ಯೆರೆಮೀಯ 46:8 - ಕನ್ನಡ ಸತ್ಯವೇದವು J.V. (BSI)8 ಐಗುಪ್ತವೇ ನೈಲಿನಂತೆ ಉಬ್ಬಿದೆ; ಐಗುಪ್ತವೆಂಬ ಪ್ರವಾಹವೇ ನೈಲಿನ ಶಾಖೆಗಳ ಹಾಗೆ ತುಂಬಿ ತುಳುಕುತ್ತದೆ; ನಾನು ಉಬ್ಬಿಕೊಂಡು ಲೋಕದಲ್ಲೆಲ್ಲಾ ಹಬ್ಬುವೆನು, ಪಟ್ಟಣವನ್ನು ಪಟ್ಟಣನಿವಾಸಿಗಳನ್ನು ನಾಶಮಾಡುವೆನು ಅಂದುಕೊಳ್ಳುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಐಗುಪ್ತವೇ ನೈಲ್ ನದಿಯಂತೆ ಉಬ್ಬಿದೆ; ಐಗುಪ್ತವೆಂಬ ಪ್ರವಾಹವೇ ನೈಲ್ ನದಿಯ ಶಾಖೆಗಳ ಹಾಗೆ ತುಂಬಿ ತುಳುಕುತ್ತದೆ; ‘ನಾನು ಉಬ್ಬಿಕೊಂಡು ಲೋಕದಲ್ಲೆಲ್ಲಾ ಹಬ್ಬುವೆನು, ಪಟ್ಟಣವನ್ನು ಪಟ್ಟಣದ ನಿವಾಸಿಗಳನ್ನು ನಾಶಮಾಡುವೆನು’ ಅಂದುಕೊಳ್ಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಈಜಿಪ್ಟ್ ನದಿ ಉಬ್ಬಿದೆ, ನೈಲ್ ನದಿಯಂತೆ ಈಜಿಪ್ಟೆಂಬ ಪ್ರವಾಹವೇ ತುಂಬಿ ತುಳುಕುತ್ತಿದೆ ನೈಲಿನ ಶಾಖೆಗಳಂತೆ, ‘ನಾನು ಉಬ್ಬಿಕೊಂಡು ಲೋಕದೊಳಗೆಲ್ಲಾ ಹಬ್ಬುವೆನು ನಗರಗಳನ್ನೂ ಅವುಗಳ ನಿವಾಸಿಗಳನ್ನೂ ನಾಶಮಾಡುವೆನು’ ಎಂದುಕೊಳ್ಳುತ್ತಿರುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಭೋರ್ಗರೆಯುವ ನೈಲ್ ನದಿಯಂತೆ ಈಜಿಪ್ಟ್ ಬರುತ್ತಿದೆ. ಬಲಿಷ್ಠವಾಗಿಯೂ ಮತ್ತು ರಭಸವಾಗಿಯೂ ಹರಿಯುವ ನದಿಯಂತೆ ಬರುತ್ತಿದೆ. ‘ನಾನು ಬಂದು ಭೂಮಿಯ ಮೇಲೆಲ್ಲ ವ್ಯಾಪಿಸಿಕೊಳ್ಳುವೆನು. ನಾನು ನಗರಗಳನ್ನೂ ಅಲ್ಲಿದ್ದ ಜನರನ್ನೂ ನಾಶಮಾಡುವೆನು’ ಎಂದು ಈಜಿಪ್ಟ್ ಹೇಳುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಈಜಿಪ್ಟ್ ನೈಲ್ ನದಿಯ ಪ್ರಳಯದ ಹಾಗೆ ಏರುತ್ತದೆ; ಅದರ ನೀರು ನದಿಗಳ ಹಾಗೆ ಕದಲುತ್ತವೆ; ‘ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ; ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ,’ ಎಂದು ಅವಳು ಹೇಳುತ್ತಾಳೆ. ಅಧ್ಯಾಯವನ್ನು ನೋಡಿ |