ಯೆರೆಮೀಯ 42:6 - ಕನ್ನಡ ಸತ್ಯವೇದವು J.V. (BSI)6 ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವದಷ್ಟೆ ಎಂಬದಾಗಿ ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಥವಾ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವುದು” ಎಂಬುದಾಗಿ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಮ್ಮ ದೇವರಾದ ಸರ್ವೇಶ್ವರನ ಮಾತು ಹಿತವಾಗಿರಲಿ, ಅಹಿತವಾಗಿರಲಿ ಅದನ್ನು ಕೈಗೊಳ್ಳುತ್ತೇವೆ. ಅವರ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ನಾವು ಕಳುಹಿಸಿದ್ದೇವೆ. ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಿದರೆ ನಮಗೇ ಶುಭವಾಗುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನ ಸಂದೇಶವು ನಮಗೆ ಇಷ್ಟವಾಗಲಿ ಅಥವಾ ಇಷ್ಟವಾಗದಿರಲಿ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸುತ್ತೇವೆ. ಯೆಹೋವನ ಸಂದೇಶಕ್ಕಾಗಿ ನಾವು ನಿನ್ನನ್ನು ಆತನಲ್ಲಿಗೆ ಕಳುಹಿಸುತ್ತಿದ್ದೇವೆ. ಆತನು ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ. ಆಗ ನಮಗೆ ಒಳ್ಳೆಯದಾಗುತ್ತದೆ. ಹೌದು, ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ ನಾವು ನಡೆದುಕೊಳ್ಳುತ್ತೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾವು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇವೋ, ಆ ನಮ್ಮ ದೇವರಾದ ಯೆಹೋವ ದೇವರ ಮಾತನ್ನು ಅದು ಹಿತವಾದರೂ ಸರಿಯೇ, ಅಹಿತವಾದರೂ ಸರಿಯೇ ಕೇಳುವೆವು,” ಎಂದರು. ಅಧ್ಯಾಯವನ್ನು ನೋಡಿ |