Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:3 - ಕನ್ನಡ ಸತ್ಯವೇದವು J.V. (BSI)

3 ಆಹಾ, ಅಲ್ಲಿನವರು ತಮಗೂ ನಿಮಗೂ ನಿಮ್ಮ ಪಿತೃಗಳಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡಿಸಿದ್ದರಿಂದ ಆ ಸ್ಥಳಗಳು ಹಾಳಾದವು. ಅಲ್ಲಿ ಯಾರೂ ವಾಸಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಹಾ, ಅಲ್ಲಿನವರು ತಮಗೂ, ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವುದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದ್ದರಿಂದ ಆ ಸ್ಥಳಗಳು ಹಾಳಾದವು, ಅಲ್ಲಿ ಯಾರೂ ವಾಸಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಲ್ಲಿನವರು ತಮಗೂ ನಿಮಗೂ ಮತ್ತು ನಿಮ್ಮ ಪೂರ್ವಜರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ಪೂಜಿಸುವುದಕ್ಕೆ ತವಕಪಟ್ಟರು. ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದರು. ಆದ್ದರಿಂದಲೇ ಆ ಸ್ಥಳಗಳು ಹಾಳಾದವು, ನಿರ್ಜನಪ್ರದೇಶಗಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಲ್ಲಿ ವಾಸಿಸುವ ಜನರು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಸ್ಥಳಗಳನ್ನು ನಾಶಮಾಡಲಾಯಿತು. ಆ ಜನರು ಬೇರೆ ದೇವರುಗಳಿಗೆ ಬಲಿಯನ್ನು ಅರ್ಪಿಸಿದ್ದಾರೆ. ಆದ್ದರಿಂದ ನನಗೆ ಕೋಪ ಬಂದಿದೆ. ಹಿಂದೆ ನಿಮ್ಮ ಜನರು ಮತ್ತು ನಿಮ್ಮ ಪೂರ್ವಿಕರು ಆ ದೇವರುಗಳನ್ನು ಪೂಜಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ನೀವೂ ನಿಮ್ಮ ಪೂರ್ವಜರೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ, ಧೂಪ ಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ. ಅವುಗಳಲ್ಲಿ ವಾಸಮಾಡುವವನು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:3
30 ತಿಳಿವುಗಳ ಹೋಲಿಕೆ  

ತಮಗೆ ನೇವಿುಸಲ್ಪಡದೆಯೂ ಗೊತ್ತಿಲ್ಲದೆಯೂ ಇದ್ದ ಇತರ ದೇವರುಗಳನ್ನು ಸೇವಿಸಿ ಪೂಜಿಸಿದದರಿಂದ


ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ ಪಿತೃಗಳು ಭಜಿಸದೆಯೂ ತಮಗೆ ಮುಂಚಿತವಾಗಿ ಗೊತ್ತಿಲ್ಲದೆಯೂ ಇರುವ ನೂತನ ದೇವತೆಗಳಿಗೂ ಬಲಿಯನ್ನರ್ಪಿಸಿದರು.


ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ ಮಗನಾಗಲಿ ಮಗಳಾಗಲಿ ಪ್ರಾಣಪ್ರಿಯಳಾದ ಹೆಂಡತಿಯಾಗಲಿ ಆಪ್ತವಿುತ್ರನಾಗಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚಿಸಿ -


ನಾವು ಪಾಪಾಪರಾಧಗಳನ್ನು ಮಾಡಿ ಕೆಟ್ಟವರಾಗಿ ನಡೆದು ನಿನಗೆ ತಿರುಗಿಬಿದ್ದು ನಿನ್ನ ಆಜ್ಞಾವಿಧಿಗಳನ್ನು ತೊರೆದು


ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡಿಸುತ್ತಾ ನನ್ನನ್ನು ಕೆಣಕುವದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪದೂಷಣೆಗಳಿಗೆ ಗುರಿಯಾಗುವಿರಿ.


ನೀನು ನಮ್ಮ ಮೇಲೆ ಎಷ್ಟು ಕೇಡನ್ನು ಬರಮಾಡಿದರೂ ನೀನು ಧರ್ಮಸ್ವರೂಪನೇ; ನೀನು ಸತ್ಯವನ್ನೇ ನಡಿಸಿದಿ, ನಾವಾದರೋ ದುಷ್ಟರು.


ಆತನು ನನಗೆ - ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು - ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡನು ಎಂಬದಾಗಿ ಮಾತಾಡಿಕೊಳ್ಳುತ್ತಿದ್ದಾರಲ್ಲಾ;


ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕಪ್ರವಾದಿಗಳ ಪಾಪದೋಷಗಳಿಂದಲೇ ಈ ಗತಿ ಬಂತು.


ಆಕೆಯು ಪಾಪಮಾಡಿ ಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಬೆನ್ನಮರೆಯಲ್ಲಿ ನರಳಾಡುತ್ತಾಳೆ.


ಈ ಪಟ್ಟಣದವರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯನ್ನು ನಿರಾಕರಿಸಿ ಅನ್ಯದೇವತೆಗಳನ್ನು ಪೂಜಿಸಿ ಸೇವಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು ಅಂದುಕೊಳ್ಳುವರು.


ಇಸ್ರಾಯೇಲ್ ವಂಶವೂ ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡದ್ದರಿಂದ ನಿನ್ನನ್ನು ನಾಟಿದ ಸೇನಾಧೀಶ್ವರನಾದ ಯೆಹೋವನು ನಿನಗೆ ಕೆಡುಕಾಗಲಿ ಎಂದು ಶಪಿಸಿದ್ದಾನೆ.


ಅವರು ನನಗೆ ಕೇಡುಮಾಡುತ್ತಾರೋ, ಅವಮಾನವು ತಮ್ಮ ಮುಖವನ್ನು ಮುಚ್ಚುವಷ್ಟರ ಮಟ್ಟಿಗೆ ತಮಗೇ ಕೇಡುಮಾಡಿಕೊಳ್ಳುತ್ತಾರಲ್ಲಾ ಎಂದು ಯೆಹೋವನು ಅನ್ನುತ್ತಾನೆ.


ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು.


ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ ಎಂದು ನನ್ನ ಜನರು ಅನ್ನುವಾಗ ನೀನು ಅವರಿಗೆ - ನೀವು ಯೆಹೋವನನ್ನು ತೊರೆದು ಸ್ವದೇಶದಲ್ಲಿ ಅನ್ಯದೇವತೆಗಳನ್ನು ಸೇವಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳು.


ಎಂಬದರಲ್ಲಿ ಕೇಳಿ ಕೋಪವನ್ನೆಬ್ಬಿಸಿದವರು ಯಾರು? ಮೋಶೆಯ ಕೈಕೆಳಗಿದ್ದು ಐಗುಪ್ತದೊಳಗಿಂದ ಹೊರಟುಬಂದವರೆಲ್ಲರೂ ಅಲ್ಲವೇ.


ಯೆರೂಸಲೇಮು ಹಾಳಾಯಿತು, ಯೆಹೂದದವರು ಬಿದ್ದುಹೋದರು! ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಪ್ರತಿಭಟಿಸುತ್ತವಲ್ಲವೆ.


ಇಸ್ರಾಯೇಲ್ ವಂಶವೂ ಯೆಹೂದ ವಂಶವೂ ತಮ್ಮ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ; ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ. ಇದು ಯೆಹೋವನ ನುಡಿ.


ನೀವು ಯೆಹೋವನ ಮಾತನ್ನು ಕೇಳದೆ ಆತನ ಧರ್ಮಶಾಸ್ತ್ರವನ್ನೂ ನಿಬಂಧನೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸದೆ ಆತನಿಗೆ ಪಾಪಮಾಡಿ [ಅನ್ಯದೇವತೆಗಳಿಗೆ] ಧೂಪ ಹಾಕಿದ್ದರಿಂದಲೇ ಇಂಥಾ ಕೇಡು ನಿಮಗೆ ಸಂಭವಿಸಿದೆ.


ಅದಕ್ಕೆ ಜನರು - ಈ ದೇಶದವರ ಪಿತೃಗಳ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿ ಅವರೊಡನೆ ಮಾಡಿದ ನಿಬಂಧನೆಯನ್ನು ಅವರು ಉಲ್ಲಂಘಿಸಿ


ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು - ಈ ಮಹಾ ವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪವೇನು ಎಂದು ಕೇಳುವಾಗ


ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ಸಾವಕಾಶಮಾಡದೆ ಕಳುಹಿಸಿ ಹೇಳಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು. ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು