ಯೆರೆಮೀಯ 43:12 - ಕನ್ನಡ ಸತ್ಯವೇದವು J.V. (BSI)12 ನಾನು ಐಗುಪ್ತದ ದೇವಾಲಯಗಳಲ್ಲಿ ಬೆಂಕಿಹೊತ್ತಿಸುವೆನು, ಅವನು ಅವುಗಳನ್ನು ಸುಟ್ಟು ದೇವತೆಗಳನ್ನು ಸೆರೆ ಒಯ್ಯುವನು; ಕುರುಬನು ತನ್ನ ಕಂಬಳಿಯನ್ನು ಸುತ್ತಿಕೊಳ್ಳುವಂತೆ ಅವನು ಐಗುಪ್ತದೇಶವನ್ನು ಸುತ್ತಿಕೊಳ್ಳುವನು; ಸಮಾಧಾನವಾಗಿ ಅಲ್ಲಿಂದ ಹೊರಟು ಹೋಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾನು ಐಗುಪ್ತದ ದೇವಾಲಯಗಳಲ್ಲಿ ಬೆಂಕಿಹೊತ್ತಿಸುವೆನು, ಅವನು ಅವುಗಳನ್ನು ಸುಟ್ಟು ದೇವತೆಗಳನ್ನು ಸೆರೆ ಒಯ್ಯುವನು; ಕುರುಬನು ತನ್ನ ಕಂಬಳಿಯನ್ನು ಸುತ್ತಿಕೊಳ್ಳುವಂತೆ ಅವನು ಐಗುಪ್ತ ದೇಶವನ್ನು ಸುತ್ತಿಕೊಳ್ಳುವನು; ಸಮಾಧಾನವಾಗಿ ಅಲ್ಲಿಂದ ಹೊರಟು ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವನು ಈಜಿಪ್ಟಿನ ದೇವತೆಗಳ ಆಲಯಗಳಿಗೆ ಬೆಂಕಿ ಹೊತ್ತಿಸುವನು. ಅವುಗಳನ್ನು ಸುಟ್ಟು ಆ ದೇವತೆಗಳನ್ನು ಸೆರೆಗೊಯ್ಯುವನು. ಕುರುಬನು ತನ್ನ ಕಂಬಳಿಯನ್ನು ಸೋಸುವಂತೆ ಅವನು ಈಜಿಪ್ಟನ್ನು ಸೋಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಈಜಿಪ್ಟಿನ ಸುಳ್ಳುದೇವರುಗಳ ಆಲಯದಲ್ಲಿ ನೆಬೂಕದ್ನೆಚ್ಚರನು ಬೆಂಕಿಯನ್ನು ಹೊತ್ತಿಸುವನು, ಅವನು ಆಲಯಗಳನ್ನು ಸುಟ್ಟು ಆ ವಿಗ್ರಹಗಳನ್ನು ತೆಗೆದುಕೊಂಡು ಹೋಗುವನು. ಕುರುಬನು ತನ್ನ ಬಟ್ಟೆಗಳಿಂದ ತಿಗಣೆ ಮತ್ತು ಹೇನುಗಳನ್ನು ತೆಗೆದುಹಾಕಿ ಸ್ವಚ್ಛಗೊಳಿಸುವಂತೆ ನೆಬೂಕದ್ನೆಚ್ಚರನು ಈಜಿಪ್ಟನ್ನು ಬಿಟ್ಟು ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಾನು ಈಜಿಪ್ಟ್ ದೇವರುಗಳ ಆಲಯಗಳಲ್ಲಿ ಬೆಂಕಿ ಹಚ್ಚುವೆನು. ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು. ಕುರುಬನು ತನ್ನ ಉಡುಪನ್ನು ಹೇನುಗಳಿಂದ ಶುದ್ಧೀಕರಿಸುವಂತೆ ಅವನು ಈಜಿಪ್ಟ್ ದೇಶವನ್ನು ಶುದ್ಧವಾಗಿಸಿಕೊಂಡು ಅಲ್ಲಿಂದ ಸಮಾಧಾನವಾಗಿ ಹೊರಟು ಹೋಗುತ್ತಾನೆ. ಅಧ್ಯಾಯವನ್ನು ನೋಡಿ |
ಆ ವಸ್ತ್ರಗಳನ್ನೂ ಕುದುರೆಯನ್ನೂ ಪ್ರಧಾನರಾದ ಅರಸನ ಸರದಾರರಲ್ಲೊಬ್ಬನ ವಶಕ್ಕೆ ಕೊಟ್ಟು ಅರಸನು ಸನ್ಮಾನಿಸಬೇಕೆಂದಿರುವ ಪುರುಷನಿಗೆ ಆ ರಾಜವಸ್ತ್ರಗಳನ್ನು ಧಾರಣೆಮಾಡಿಸಿ ಅವನನ್ನು ಆ ಕುದುರೆಯ ಮೇಲೆ ಕುಳ್ಳಿರಿಸಿ ಪಟ್ಟಣದ ಮಧ್ಯದಲ್ಲಿ ಮೆರವಣಿಗೆಮಾಡಿಸುತ್ತಾ ಅವನ ಮುಂದೆ - ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ ಎಂದು ಪ್ರಕಟಣೆಮಾಡಿಸಬೇಕು ಎಂದು ಹೇಳಿದನು.