Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:19 - ಕನ್ನಡ ಸತ್ಯವೇದವು J.V. (BSI)

19 ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರವಾದ ಹೋಳಿಗೆಗಳನ್ನು ಮಾಡಿ ಪಾನದ್ರವ್ಯವನ್ನು ಅರ್ಪಿಸಿದ್ದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರವಾದ ಹೋಳಿಗೆಗಳನ್ನು ಮಾಡಿ ಪಾನದ್ರವ್ಯವನ್ನು ಅರ್ಪಿಸಿದ್ದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮಹಿಳೆಯರು, “ಗಗನದೊಡತಿಗೆ ಧೂಪಾರತಿ ಎತ್ತಿ, ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರದಂಥ ಹೋಳಿಗೆಗಳನ್ನು ಮಾಡಿ ಪಾನದ್ರವ್ಶವನ್ನು ಅರ್ಪಿಸುತ್ತಿದ್ದುದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಮೇಲೆ ಹೆಂಗಸರು ಮಾತನಾಡಿದರು. ಅವರು ಯೆರೆಮೀಯನಿಗೆ ಹೀಗೆ ಹೇಳಿದರು, “ನಾವು ಏನು ಮಾಡುತ್ತಿದ್ದೆವೆಂಬುದು ನಮ್ಮ ಗಂಡಂದಿರಿಗೆ ಗೊತ್ತಿತ್ತು. ಸ್ವರ್ಗದ ರಾಣಿಗೆ ನೈವೇದ್ಯವನ್ನು ಮಾಡುವದಕ್ಕೆ ನಾವು ಅವರ ಅಪ್ಪಣೆಯನ್ನು ಪಡೆದಿದ್ದೆವು. ಅವಳಿಗೆ ಪಾನನೈವೇದ್ಯವನ್ನು ಮಾಡುವದಕ್ಕೂ ಅವರ ಅಪ್ಪಣೆಯನ್ನು ಪಡೆದಿದ್ದೆವು. ನಾವು ಅವಳ ಆಕಾರದ ಹೋಳಿಗೆಯನ್ನು ಮಾಡುತ್ತಿದ್ದೆವೆಂಬುದೂ ನಮ್ಮ ಗಂಡಂದಿರಿಗೆ ಗೊತ್ತಿತ್ತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ, “ನಾವು ಗಗನದ ಒಡತಿಗೆ ಧೂಪ ಸುಟ್ಟು, ಅವಳಿಗೆ ಪಾನಾರ್ಪಣೆಗಳನ್ನು ಹೊಯ್ದಾಗ, ನಮ್ಮ ಗಂಡಂದಿರನ್ನು ಬಿಟ್ಟು, ಅವಳ ಪೂಜೆಗೋಸ್ಕರ ದೋಸೆಗಳನ್ನು ಮಾಡಿ, ಅವಳಿಗೆ ಪಾನಾರ್ಪಣೆಗಳನ್ನು ಅರ್ಪಿಸಿದೆವೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:19
14 ತಿಳಿವುಗಳ ಹೋಲಿಕೆ  

ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.


ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಹಾಕುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು, ಅಂತು ಐಗುಪ್ತದಲ್ಲಿಯೂ ಪತ್ರೋಸಿನಲ್ಲಿಯೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ ಹೀಗೆ ಹೇಳಿದರು -


ಇವನು ಯೆರೂಸಲೇವಿುನಲ್ಲಿ ಎಂಟು ವರುಷ ಆಳಿದನು. ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್‍ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಹೆಂಡತಿಯಾದ ಈಜೆಬೆಲಳಿಂದ ಪ್ರೇರಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡುವದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಆಗ ಸ್ತ್ರೀಯು - ಆ ಮರದ ಹಣ್ಣು ತಿನ್ನುವದಕ್ಕೆ ಉತ್ತಮವಾಗಿಯೂ ನೋಡುವದಕ್ಕೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು. ಸಂಗಡ ಇದ್ದ ಗಂಡನಿಗೂ ಕೊಡಲು ಅವನೂ ತಿಂದನು.


ದುಷ್ಟನಿಗೆ ದಂಡನೆ ಖಂಡಿತ; ಶಿಷ್ಟವಂಶಕ್ಕೆ ರಕ್ಷಣೆ.


ಆಗ ಯೆರೆಮೀಯನು ಗಂಡಸರಿಗೂ ಹೆಂಗಸರಿಗೂ ಅಂತು ತನಗೆ ಆ ಉತ್ತರಕೊಟ್ಟ ಎಲ್ಲಾ ಜನರಿಗೂ ಹೀಗೆ ಹೇಳಿದನು -


ಆದರೆ ಗಂಡನು ಕೇಳಿದಾಗಲೇ ಬೇಡವೆಂದು ಅಪ್ಪಣೆಕೊಟ್ಟರೆ ಆ ಹರಕೆಯು ಇಲ್ಲವೆ ಅವಿಚಾರ ಪ್ರತಿಜ್ಞೆಯು ನಿರರ್ಥಕವಾಗುವವು. ಯೆಹೋವನು ಅವಳನ್ನು ದೋಷಿಯೆಂದು ಎಣಿಸುವದಿಲ್ಲ.


ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುವವು. ಗಂಡನು ರದ್ದುಮಾಡಿದ್ದರಿಂದ ಅಂಥವಳು ಯೆಹೋವನಿಂದ ದೋಷಿಯೆಂದು ಎಣಿಸಲ್ಪಡುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು