Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 43:10 - ಕನ್ನಡ ಸತ್ಯವೇದವು J.V. (BSI)

10 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಮರೆಮಾಡಿಸಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಹಾಕಿಸುವೆನು; ಅವನು ಈ ಕಲ್ಲುಗಳ ಮೇಲೆಯೇ ತನ್ನ ರತ್ನಗಂಬಳಿಯನ್ನು ಹಾಸಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ‘ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಬಾಬೆಲಿನ ಅರಸನೂ, ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಕರೆಯಿಸಿ, ನಾನು ಮರೆಮಾಡಿಸಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಹಾಕಿಸುವೆನು; ಅವನು ಈ ಕಲ್ಲುಗಳ ಮೇಲೆಯೇ ತನ್ನ ರತ್ನಗಂಬಳಿಯನ್ನು ಹಾಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ‘ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೇಳುವುದನ್ನು ಕೇಳಿ: ನಾನು ಬಾಬಿಲೋನಿನ ಅರಸನು ಹಾಗು ನನ್ನ ಸೇವಕನು ಆದ ನೆಬೂಕದ್ನೆಚ್ಚರನನ್ನು ನಾನು ಕರೆಯಿಸುವೆನು. ನಾನು ಮರೆಮಾಡಿಟ್ಟಿರುವ ಈ ಕಲ್ಲುಗಳ ಮೇಲೆಯೆ ಅವನು ತನ್ನ ಸಿಂಹಾಸನವನ್ನು ಹಾಕಿಸುವನು. ಈ ಕಲ್ಲುಗಳ ಮೇಲೆಯೆ ತನ್ನ ರತ್ನಗಂಬಳಿಯನ್ನು ಹಾಸಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿನ್ನನ್ನು ನೋಡುತ್ತಿದ್ದ ಆ ಯೆಹೂದ್ಯರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಇಲ್ಲಿಗೆ ಕರೆಸುತ್ತೇನೆ. ಅವನು ನನ್ನ ಸೇವಕನಾಗಿದ್ದಾನೆ. ನಾನು ಈ ಸ್ಥಳದಲ್ಲಿ ಹೂಳಿದ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಸ್ಥಾಪಿಸುತ್ತೇನೆ. ನೆಬೂಕದ್ನೆಚ್ಚರನು ಈ ಕಲ್ಲುಗಳ ಮೇಲೆ ತನ್ನ ಗುಡಾರವನ್ನು ಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ, ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು. ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 43:10
19 ತಿಳಿವುಗಳ ಹೋಲಿಕೆ  

ಇಗೋ, ನಾನು ಬಡಗಣ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇವಿುನ ಊರು ಬಾಗಲುಗಳ ಎದುರಿನಲ್ಲಿಯೂ ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.


ಮತ್ತು ಕೋರೆಷನ ವಿಷಯವಾಗಿ - ಅವನು ನನ್ನ ಮಂದೆ ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ ಎಂದು ಹೇಳಿ ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು ಎಂಬದಾಗಿ ಮಾತಾಡುವವನಾಗಿದ್ದೇನೆ.


ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗೋಪ್ಯಸ್ಥಳದಲ್ಲಿ ಅಡಗಿಸುತ್ತೀ.


ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಾಗ್ರದಲ್ಲಿ ನನ್ನನ್ನು ಸುರಕ್ಷಿತವಾಗಿ ಇರಿಸುವನು.


ಕತ್ತಲನ್ನು ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡು ಜಲಮಯವಾಗಿರುವ ನೀಲಮೇಘಗಳ ಮಧ್ಯದಲ್ಲಿ ಮರೆಯಾದನು.


ಅರಸನು ಸಿಟ್ಟುಗೊಂಡು ತನ್ನ ದಂಡುಗಳನ್ನು ಕಳುಹಿಸಿ ಆ ಕೊಲೆಗಾರರನ್ನು ನಾಶಮಾಡಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ತಳ್ಳುತ್ತಾನೆ, ನಿಲ್ಲಿಸುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ;


ಮಧ್ಯಾಹ್ನದಲ್ಲಿ ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಮಂದಿ ಅರಸರ ಸಂಗಡ ಮದ್ಯಪಾನಮಾಡಿ ಮತ್ತನಾಗಿ ಡೇರೆಯಲ್ಲಿ ಕೂತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.


ತನ್ನ ಅರಸುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೆ ಪಟ್ಟಣಕ್ಕೆ ಲಗ್ಗೆ ಹತ್ತುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.


ಯೆಹೋವನು ಯಾವನ ಕೈಹಿಡಿದು ಯಾವನೆದುರಿಗೆ ಜನಾಂಗಗಳನ್ನು ತುಳಿದು ರಾಜರ ನಡುಕಟ್ಟನ್ನು ಬಿಚ್ಚಿ ಯಾವನ ಮುಂದೆ ಬಾಗಿಲುಹೆಬ್ಬಾಗಿಲುಗಳನ್ನು ತೆರೆದು ಮುಚ್ಚಲೀಸನೋ ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ -


ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಯೆಹೂದ್ಯರ ಕಣ್ಣೆದುರಿಗೆ ನೆಲಗಟ್ಟಿನ ಕೆಳಗೆ ಇಟ್ಟು ಗಾರೆಯಿಂದ ಮುಚ್ಚಿಬಿಟ್ಟು ಅವರಿಗೆ ಹೀಗೆ ಹೇಳು -


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತದೇಶವನ್ನು ಹೊಡೆಯುವನು ಎಂಬದಾಗಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ನುಡಿದ ವಾಕ್ಯವು.


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ನಿನ್ನ ಸಿಂಹಾಸನವನ್ನು ಏಲಾವಿುನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ ಪ್ರಧಾನರನ್ನೂ ಅಳಿಸಿಬಿಡುವೆನು. ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು