Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:28 - ಕನ್ನಡ ಸತ್ಯವೇದವು J.V. (BSI)

28 ನನ್ನ ಸೇವಕ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು; ವಿುತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವದಿಲ್ಲ. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದ್ದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು. ಮಿತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವುದಿಲ್ಲ. ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯಾವ ರಾಷ್ಟ್ರಗಳಿಗೆ ನಿನ್ನನ್ನು ಅಟ್ಟಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನಾದರೋ, ನಿರ್ಮೂಲ ಮಾಡೆನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡೆನು. ಸರ್ವೇಶ್ವರನಾದ ನನ್ನ ನುಡಿ ಇದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡಬೇಡ,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿ ಓಡಿಸಿದೆನೋ, ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ಮುಗಿಸಿಬಿಡುತ್ತೇನೆ; ಆದರೆ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದರೂ ನಿನ್ನನ್ನು ಶಿಕ್ಷಿಸದೆ ಬಿಡುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:28
35 ತಿಳಿವುಗಳ ಹೋಲಿಕೆ  

ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ಆದರೆ ನಾವು ಕರ್ತನ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು - ಇವರಿಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ಶಿಕ್ಷಿಸುತ್ತಾನೆ. ಆದಕಾರಣ ನನ್ನ ಸಹೋದರರೇ,


ಯಾರೂ ಅದನ್ನು ಹೆದರಿಸರು. ಯೆಹೋವನು ಇಂತೆನ್ನುತ್ತಾನೆ - ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿ ಚದರಿಸಿದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು, ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ವಿುತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವದಿಲ್ಲ.


ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ವಿುತಿಮೀರಿ ಬೇಡ; ರೋಷದಿಂದ ದಂಡಿಸದಿರು, ನಾನು ಕೇವಲ ಕ್ಷೀಣನಾದೇನು.


ಯೆಹೋವನು ಹೀಗನ್ನುತ್ತಾನೆ - ದೇಶವೆಲ್ಲಾ ಬಟ್ಟಬರಿದಾಗುವದು, ಆದರೆ ನಾನು ಸಂಪೂರ್ಣವಾಗಿ ಲಯಮಾಡೆನು.


ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆಯುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು ಎಂಬದು. ದೇವರು ನಮ್ಮ ಕೂಡ ಇದ್ದಾನೆಂದು ಈ ಹೆಸರಿನ ಅರ್ಥ.


ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.


ಆಗ ಕಬ್ಬಿಣಮಣ್ಣು ತಾಮ್ರಬೆಳ್ಳಿಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು.


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು; ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಣುಗಿಸವು; ಉರಿಯಲ್ಲಿ ನಡೆಯುವಾಗ ನೀನು ಕಂದದಿರುವಿ, ಜ್ವಾಲೆಯು ನಿನ್ನನ್ನು ದಹಿಸದು.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಳಿಗೋಡೆಯನ್ನಾಗಿ ಮಾಡುವೆನು; ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ. ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಯೆಹೋವನಾದ ನನ್ನ ಮಾತು.


ಆದರೆ ಆ ದಿನಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲಮಾಡೆನು; ಇದು ಯೆಹೋವನೆಂಬ ನನ್ನ ನುಡಿ.


ಚೀಯೋನೆಂಬ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ; ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.


ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು ಎಂಬ ನುಡಿ ನನ್ನ ಸತ್ಯದ ಬಾಯಿಂದ ಹೊರಟಿದೆ, ಅದನ್ನು ಹಿಂತೆಗೆಯೆನು, ನನ್ನ ಮೇಲೆ ಆಣೆಯಿಟ್ಟಿದ್ದೇನೆ.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿಮಾಡಿ ಅಶೇರವೆಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಇನ್ನು ಪ್ರತಿಷ್ಠಿಸದೆ ಹೋದರೆ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವದು, ಮತ್ತು ಅವರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದೇ.


ಯೆಹೋವನು ತನ್ನ ಪ್ರಜೆಯ ಘಾತಕರನ್ನು ಹೊಡೆದಂತೆ ಆ ತನ್ನ ಪ್ರಜೆಯನ್ನು ಹೊಡೆದನೋ? ಅವರಿಗಾದಂಥ ಸಂಹಾರವು ಆ ಪ್ರಜೆಗೆ ಆಯಿತೋ?


ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ; ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುತ್ತಾನೆ ಎಂದು ಹೇಳಿದನು.


ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನು.


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡು ಮಾಡುವದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ ಎಂದು ಹೇಳಿದನು.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಇಸ್ರಾಯೇಲೇ, ಈಗ ಕೇಳು.


ನಾನು ಅವುಗಳ ಮೇಲೆ ಕುರುಬರನ್ನು ನೇವಿುಸುವೆನು, ಅವರು ಅವುಗಳನ್ನು ಮೇಯಿಸುವರು; ಅವು ಇನ್ನು ಭಯಪಡವು, ಬೆದರವು, ಅವುಗಳಲ್ಲಿ ಒಂದೂ ಕಡಿಮೆಯಾಗದು; ಇದು ಯೆಹೋವನ ನುಡಿ.


ಯೆಹೋವನು ಇಂತೆನ್ನುತ್ತಾನೆ - ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ ಹಾಯಾಗಿಯೂ ಇರುವದು;


ನಿಮ್ಮ ಎದೆಯು ಕುಂದದಿರಲಿ, ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಯು ನಿಮ್ಮನ್ನು ಹೆದರಿಸದಿರಲಿ; ಒಂದು ವರುಷ ಒಂದು ಸುದ್ದಿಯು, ಮತ್ತೊಂದು ವರುಷ ಮತ್ತೊಂದು ಸುದ್ದಿಯು ಹರಡುತ್ತಿರುವವು; ಬಲಾತ್ಕಾರವು ದೇಶದಲ್ಲಿ ಪ್ರಬಲವಾಗುವದು, ಅಧಿಕಾರಿಯು ಅಧಿಕಾರಿಗೆ ವಿರೋಧಿಯಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು