Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:6 - ಕನ್ನಡ ಸತ್ಯವೇದವು J.V. (BSI)

6 ವೇಗಶಾಲಿಗಳೂ ಓಡಿಹೋಗಲಾರರು, ಬಲಿಷ್ಠರೂ ತಪ್ಪಿಸಿಕೊಳ್ಳಲಾರರು; ಬಡಗಲಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಎಡವಿಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ವೇಗಶಾಲಿಗಳೂ ಓಡಿಹೋಗಲಾರರು, ಬಲಿಷ್ಠರೂ ತಪ್ಪಿಸಿಕೊಳ್ಳಲಾರರು. ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಎಡವಿಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ವೇಗಶಾಲಿಗಳು ಓಡಿಹೋಗಲಾರರು ಬಲಿಷ್ಟರು ತಪ್ಪಿಸಿಕೊಳ್ಳಲಾರರು. ಉತ್ತರದಲ್ಲಿ, ಯೂಫ್ರೆಟಿಸ್ ನದಿಯ ಹತ್ತಿರದಲ್ಲಿ, ಎಡವಿಬಿದ್ದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ವೇಗಶಾಲಿಗಳೂ ಓಡಿಹೋಗಲಾರರು. ಶೂರಸೈನಿಕರೂ ತಪ್ಪಿಸಿಕೊಳ್ಳಲಾರರು. ಅವರೆಲ್ಲರೂ ಎಡವಿ ಬಿದ್ದುಬಿಡುವರು. ಇದೆಲ್ಲ ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ನಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ವೇಗಶಾಲಿಗಳು ಓಡಿ ಹೋಗದಿರಲಿ; ಪರಾಕ್ರಮಶಾಲಿಯು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:6
22 ತಿಳಿವುಗಳ ಹೋಲಿಕೆ  

ಆಮೇಲೆ ಸ್ವದೇಶದ ದುರ್ಗಗಳ ಕಡೆಗೆ ಹಿಂದಿರುಗಿ ಎಡವಿಬಿದ್ದು ಇಲ್ಲವಾಗುವನು.


ನಿನ್ನ ಅವಮಾನದ ಸುದ್ದಿಯು ಜನಾಂಗಗಳಿಗೆ ಕೇಳಬಂದಿದೆ, ನಿನ್ನ ಕೂಗಾಟವು ಲೋಕದಲ್ಲೆಲ್ಲಾ ತುಂಬಿದೆ; ವೀರನು ವೀರನನ್ನು ಎಡವಿ ಇಬ್ಬರೂ ಬಿದ್ದಿದ್ದಾರೆ.


ಸೊಕ್ಕಿನ ರಾಜ್ಯವು ಎಡವಿಬೀಳುವದು, ಅದನ್ನು ಯಾರೂ ಎತ್ತರು; ಅದರ ಪಟ್ಟಣಗಳಿಗೆ ಬೆಂಕಿಹೊತ್ತಿಸುವೆನು, ಅದು ಸುತ್ತುಮುತ್ತಣದನ್ನೆಲ್ಲಾ ನುಂಗಿಬಿಡುವದು.


ಬಹು ಜನರು ಮುಗ್ಗರಿಸುವಂತೆ ಮಾಡಿದನು; ಹೌದು, ಒಬ್ಬರಿಗೊಬ್ಬರು ತಗಲಿ ಬಿದ್ದರು; ನಾವು ಎದ್ದು ಜನ್ಮಭೂವಿುಗೆ ಹೊರಟು ಸ್ವಜನರನ್ನು ಸೇರಿ ಹಿಂಸೆಯ ಖಡ್ಗದಿಂದ ತಪ್ಪಿಸಿಕೊಳ್ಳೋಣ ಎಂದುಕೊಂಡರು.


ಆದರೆ ಆ ಯುದ್ಧದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿವಸ; ಆಗ ಖಡ್ಗವು ನುಂಗಿ ನುಂಗಿ ತಣಿಯುವದು, ಅವರ ರಕ್ತವನ್ನು ತುಂಬಾ ಹೀರುವದು; ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಬಡಗಲಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು; ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತಾವಮಾನಕ್ಕೆ ಒಳಗಾಗುವರು.


ಬೆನ್ಯಾಮೀನ್ ಕುಲದವರೇ, ಯೆರೂಸಲೇವಿುನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್‍ಹಕ್ಕೆರೆವಿುನಲ್ಲಿ ಧ್ವಜವನ್ನೆತ್ತಿರಿ; ಏಕಂದರೆ ಅತಿನಾಶಕವಾದ ವಿಪತ್ತು ಬಡಗಲಿಂದ ತಲೆದೋರುತ್ತಿದೆ.


ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಬಡಗಲಿಂದ ವಿಪತ್ತನ್ನೂ ಘೋರನಾಶನವನ್ನೂ ಬರಮಾಡುವೆನು.


ಆಗ ಯೆಹೋವನು ನನಗೆ ಹೀಗೆ ಹೇಳಿದನು - ಈ ದೇಶನಿವಾಸಿಗಳೆಲ್ಲರ ಮೇಲೆ ಬಡಗಲಿಂದ ಕೇಡು ಉಕ್ಕಿ ಬರುವದು.


ಅವರಲ್ಲಿ ಅನೇಕರು ಎಡವಿ ಬಿದ್ದು ಭಂಗವಾಗುವರು, ಬೋನಿಗೆ ಸಿಕ್ಕಿ ವಶವಾಗುವರು.


ನಾನು ಲೋಕದಲ್ಲಿ ತಿರಿಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲವಿಲ್ಲ, ಬಲಿಷ್ಠರಿಗೆ ಯುದ್ಧದಲ್ಲಿ ಜಯವಾಗದು, ಜ್ಞಾನಿಗಳಿಗೆ ಅನ್ನ ಸಿಕ್ಕದು, ವಿವೇಕಿಗಳಿಗೆ ಧನ ಲಭಿಸದು, ಪ್ರವೀಣರಿಗೆ ದಯೆ ದೊರೆಯದು; ಕಾಲವೂ ಪ್ರಾಪ್ತಿಯೂ ಯಾರಿಗೂ ತಪ್ಪಿದ್ದಲ್ಲ ಎಂದು ತಿಳಿದುಕೊಂಡೆನು.


ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು ತಾವೇ ನೆಲಕ್ಕೆ ಬಿದ್ದುಹೋದರು.


ತುಂಬಿತುಳುಕುವ ವ್ಯೂಹಗಳೂ ದೇವರ ನಿಬಂಧನಾಧಿಪತಿಯೂ ಅವನ ರಭಸಕ್ಕೆ ಸಿಕ್ಕಿ ಹೊಡೆದುಕೊಂಡು ಹೋಗಿ ಭಂಗವಾಗುವರು.


ಅವನ ಕಾಲದಲ್ಲಿ ಐಗುಪ್ತದ ಅರಸನಾದ ಫರೋಹ ನೆಕೋ ಎಂಬವನು ಅಶ್ಶೂರದ ಅರಸನಿಗೆ ವಿರೋಧವಾಗಿ ಯುದ್ಧಮಾಡುವದಕ್ಕೋಸ್ಕರ ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಕೂಡಲೆ ಅವನಿಂದ ಹತನಾದನು.


ಬಾಬೆಲಿನ ಅರಸನು ಐಗುಪ್ತದ ಹಳ್ಳಕ್ಕೂ ಯೂಫ್ರೇಟೀಸ್ ನದಿಗೂ ಮಧ್ಯದಲಿದ್ದ ಐಗುಪ್ತ ರಾಜನ ಎಲ್ಲಾ ದೇಶವನ್ನು ಸ್ವಾಧೀನಮಾಡಿಕೊಂಡನು. ಅಂದಿನಿಂದ ಐಗುಪ್ತದ ಅರಸನು ತನ್ನ ದೇಶದಿಂದ ಈಚೆಗೆ ಬರಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು