Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:19 - ಕನ್ನಡ ಸತ್ಯವೇದವು J.V. (BSI)

19 ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಈಜಿಪ್ಟಿನಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೊ. ಮೆಂಫಿಸ್ ನಗರ ಹಾಳಾಗುವುದು ಅದು ಸುಟ್ಟು ನಿರ್ಜನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈಜಿಪ್ಟಿನ ಜನಗಳೇ, ನಿಮ್ಮ ವಸ್ತುಗಳನ್ನು ಕಟ್ಟಿಕೊಂಡು ಸೆರೆವಾಸಕ್ಕೆ ಸಿದ್ಧರಾಗಿರಿ. ಏಕೆಂದರೆ ನೋಫ್ ಪಟ್ಟಣವು ಹಾಳುಬಿದ್ದ ನಿರ್ಜನವಾದ ಪ್ರದೇಶವಾಗುವುದು. ನಗರಗಳನ್ನು ನಾಶಪಡಿಸಲಾಗುವುದು; ಅವುಗಳು ನಿರ್ಜನವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಈಜಿಪ್ಟಿನ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜುಗೊಳಿಸಿಕೋ; ಏಕೆಂದರೆ ನೋಫ್ ಪಟ್ಟಣವು ಹಾಳಾಗುವುದು; ನಿವಾಸಿಗಳಿಲ್ಲದ ಬೀಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:19
14 ತಿಳಿವುಗಳ ಹೋಲಿಕೆ  

ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ ಚಿಕ್ಕವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.


ಯುವತಿಯೇ, ದೀಬೋನ್‍ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕೂತುಕೋ! ಮೋವಾಬನ್ನು ಹಾಳುಮಾಡುವವನು ನಿನಗೆ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ನೋಫಿನ ಬೊಂಬೆಗಿಂಬೆಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತದೇಶದಲ್ಲಿ ಇನ್ನು ಯಾವ ಪ್ರಭುವೂ ಇರನು; ನಾನು ಆ ದೇಶಕ್ಕೆ ಭಯವನ್ನೊಡ್ಡುವೆನು.


ಐಗುಪ್ತದೇಶದ ವಿುಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ ಪತ್ರೋಸ್ ಪ್ರಾಂತದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ -


ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ನಿವಾಸಿಯೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.


ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರವಿುಸಿ ಬೆಂಕಿಯಿಂದ ಸುಟ್ಟುಬಿಡುವರು; ಮತ್ತು ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂವಿುಯನ್ನಾಗಿ ಮಾಡುವೆನು.


ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ - ಈ ಆಲಯವು ಶಿಲೋವಿನ ಗತಿಗೆ ಬರುವದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವದು ಎಂದು ಏಕೆ ನುಡಿದೆ ಅಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು.


ಚೋಯನಿನ ಪ್ರಭುಗಳು ಬುದ್ಧಿಗೆಟ್ಟಿದ್ದಾರೆ, ನೋಫಿನ ಪ್ರಧಾನರು ಮೋಸಹೋಗಿದ್ದಾರೆ, ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮಗೊಳಿಸಿದ್ದಾರೆ.


ಐಗುಪ್ತದಲ್ಲಿ ಪ್ರಕಟಿಸಿರಿ, ವಿುಗ್ದೋಲ್, ತಹಪನೇಸ್, ನೋಫ್ ಎಂಬೀ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ - [ಐಗುಪ್ತವೇ,] ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ ಎಂದು ಸಾರಿರಿ.


ಯಾವ ಮನುಷ್ಯನೂ ಅಲ್ಲಿ ಹೆಜ್ಜೆಯಿಟ್ಟು ಹಾದುಹೋಗನು; ಯಾವ ಪಶುವೂ ತುಳಿದು ದಾಟಿಹೋಗದು; ನಾಲ್ವತ್ತು ವರುಷ ನಿರ್ಜನವಾಗಿರುವದು.


ಹಾಳುಬಿದ್ದಿರುವ ದೇಶಗಳೊಳಗೆ ಐಗುಪ್ತದೇಶವನ್ನೂ ಹಾಳುಬೀಳಿಸುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಾಲ್ವತ್ತು ವರುಷ ಹಾಗೆಯೇ ಇರುವವು; ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು.


ಆಹಾ, ಅವರು ಹಾಳಾದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಶ್ಮಶಾನವಾಗುವದು, ಮೋಫ್ ಪಟ್ಟಣವು ಅವರನ್ನು ಹೂಣಿಡುವದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು