Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 43:11 - ಕನ್ನಡ ಸತ್ಯವೇದವು J.V. (BSI)

11 ಅವನು ಬಂದು ಐಗುಪ್ತದೇಶವನ್ನು ಹೊಡೆಯುವನು; ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಗೆ ಗೊತ್ತಾದವರು ಸೆರೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಬಂದು ಐಗುಪ್ತ ದೇಶವನ್ನು ಹೊಡೆಯುವನು. ಮರಣಕ್ಕೆ ನೇಮಕವಾದವರು ಮರಣಕ್ಕೆ, ಸೆರೆಗೆ ನೇಮಕವಾದವರು ಸೆರೆಗೆ, ಖಡ್ಗಕ್ಕೆ ನೇಮಕವಾದವರು ಖಡ್ಗಕ್ಕೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವನು ಬಂದು ಈಜಿಪ್ಟ್ ದೇಶದ ಮೇಲೆ ಧಾಳಿಮಾಡುವನು. ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಮನೆಗೆ ಗೊತ್ತಾದವರು ಸೆರೆಮನೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೆಬೂಕದ್ನೆಚ್ಚರನು ಇಲ್ಲಿಗೆ ಬಂದು ಈಜಿಪ್ಟಿನ ಮೇಲೆ ಧಾಳಿ ಮಾಡುವನು. ಕೊಲ್ಲಬೇಕೆಂದು ಗೊತ್ತುಮಾಡಿದವರನ್ನು ಕೊಂದುಹಾಕುವನು; ಸೆರೆಹಿಡಿಯಬೇಕೆಂದು ಗೊತ್ತು ಮಾಡಿಕೊಂಡವರನ್ನು ಸೆರೆಹಿಡಿಯುವನು; ಖಡ್ಗದಿಂದ ಕೊಲೆಯಾಗಬೇಕೆಂದು ಗೊತ್ತುಪಡಿಸಿದವರ ಸಲುವಾಗಿ ಅವನು ಖಡ್ಗವನ್ನು ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನು ಬಂದು ಈಜಿಪ್ಟ್ ದೇಶವನ್ನು ಹೊಡೆದು, ಮರಣಕ್ಕೆ ಇರುವವರನ್ನು ಮರಣಕ್ಕೂ, ಸೆರೆಗೆ ಇರುವವರನ್ನು ಸೆರೆಗೂ, ಖಡ್ಗಕ್ಕೆ ಇರುವವರನ್ನು ಖಡ್ಗಕ್ಕೂ ಒಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 43:11
15 ತಿಳಿವುಗಳ ಹೋಲಿಕೆ  

ನಾನು ಯೆರೂಸಲೇವಿುನವರನ್ನು ಖಡ್ಗಕ್ಷಾಮವ್ಯಾಧಿಗಳಿಂದ ದಂಡಿಸಿದಂತೆ ಐಗುಪ್ತದಲ್ಲಿ ವಾಸಿಸುವವರನ್ನೂ ದಂಡಿಸುವೆನು;


ನೀನು ಅವರಿಗೆ - ಮರಣವ್ಯಾಧಿಗೆ ಗೊತ್ತಾದವರು ಮರಣವ್ಯಾಧಿಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ, ಕ್ಷಾಮಕ್ಕೆ ಗೊತ್ತಾದವರು ಕ್ಷಾಮಕ್ಕೆ, ಸೆರೆಗೆ ಗೊತ್ತಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ ಎಂದು ಹೇಳು.


ಆಗ ನಾನು - ನಿಮ್ಮನ್ನು ಮೇಯಿಸೆನು; ಸಾಯುವದು ಸಾಯಲಿ, ಹಾಳಾಗುವದು ಹಾಳಾಗಲಿ, ಉಳಿದವುಗಳು ಒಂದರ ಮಾಂಸವನ್ನೊಂದು ತಿನ್ನಲಿ ಅಂದುಕೊಂಡು


ಅದು ಈ ದಿನ ನೆರವೇರಿದೆ. ಮತ್ತು ಐಗುಪ್ತದ ಅರಸನಾದ ಫರೋಹನು, ಅವನ ಸೇವಕರು, ಪ್ರಧಾನರು,


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ ದೇವರು ನೇವಿುಸಿರುವ ಸ್ವಾಸ್ತ್ಯವೂ ಇವೇ.


ಇಸ್ರಾಯೇಲ್ಯರ ದೇವರಾದ ಯೆಹೋವನು ನನಗೆ - ರೋಷರೂಪಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.


ನೀವು ಯಾವ ಸ್ಥಳದಲ್ಲಿ ವಾಸಮಾಡಲಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತ ತಿಳಿಯಿರಿ.


ಯಾವ ಮನುಷ್ಯನೂ ಅಲ್ಲಿ ಹೆಜ್ಜೆಯಿಟ್ಟು ಹಾದುಹೋಗನು; ಯಾವ ಪಶುವೂ ತುಳಿದು ದಾಟಿಹೋಗದು; ನಾಲ್ವತ್ತು ವರುಷ ನಿರ್ಜನವಾಗಿರುವದು.


ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದಜನಶೇಷವನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗಕ್ಷಾಮಗಳಿಂದ ಸತ್ತು ಅಪವಾದ ವಿಸ್ಮಯ ಶಾಪ ದೂಷಣೆಗಳಿಗೆ ಗುರಿಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು