Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:25 - ಕನ್ನಡ ಸತ್ಯವೇದವು J.V. (BSI)

25 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನೋ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಐಗುಪ್ತ, ಐಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನೋ ಎಂಬ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಐಗುಪ್ತ, ಐಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನೋ ಎಂಬ ನಗರದಲ್ಲಿನ ಅಮೋನ್ ದೇವತೆಯನ್ನು, ಫರೋಹನನ್ನು, ಈಜಿಪ್ಟನ್ನು, ಈಜಿಪ್ಟಿನ ದೇವತೆಗಳನ್ನೂ ಅಲ್ಲಿನ ಅರಸರನ್ನೂ ದಂಡಿಸುವೆನು. ಹೌದು, ಫರೋಹನನ್ನೂ ಅವನಲ್ಲಿ ನಂಬಿಕೆ ಇಟ್ಟವರನ್ನೂ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: “ಬಹುಬೇಗನೆ ನಾನು ಥೀಬಸ್ಸಿನ ಆಮೋನ್ ದೇವತೆಯನ್ನು ದಂಡಿಸುವೆನು. ನಾನು ಫರೋಹನನ್ನು, ಈಜಿಪ್ಟನ್ನು ಮತ್ತು ಅವಳ ದೇವರುಗಳನ್ನು ದಂಡಿಸುವೆನು. ನಾನು ಈಜಿಪ್ಟಿನ ರಾಜರನ್ನು ದಂಡಿಸುವೆನು. ಫರೋಹನನ್ನು ನಂಬಿದವರನ್ನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ತೆಬೆಸ್ ನಗರದಲ್ಲಿನ ಆಮೋನ್ ದೇವತೆಯನ್ನೂ, ಫರೋಹನನ್ನೂ, ಈಜಿಪ್ಟನ್ನೂ, ಅದರ ದೇವರುಗಳನ್ನೂ, ಅದರ ಅರಸರನ್ನೂ, ಅಂತೂ ಫರೋಹನನ್ನೂ, ಅವನಲ್ಲಿ ನಂಬಿಕೆ ಇಡುವ ಎಲ್ಲರನ್ನೂ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:25
16 ತಿಳಿವುಗಳ ಹೋಲಿಕೆ  

ಯೆಹೋವನು ಅವರಿಗೆ ಭಯಂಕರವಾಗುವನು; ಲೋಕದ ದೇವರುಗಳನ್ನೆಲ್ಲಾ ಕ್ಷಯಿಸಿಬಿಡುವನು; ಸಮಸ್ತ ಜನರು, ಅಂದರೆ ಸಮುದ್ರ ಪ್ರಾಂತದ ನಿವಾಸಿಗಳಾದ ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ಆ ರಾತ್ರಿ ನಾನು ಐಗುಪ್ತ ದೇಶದ ನಡುವೆ ಹಾದುಹೋಗಿ ಮನುಷ್ಯರಲ್ಲಾಗಲಿ ಪಶುಗಳಲ್ಲಾಗಲಿ ಚೊಚ್ಚಲಾಗಿರುವದನ್ನೆಲ್ಲಾ ಸಂಹರಿಸುವೆನು; ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ಶಿಕ್ಷೆಮಾಡುವೆನು; ನಾನು ಯೆಹೋವನು.


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗಮೇಘವಾಹನನಾಗಿ ಐಗುಪ್ತಕ್ಕೆ ಬರುವನು; ಆತನು ಸಮ್ಮುಖನಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತ್ಯರ ಹೃದಯವು ತಮ್ಮೊಳಗೆ ಕರಗಿ ನೀರಾಗುವದು.


ಅದೇನಂದರೆ - ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಪ್ರಾಣ ಹುಡುಕುತ್ತಿದ್ದ ಶತ್ರುವಾದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಕೈಗೆ ಕೊಟ್ಟಂತೆ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಕೊಡುವೆನು ಎಂಬದೇ; ಇದು ಯೆಹೋವನಾದ ನನ್ನ ನುಡಿ.


ಹೆಷ್ಬೋನಿನವರೇ, ಗೋಳಾಡಿರಿ; ಆಯಿ ಎಂಬ ಊರು ಹಾಳಾಯಿತು! ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕಂದರೆ ಮಲ್ಕಾಮ್ ದೇವತೆಯೂ ಅದರ ಯಾಜಕರೂ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಐಗುಪ್ತದ ಅರಸನಾದ ಫರೋಹನಿಗೆ ವಿರುದ್ಧನಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿರುವದನ್ನೂ, ಮುರಿದದನ್ನೂ ತೀರಾ ಮುರಿದುಬಿಟ್ಟು ಖಡ್ಗವು ಅವನ ಕೈಯೊಳಗಿಂದ ಬೀಳುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು