Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 43:4 - ಕನ್ನಡ ಸತ್ಯವೇದವು J.V. (BSI)

4 ಹೀಗೆ ಯೆಹೂದ ದೇಶದಲ್ಲಿಯೇ ವಾಸಮಾಡಿರಿ ಎನ್ನುವ ಯೆಹೋವನ ಮಾತನ್ನು ಕಾರೇಹನ ಮಗನಾದ ಯೋಹಾನಾನನೂ ಸಮಸ್ತ ಸೇನಾಪತಿಗಳೂ ಸಕಲಜನರೂ ಕೇಳದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗೆ ಯೆಹೂದ ದೇಶದಲ್ಲಿಯೇ ವಾಸಮಾಡಿರಿ ಎನ್ನುವ ಯೆಹೋವನ ಮಾತನ್ನು ಕಾರೇಹನ ಮಗನಾದ ಯೋಹಾನಾನನೂ, ಸಮಸ್ತ ಸೇನಾಧಿಪತಿಗಳೂ ಮತ್ತು ಸಕಲಜನರೂ ಕೇಳದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೀಗೆ ಜುದೇಯ ನಾಡಿನಲ್ಲೇ ವಾಸಮಾಡಿರೆಂಬ ಸರ್ವೇಶ್ವರನ ಮಾತನ್ನು ಕಾರೇಹನ ಮಗ ಯೋಹಾನಾನನು, ಸಮಸ್ತ ಸೇನಾಪತಿಗಳು, ಹಾಗು ಸಕಲ ಜನರು ಕೇಳದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೋಹಾನಾನನು, ಸೇನಾಧಿಪತಿಗಳು ಮತ್ತು ಎಲ್ಲಾ ಜನರು ಯೆಹೋವನ ಆಜ್ಞೆಯನ್ನು ಮೀರಿದರು. ಯೆಹೂದದಲ್ಲಿ ಇರಬೇಕೆಂದು ಯೆಹೋವನು ಅವರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈ ಪ್ರಕಾರ ಕಾರೇಹನ ಮಗ ಯೋಹಾನಾನನೂ, ಸೈನ್ಯಾಧಿಪತಿಗಳೆಲ್ಲರೂ, ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ, ಯೆಹೋವ ದೇವರ ಮಾತಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 43:4
10 ತಿಳಿವುಗಳ ಹೋಲಿಕೆ  

ಅನ್ಯದೇವತೆಗಳಿಗೆ ಧೂಪಹಾಕುವದನ್ನು ನಿಲ್ಲಿಸಲಿಲ್ಲ, ತಮ್ಮ ದುರಾಚಾರವನ್ನು ಬಿಡಲಿಲ್ಲ.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು - ನಿನ್ನನ್ನು ರಾಜಮಂತ್ರಿಯನ್ನಾಗಿ ನೇವಿುಸಿದ್ದೇವೋ? ಸುಮ್ಮನಿರು, ನಿನಗೆ ಪೆಟ್ಟು ಬೇಕೋ ಅನ್ನಲು ಅವನು - ನೀನು ನನ್ನ ಬುದ್ಧಿವಾದವನ್ನು ಲಾಲಿಸದೆ ಹೀಗೆ ಮಾಡುವದರಿಂದ ದೇವರು ನಿನ್ನನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆಂಬದಾಗಿ ನನಗೆ ತಿಳಿಯಬಂತು ಎಂದು ಹೇಳಿ ಸುಮ್ಮನಾದನು.


ನಾನು ಇದನ್ನು ನೋಡಿ, ಬಲಕ್ಕಿಂತ ಜ್ಞಾನವೇ ಶ್ರೇಷ್ಠ; ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರಮಾಡಿ ಅವನ ಮಾತುಗಳನ್ನು ಗಮನಿಸರು ಅಂದುಕೊಂಡೆನು.


ಆಗ ಎಲ್ಲಾ ಚಿಕ್ಕವರೂ ದೊಡ್ಡವರೂ ಸೇನಾಪತಿಗಳೂ ಕಸ್ದೀಯರಿಗೆ ಹೆದರಿ ಐಗುಪ್ತಕ್ಕೆ ಓಡಿಹೋದರು.


ಆಗ ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಮಸ್ತ ಸೇನಾಪತಿಗಳೂ ತಾವು ನೆತನ್ಯನ ಮಗನಾದ ಇಷ್ಮಾಯೇಲನ ಕೈಯಿಂದ ತಪ್ಪಿಸಿ ಗಿಬ್ಯೋನಿನಿಂದ ತಂದಿದ್ದ ಭಟರು, ಹೆಂಗಸರು, ಮಕ್ಕಳು, ಕಂಚುಕಿಗಳು, ಅಂತು ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದ ಮೇಲೆ ವಿುಚ್ಪದಿಂದ ಒಯ್ದ ಜನಶೇಷವನ್ನೆಲ್ಲಾ ಕರೆದುಕೊಂಡು ಹೋಗಿ


ಆಗ ಅವನು ಕಾರೇಹನ ಮಗನಾದ ಯೋಹಾನಾನನನ್ನೂ ಅವನೊಂದಿಗಿದ್ದ ಸಕಲ ಸೇನಾಪತಿಗಳನ್ನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರನ್ನೂ ಕರೆದು -


ನಾನು ಯೆಹೋವನ ಅಪ್ಪಣೆಯನ್ನು ಈ ದಿವಸ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು