Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:12 - ಕನ್ನಡ ಸತ್ಯವೇದವು J.V. (BSI)

12 ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದಜನಶೇಷವನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗಕ್ಷಾಮಗಳಿಂದ ಸತ್ತು ಅಪವಾದ ವಿಸ್ಮಯ ಶಾಪ ದೂಷಣೆಗಳಿಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದದ ಉಳಿದ ಜನರನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗ ಮತ್ತು ಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗ ಮತ್ತು ಕ್ಷಾಮಗಳಿಂದ ಸತ್ತು ಅಪವಾದ, ಶಾಪ, ನಿಂದೆಗೆ ಮತ್ತು ದೂಷಣೆಗಳಿಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಈಜಿಪ್ಟಿಗೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಆ ಜುದೇಯದ ಅಳಿದುಳಿದ ಜನರನ್ನು ನಾಶಮಾಡುವೆನು. ಈಜಿಪ್ಟಿನಲ್ಲೆ ಅವರು ಮಣ್ಣುಪಾಲಾಗುವರು. ಖಡ್ಗ-ಕ್ಷಾಮಗಳಿಂದ ಅಳಿದುಹೋಗುವರು. ಚಿಕ್ಕವರು-ದೊಡ್ಡವರು ಎನ್ನದೆ ಖಡ್ಗ-ಕ್ಷಾಮಗಳಿಗೆ ತುತ್ತಾಗಿ, ಅಪವಾದ, ಅಪಹಾಸ್ಯಗಳಿಗೂ ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೂದದಲ್ಲಿ ಅಳಿದುಳಿದ ಕೆಲವು ಜನರಿದ್ದರು. ಆ ಜನರು ಈಜಿಪ್ಟಿನಲ್ಲಿ ನೆಲೆಸಲು ಬಂದರು. ಆದರೆ ನಾನು ಯೆಹೂದಕುಲದ ಆ ಕೆಲವು ಅಳಿದುಳಿದವರನ್ನು ನಾಶಮಾಡುವೆನು. ಅವರು ಕತ್ತಿಗಳಿಂದ ಕೊಲ್ಲಲ್ಪಡುವರು; ಹಸಿವಿನಿಂದ ಸತ್ತುಹೋಗುವರು. ಬೇರೆ ಜನಾಂಗಗಳ ಜನರು ಅವರ ಬಗ್ಗೆ ನಿಂದಿಸುವಂತೆ ಅವರ ಸ್ಥಿತಿ ಆಗುವುದು. ಅವರಿಗೆ ಉಂಟಾದ ದುರ್ಗತಿಯನ್ನು ನೋಡಿ ಬೇರೆ ಜನಾಂಗದ ಜನರು ಭಯಪಡುವರು. ಆ ಜನರು ಶಾಪದ ಶಬ್ಧವಾಗುವರು. ಬೇರೆ ಜನಾಂಗದವರು ಯೆಹೂದದ ಆ ಜನರಿಗೆ ಅಪಮಾನ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ಇಟ್ಟಿರುವ ಯೆಹೂದದಲ್ಲಿ ಉಳಿದಿರುವವರನ್ನು ತೆಗೆದುಕೊಳ್ಳುತ್ತೇನೆ. ಅವರೆಲ್ಲರು ಈಜಿಪ್ಟ್ ದೇಶದಲ್ಲಿ ನಾಶವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಅಳಿದುಹೋಗುವರು. ಚಿಕ್ಕವನು ಮೊದಲುಗೊಂಡು ದೊಡ್ಡವನವರೆಗೂ ಖಡ್ಗದಿಂದಲೂ ಕ್ಷಾಮದಿಂದಲೂ ಸಾಯುವರು. ಅಸಹ್ಯವೂ ಭಯವೂ ಶಾಪವೂ ನಿಂದೆಯೂ ಆಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:12
18 ತಿಳಿವುಗಳ ಹೋಲಿಕೆ  

ನೀವು ಯಾವ ಸ್ಥಳದಲ್ಲಿ ವಾಸಮಾಡಲಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತ ತಿಳಿಯಿರಿ.


ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟದರಿಂದ ಇನ್ನು ನನಗೆ ಯಾಜಕ ಸೇವೆಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು; ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ ನಾನು ನಿಮ್ಮ ಸಂತತಿಯವರನ್ನು ಮರೆಯುವೆನು.


ಇವರ ಚರಿತ್ರೆಯನ್ನು ಬಾಬೆಲಿನಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಶಪಿಸುವ ಮಾತಾಗಿ ತೆಗೆದುಕೊಂಡು ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ ಎಂದು ಶಪಿಸುವರು;


ನಾನು ಖಡ್ಗಕ್ಷಾಮವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಸಮಸ್ತರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಬೆರಗಿನ ಸಿಳ್ಳು, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.


ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯವಾಗಿ ಗುರಿಯಾಗುವದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.


ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶನವಾಗುವರು; ಹೌದು, ಯೆಹೋವನನ್ನು ತೊರೆದವರು ನಿರ್ಮೂಲರಾಗುವರು.


ಅವಳು ದೋಷಿಯಾಗಿ ಗಂಡನಿಗೆ ದ್ರೋಹಮಾಡಿದವಳಾಗಿದ್ದರೆ ಕುಡಿದನಂತರ ಶಾಪಕರವಾದ ಆ ನೀರು ಅವಳೊಳಗೆ ಸೇರಿ ವಿಷವಾಗುವದರಿಂದ ಅವಳ ಹೊಟ್ಟೆ ಉಬ್ಬುವದು, ಅವಳ ತೊಡೆಗಳು ಕ್ಷೀಣವಾಗಿ ಹೋಗುವವು; ಆ ಸ್ತ್ರೀಯು ತನ್ನ ಜನರೊಳಗೆ ಶಾಪಗ್ರಸ್ತಳಾಗುವಳು.


ಅವರು ಘೋರಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಹೂಣಿಡರು; ಅವರು ಭೂವಿುಯ ಮೇಲೆ ಗೊಬ್ಬರವಾಗುವರು; ಖಡ್ಗವೂ ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂವಿುಯ ಜಂತುಗಳಿಗೂ ಆಹಾರವಾಗುವವು.


ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.


ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು ಈ ಪಟ್ಟಣವು ಲೋಕದ ಸಮಸ್ತಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು.


ಆಗ ಸಕಲ ಸೇನಾಪತಿಗಳೂ ಕಾರೇಹನ ಮಗನಾದ ಯೋಹಾನಾನನೂ ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ


ನೀವು ನಡಿಸಿದ ದುರಾಚಾರಗಳನ್ನೂ ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ಬೆರಗಿಗೂ ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.


ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿದ ಮೇಲೆ ನಿಮ್ಮ ಹೆಸರು ಹರಕೆಯ ಮಾತಾಗಿ ಸಲ್ಲುವದು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!


ಅವನು ಬಂದು ಐಗುಪ್ತದೇಶವನ್ನು ಹೊಡೆಯುವನು; ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಗೆ ಗೊತ್ತಾದವರು ಸೆರೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು.


ಆಹಾ, ಅವರು ಹಾಳಾದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಶ್ಮಶಾನವಾಗುವದು, ಮೋಫ್ ಪಟ್ಟಣವು ಅವರನ್ನು ಹೂಣಿಡುವದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು