Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:16 - ಕನ್ನಡ ಸತ್ಯವೇದವು J.V. (BSI)

16 ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತನ್ನು ಕೇಳಲೊಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತುಗಳನ್ನು ಕೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಸರ್ವೇಶ್ವರನ ಹೆಸರಿನಲ್ಲಿ ನೀನು ನಮಗೆ ನುಡಿದ ಮಾತನ್ನು ನಾವು ಕೇಳಲೊಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನೀನು ನಮಗೆ ತಿಳಿಸಿದ ಯೆಹೋವನ ಸಂದೇಶವನ್ನು ಕೇಳಿಸಿಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಯೆಹೋವ ದೇವರ ಹೆಸರಿನಿಂದ ನೀನು ನಮಗೆ ನುಡಿದ ಮಾತನ್ನು ಕೇಳಲೊಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:16
24 ತಿಳಿವುಗಳ ಹೋಲಿಕೆ  

ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಬೇಕು ಅಂದನು.


ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ಇವನು ನಮ್ಮ ಮೇಲೆ ದೊರೆತನಮಾಡುವದು ನಮಗೆ ಇಷ್ಟವಿಲ್ಲ ಎಂದು ಹೇಳಿಸಿದರು.


ಈಗಲಾದರೂ ನೀವು ಸಿದ್ಧವಾಗಿದ್ದು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು ಎಂದು ಹೇಳಿದನು.


ಆಮೇಲೆ ಆ ಪ್ರಧಾನರು ಅರಸನಿಗೆ - ಒಡೆಯಾ, ಇವನಿಗೆ ಮರಣದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ನುಡಿಯುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ ಎಂದು ಹೇಳಿದರು.


ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು.


ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಮೂಲ ಪಿತೃಗಳ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿದ್ದಾರೆ; ಇಸ್ರಾಯೇಲ್ ವಂಶದವರೂ ಯೆಹೂದ ವಂಶದವರೂ ನಾನು ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಕೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇಹೋಗುವರು ಎಂದು ಯೆಹೋವನು ಅನ್ನುತ್ತಾನೆ.


ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತಾಡಿಕೊಳ್ಳುತ್ತಿರಲಿಲ್ಲ; ಯಾವನೂ ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು - ಆಹಾ, ನಾನು ಎಂಥಾ ಕೆಲಸ ಮಾಡಿದೆ ಎಂದು ಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೇ ತ್ವರೆಪಡುತ್ತಾನೆ.


ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ; ತಮ್ಮ ಪಾಪವನ್ನು ಮರೆಮಾಜದೆ ಸೊದೋವಿುನವರಂತೆ ಮೆರೆಯಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.


ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತು ಬೇಡಿಗಳನ್ನು ಮುರಿದು ಬೀಸಾಡೋಣ ಎಂದು ಮಾತಾಡಿಕೊಳ್ಳುತ್ತಾರಲ್ಲಾ.


ಅದಕ್ಕೆ ಫರೋಹನು - ಯೆಹೋವನೆಂಬವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲ್ಯರನ್ನು ಹೋಗಗೊಡಿಸುವದೇಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ ಇಸ್ರಾಯೇಲ್ಯರು ಹೊರಟುಹೋಗುವದಕ್ಕೆ ನಾನು ಒಪ್ಪುವದೇ ಇಲ್ಲ ಅಂದನು.


ಹೀಗೆ ಸಮುವೇಲನು ಎಷ್ಟು ಹೇಳಿದರೂ ಜನರು ಕೇಳದೆ - ಅದಿರಲಿ; ನಮಗೆ ಅರಸನನ್ನು ಕೊಡು;


ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ಗಮನಿಸಲಿಲ್ಲ;


ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಹಟದಂತೆ ನಡೆದು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು.


ಆದರೆ ನೀವು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡದೆ - ಈ ದೇಶದಲ್ಲಿ ನಾವು ನೆಲೆಸುವದೇ ಇಲ್ಲ; ಬೇಡವೇ ಬೇಡ;


ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಸೊಕ್ಕೇರಿದವರೆಲ್ಲರೂ ಅವನಿಗೆ - ನಿನ್ನ ಮಾತು ಸುಳ್ಳು; ಐಗುಪ್ತಕ್ಕೆ ಹೋಗಿ ವಾಸಮಾಡಬಾರದು ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ;


ಇದಲ್ಲದೆ ಯೆರೆಮೀಯನು ಹೆಂಗಸರಿಗೂ ಎಲ್ಲಾ ಜನರಿಗೂ ಹೀಗೆ ಹೇಳಿದನು - ಐಗುಪ್ತದಲ್ಲಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ -


ಯೆಹೋವನು ಹೀಗೆ ನುಡಿಯುತ್ತಾನೆ - ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವವು, ಆ ಸನ್ಮಾರ್ಗವು ಎಲ್ಲಿ ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು (ಎಂದು ನಾನು ಅಪ್ಪಣೆಕೊಟ್ಟಾಗ) ಅದರಲ್ಲಿ ನಾವು ನಡೆಯುವದೇ ಇಲ್ಲವೆಂದರು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬದಾಗಿ ನೀವೂ ನಿಮ್ಮ ಹೆಂಡಿರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ತೀರಿಸೇ ತೀರಿಸಿರಿ, ನೆರವೇರಿಸೇ ನೆರವೇರಿಸಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು