ಯೆರೆಮೀಯ 46:4 - ಕನ್ನಡ ಸತ್ಯವೇದವು J.V. (BSI)4 ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿರಿ, ಬರ್ಜಿಗಳನ್ನು ಬೆಳಗಿರಿ, ಕವಚ ತೊಟ್ಟುಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿರಿ, ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ಧರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿ. ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ತೊಟ್ಟುಕೊಳ್ಳಿರಿ!” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಕುದುರೆಗಳನ್ನು ಸಜ್ಜುಗೊಳಿಸಿರಿ. ಸೈನಿಕರೇ, ನಿಮ್ಮ ಕುದುರೆಯ ಮೇಲೆ ಹತ್ತಿರಿ, ಯುದ್ಧಕ್ಕಾಗಿ ನಿಮ್ಮನಿಮ್ಮ ಸ್ಥಾನಗಳಿಗೆ ಹೋಗಿರಿ. ನಿಮ್ಮ ಶಿರಸ್ತ್ರಾಣಗಳನ್ನು ಧರಿಸಿರಿ, ನಿಮ್ಮ ಭರ್ಜಿಗಳನ್ನು ಚೂಪುಗೊಳಿಸಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ರಾಹುತರೇ, ಕುದುರೆಗಳನ್ನು ಕಟ್ಟಿರಿ; ವಾಹನಾಶ್ವಗಳನ್ನು ಹತ್ತಿರಿ. ಎದ್ದು ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಂತುಕೊಳ್ಳಿರಿ; ಈಟಿಗಳನ್ನು ಮೆರುಗು ಮಾಡಿರಿ; ಕವಚಗಳನ್ನು ತೊಟ್ಟುಕೊಳ್ಳಿರಿ. ಅಧ್ಯಾಯವನ್ನು ನೋಡಿ |