Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:14 - ಕನ್ನಡ ಸತ್ಯವೇದವು J.V. (BSI)

14 ನಾವು ಯುದ್ಧಕಾಣದೆ ತುತೂರಿಯ ಶಬ್ದಕೇಳದೆ ಅನ್ನದ ಕೊರತೆಯಿಂದ ಹಸಿವೆಗೊಳ್ಳದೆ ಇರುವ ಐಗುಪ್ತದೇಶಕ್ಕೆ ಹೋಗಿ ಅಲ್ಲೇ ವಾಸಿಸುವೆವು ಎಂದುಕೊಂಡರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬೇಡವೇ ಬೇಡ; ನಾವು ಯುದ್ಧ ಕಾಣದೆ, ತುತ್ತೂರಿಯ ಶಬ್ದ ಕೇಳದೆ, ಅನ್ನದ ಕೊರತೆಯಿಂದ ಹಸಿವಾಗದೆ ಇರುವ ಐಗುಪ್ತ ದೇಶಕ್ಕೆ ಹೋಗಿ ಅಲ್ಲೇ ವಾಸಿಸುವೆವು’ ಎಂದುಕೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾವು ಈಜಿಪ್ಟಿನಲ್ಲೇ ವಾಸಮಾಡುತ್ತೇವೆ. ಅದು ಯುದ್ಧ ಕಾಣದ, ರಣಕಹಳೆ ಕೇಳದ, ಕೂಳಿನ ಕೊರತೆಯಿಲ್ಲದ ದೇಶ.’ ಎಂದುಕೊಳ್ಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ‘ಇಲ್ಲ, ನಾವು ಈಜಿಪ್ಟಿಗೆ ಹೋಗಿ ಅಲ್ಲಿ ವಾಸಮಾಡುವೆವು. ಅಲ್ಲಿ ನಮಗೆ ಯುದ್ಧದ ಭಯವಿಲ್ಲ. ಯುದ್ಧದ ತುತ್ತೂರಿಗಳ ಶಬ್ಧವು ಕೇಳುವುದಿಲ್ಲ; ಅಲ್ಲಿ ನಮಗೆ ಹಸಿವೆ ಇರುವುದಿಲ್ಲ’ ಎಂದು ನೀವು ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು, ‘ಇಲ್ಲ, ನಾವು ಈಜಿಪ್ಟ್ ದೇಶಕ್ಕೆ ಹೋಗುತ್ತೇವೆ; ಅಲ್ಲಿ ನಾವು ಯುದ್ಧವನ್ನು ನೋಡುವುದಿಲ್ಲ, ತುತೂರಿಯ ಶಬ್ದವನ್ನು ಕೇಳುವುದಿಲ್ಲ, ರೊಟ್ಟಿಯ ವಿಷಯ ಕ್ಷಾಮವಾಗುವುದಿಲ್ಲ.’ ಅಲ್ಲಿ ವಾಸಮಾಡುವೆವೆಂದು ಹೇಳಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:14
15 ತಿಳಿವುಗಳ ಹೋಲಿಕೆ  

ಕಸ್ದೀಯರ ಭಯದಿಂದ ಐಗುಪ್ತಕ್ಕೆ ವಲಸೆಹೋಗಬೇಕೆಂದು ಬೇತ್ಲೆಹೇವಿುನ ಸಮೀಪವಾಗಿರುವ ಗೇರುಥ್ ಕಿಮ್ಹಾವಿುನಲ್ಲಿ ಇಳಿದುಕೊಂಡರು.


ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತೇನೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತೂರಿಯ ಶಬ್ದವನ್ನೂ ಯುದ್ಧಘೋಷವನ್ನೂ ಕೇಳುತ್ತೀಯಲ್ಲಾ.


ನಾನು ಎಷ್ಟರವರೆಗೆ ಧ್ವಜವನ್ನು ನೋಡಲಿ, ಎಂದಿನ ತನಕ ತುತೂರಿಯ ಶಬ್ದವನ್ನು ಕೇಳಲಿ!


ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸಪಡುತ್ತಾರೆ; ಆದರೆ ಇಸ್ರಾಯೇಲ್ಯರ ಸದಮಲಸ್ವಾವಿುಯ ಕಡೆಗೆ ದೃಷ್ಟಿಯಿಡುವದಿಲ್ಲ, ಯೆಹೋವನನ್ನು ಆಶ್ರಯಿಸುವದಿಲ್ಲ;


ಅವರಿಗೆ - ಈ ಸಮೂಹವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ನೀವು ಈ ಅರಣ್ಯದೊಳಕ್ಕೆ ನಮ್ಮನ್ನು ಕರಕೊಂಡು ಬಂದಿರಷ್ಟೆ. ನಾವು ಐಗುಪ್ತದೇಶದಲ್ಲಿದ್ದಾಗ ಯೆಹೋವನ ಕೈಯಿಂದ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಆಗ ಮಾಂಸಪಾತ್ರೆಗಳ ಬಳಿಯಲ್ಲಿ ಕೂತು ಹೊಟ್ಟೇತುಂಬ ಊಟಮಾಡುತ್ತಿದ್ದೆವಲ್ಲಾ ಎಂದು ಹೇಳಿದರು.


ಇವರೆಲ್ಲರನ್ನೂ ಕಾರೇಹನ ಮಗನಾದ ಯೋಹಾನಾನನೂ ಸಕಲ ಸೇನಾಪತಿಗಳೂ ಕರೆದುಕೊಂಡು ಐಗುಪ್ತಕ್ಕೆ ಹೋಗಿ ತಹಪನೇಸ್ ಊರಿಗೆ ಸೇರಿದರು. ಯೆಹೋವನ ಮಾತನ್ನು ಕೇಳಲೇ ಇಲ್ಲ.


ನೀವು - ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು ಎಂದುಕೊಂಡದರಿಂದ ಓಡೇ ಹೋಗುವಿರಿ; ನೀವು - ವೇಗವಾಗಿ ಸವಾರಿಮಾಡುವೆವು ಎಂದುಕೊಂಡದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿ ಬಿಡುವರು;


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ - ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವದು ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶನವನ್ನುಂಟುಮಾಡಾನು.


ನಾವು ಬರುವದಿಲ್ಲ, ನೀನು ಹಾಲೂ ಜೇನೂಹರಿಯವ ದೇಶದಿಂದ ನಮ್ಮನ್ನು ಕರಕೊಂಡು ಬಂದು ಮರಳುಕಾಡಿನಲ್ಲಿ ಸಾಯಿಸುವದು ಅಲ್ಪಕಾರ್ಯವೆಂದು ಎಣಿಸಿ ನಮ್ಮ ಮೇಲೆ ದೊರೆತನ ಮಾಡಬೇಕೆಂದು ಕೋರುತ್ತೀಯೋ?


ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಸಂಕಟದಿಂದ ಮೋಶೆಯ ಮೇಲೆ ಗುಣುಗುಟ್ಟುತ್ತಾ - ನೀನು ನಮ್ಮನ್ನೂ ನಮ್ಮ ಮಕ್ಕಳನ್ನೂ ದನಗಳನ್ನೂ ಐಗುಪ್ತ ದೇಶದಿಂದ ಕರತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ ಎಂದರು.


ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವದಕ್ಕೆ ಈ ದೇಶಕ್ಕೆ ಬರಮಾಡುತ್ತಾನೆ; ನಮ್ಮ ಹೆಂಡರೂ ಮಕ್ಕಳೂ ಪರರ ಪಾಲಾಗುವರಲ್ಲಾ; ನಾವು ಐಗುಪ್ತದೇಶಕ್ಕೆ ತಿರಿಗಿ ಹೋಗುವದು ಒಳ್ಳೇದಲ್ಲವೇ ಎಂದು ಹೇಳಿಕೊಳ್ಳುತ್ತಾ ಒಬ್ಬರ ಸಂಗಡಲೊಬ್ಬರು -


ನಾವು ನಾಯಕನನ್ನು ನೇವಿುಸಿಕೊಂಡು ಐಗುಪ್ತದೇಶಕ್ಕೆ ತಿರಿಗಿ ಹೋಗೋಣ ಎಂದು ಮಾತಾಡಿಕೊಳ್ಳುತ್ತಿದ್ದರು.


ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.


ಫರೋಹನ ಆಶ್ರಯವನ್ನು ಪಡೆದು ಐಗುಪ್ತವನ್ನು ಮರೆಹೊಗಬೇಕೆಂದು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು