5 ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ ಜನರು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಯೆಹೂದದಲ್ಲಿ ವಾಸಿಸುವದಕ್ಕೆ ಹಿಂದಿರುಗಿ ಬಂದಿದ್ದ ಯೆಹೂದ ಜನಶೇಷದವರು, ಪ್ರವಾದಿಯಾದ ಯೆರೆಮೀಯನು,
5 ಆಗ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ ಜನರು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಯೆಹೂದದಲ್ಲಿ ವಾಸಿಸುವುದಕ್ಕೆ ಹಿಂದಿರುಗಿ ಬಂದಿದ್ದ ಯೆಹೂದದ ಉಳಿದ ಜನರು, ಪ್ರವಾದಿಯಾದ ಯೆರೆಮೀಯನು,
5 ಆಗ ರಕ್ಷಾದಳದ ನಾಯಕನಾದ ನೆಬೂಜರದಾನನನ್ನು, ಅಹೀಕಾಮನ ಮಗ ಹಾಗು ಶಾಫಾನನ ಮೊಮ್ಮಗ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ್ದ ಜನರನ್ನು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಜುದೇಯದಲ್ಲಿ ವಾಸಿಸುವುದಕ್ಕೆ ಹಿಂದಿರುಗಿ ಬಂದಿದ್ದ ಅಳಿದುಳಿದ ಯೆಹೂದಜನರನ್ನು, ಪ್ರವಾದಿ ಯೆರೆಮೀಯನನ್ನು,
5 ಆದರೆ ಯೆಹೋವನ ಆಜ್ಞೆಯನ್ನು ಉಲ್ಲಂಘಿಸಿ ಯೋಹಾನಾನನು ಮತ್ತು ಸೇನಾಧಿಪತಿಗಳು ಅಳಿದುಳಿದ ಜನರನ್ನು ಯೆಹೂದದಿಂದ ಈಜಿಪ್ಟಿಗೆ ಕರೆದುಕೊಂಡು ಹೋದರು. ಈ ಮುಂಚೆ ಶತ್ರುಗಳು ಆ ಜನರನ್ನು ಬೇರೆ ದೇಶಗಳಿಗೆ ತೆಗೆದುಕೊಂಡು ಹೋಗಿದ್ದರು. ಆದರೆ ಅವರು ಯೆಹೂದಕ್ಕೆ ತಿರುಗಿ ಬಂದಿದ್ದರು.
ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ ಆತನಿಗೆ ಗಮಗವಿುಸುವ ನೈವೇದ್ಯವನ್ನು ಸಮರ್ಪಿಸಬೇಕು; ಮನುಷ್ಯರಾಗಿದ್ದರೆ ಈಗ ಅವರು ನನಗೆ ಯೆಹೋವನ ಸ್ವಾಸ್ತ್ಯದಲ್ಲಿ ಪಾಲುಸಿಕ್ಕದಂತೆ - ಹೋಗಿ ಅನ್ಯದೇವತೆಗಳನ್ನು ಸೇವಿಸು ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರಾದದರಿಂದ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ.
ನಾನಂತು ವಿುಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ ಎಂದು ಖಂಡಿತವಾಗಿ ಹೇಳಿದನು.