ಯೆರೆಮೀಯ 44:4 - ಕನ್ನಡ ಸತ್ಯವೇದವು J.V. (BSI)4 ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ಸಾವಕಾಶಮಾಡದೆ ಕಳುಹಿಸುತ್ತಾ - ಅಹಹ, ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ ಎಂದು ಪ್ರಕಟಿಸುತ್ತಾ ಬಂದರೂ ಅವರು ಕಿವಿಗೊಟ್ಟು ಕೇಳಲಿಲ್ಲ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡ ಮಾಡದೆ ಕಳುಹಿಸುತ್ತಾ, ‘ಆಹಾ! ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ’ ಎಂದು ಪ್ರಕಟಿಸುತ್ತಾ ಬಂದರೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡಮಾಡದೆ ಕಳುಹಿಸುತ್ತಾಬಂದೆ. ‘ಎಚ್ಚರಿಕೆ, ನಾನು ಹೇಸುವ ಈ ಅಸಹ್ಯಕಾರ್ಯಗಳನ್ನು ಮಾಡಬೇಡಿ’ ಎಂದು ಪ್ರಕಟಿಸುತ್ತಾ ಬಂದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ಆ ಜನರಲ್ಲಿಗೆ ಕಳಿಸಿಕೊಟ್ಟೆ. ಆ ಪ್ರವಾದಿಗಳು ನನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನನ್ನ ಸಂದೇಶವನ್ನು ಜನರಿಗೆ ತಿಳಿಸಿ ‘ಈ ದುಷ್ಕೃತ್ಯವನ್ನು ಮಾಡಬೇಡಿರಿ, ನೀವು ಈ ವಿಗ್ರಹಗಳ ಪೂಜೆಮಾಡುವದನ್ನು ನಾನು ದ್ವೇಷಿಸುತ್ತೇನೆ’ ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಪುನಃ ಕಳುಹಿಸಿ, ‘ನಾನು ಹಗೆ ಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇಬೇಡಿರಿ!’ ಎಂದು ಹೇಳಿದೆನು. ಅಧ್ಯಾಯವನ್ನು ನೋಡಿ |
ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ - ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.