಮರುಗಿ ಈ ದರ್ಶನವು ನೆರವೇರದು ಅಂದನು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮದ ಗತಿಗೆ ಹೇಗೆ ತರಲಿ! ಚೆಬೋಯೀವಿುನಂತೆ ಹೇಗೆ ನಾಶಮಾಡಲಿ! ನನ್ನೊಳಗೆ ಮನಸ್ಸು ತಿರುಗಿತು, ಕರುಳು ತೀರಾ ಮರುಗಿತು.


ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬೇರೆ ಮಾಡಿಕೊಂಡನು.


ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತುವೆನು. ಅದರಲ್ಲಿ ಹಾಳಾದದ್ದನ್ನು ನಾನು ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು.


ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ [ಇವನನ್ನು ಕೊಂದುಹಾಕಿ] ನಮಗೆ ದೊಡ್ಡ ಕೇಡನ್ನು ಉಂಟುಮಾಡಿಕೊಳ್ಳುವವರಾಗಿದ್ದೇವೆ ಎಂಬದಾಗಿ ಸಕಲಜನ ಸಮೂಹಕ್ಕೆ ಹೇಳಿದರು.


ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ಆತನು ಮಹಿಮೆಯಲ್ಲಿ ಬಂದು ಚೀಯೋನನ್ನು ತಿರಿಗಿ ಕಟ್ಟಿಸಿದನೆಂದೂ


ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ ಯೆಹೂದದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಸ್ವದೇಶವಾಗಿ ಮಾಡಿಕೊಳ್ಳುವರು.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ದೇವದೂತನು ಯೆರೂಸಲೇಮನ್ನೂ ಸಂಹರಿಸುವದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕದೂತನಿಗೆ - ಈಗ ಸಾಕು, ನಿನ್ನ ಕೈಯನ್ನು ಹಿಂದೆಗೆ ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ ಕನಿಕರಪಟ್ಟು ನ್ಯಾಯಸ್ಥಾಪಕರನ್ನು ಎಬ್ಬಿಸಿ ಅವರ ಜೀವಮಾನವೆಲ್ಲಾ ಅವರ ಸಂಗಡ ಇದ್ದು ಅವರ ಮೂಲಕವಾಗಿ ಇಸ್ರಾಯೇಲ್ಯರನ್ನು ಶತ್ರುಗಳಿಂದ ಬಿಡಿಸಿದನು.


ಆಗ ಯೆಹೋವನು ತನ್ನ ಜನರಿಗೋಸ್ಕರ ನ್ಯಾಯತೀರಿಸುವನು. ಪರತಂತ್ರರಾಗಲಿ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಯರಾಗಿ ನಿಶ್ಶೇಷರಾದದ್ದನ್ನು ಆತನು ತಿಳಿದಾಗ ತನ್ನ ಸೇವಕರಾದ ಅವರ ವಿಷಯದಲ್ಲಿ ಪಶ್ಚಾತ್ತಾಪಪಡುವನು.


ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವದೋ ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಗೆಯ್ದು ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.


ಹೀಗೆ ಯೆಹೂದ ದೇಶದಲ್ಲಿಯೇ ವಾಸಮಾಡಿರಿ ಎನ್ನುವ ಯೆಹೋವನ ಮಾತನ್ನು ಕಾರೇಹನ ಮಗನಾದ ಯೋಹಾನಾನನೂ ಸಮಸ್ತ ಸೇನಾಪತಿಗಳೂ ಸಕಲಜನರೂ ಕೇಳದೆ ಹೋದರು.


ಯೋನನು ಪಟ್ಟಣದಲ್ಲಿ ಸೇರಿ ಮೊದಲು ಒಂದು ದಿವಸದ ಪ್ರಯಾಣದಷ್ಟು ದೂರ ನಡೆದು - ನಾಲ್ವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವದು ಎಂದು ಸಾರ ತೊಡಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು